ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು

ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಲು-ಸಾಲು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯುತ್ತಿದ್ದಾರೆ.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು
Follow us
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 9:14 AM

ತುಮಕೂರು: ಈಗಾಗಲೇ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡು ಪಕ್ಷದಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಕ್ಷೇತ್ರದ ಜೆಡಿಎಸ್​ ಶಾಸಕ ಎಸ್ ಆರ್ ಶ್ರೀನಿವಾಸ್ (Gubbi MLA SR Srinivas) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಂದರೆ ಮಾರ್ಚ್ 27ರಂದು ಸೋಮವಾರ ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ್(SR Srinivas) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬಳಿಕ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ‌ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್ ಆರ್ ಶ್ರೀನಿವಾಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ​ ಗುಬ್ಬಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಆದ್ರೆ, ಗುಬ್ಬಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಇನ್ನು ಈ ಬಗ್ಗೆ ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿರುವ ಜೆಡಿಎಸ್‌ ಉಚ್ಛಾಟಿತ ಶಾಸಕ ಶ್ರೀನಿವಾಸ್, ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಇಂದೇ ರಾಜೀನಾಮೆ ಕೊಡಬೇಕಿತ್ತು, ಆದ್ರೆ ಸ್ಪೀಕರ್​ ಇರಲಿಲ್ಲ. ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ

ಇನ್ನು ಶ್ರೀನಿವಾಸ್ ಅವರು ಅಧಿಕೃತವಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿ.ಹೊಸಹಳ್ಳಿ ಗ್ರಾಮದಲ್ಲಿ ಸಾಲು ಸಾಲು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು JDS ಮುಖಂಡರು, ಕಾರ್ಯಕರ್ತ, ಜೆಡಿಎಸ್​​​ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್​ಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಂಡಾಯದ ಎಚ್ಚರಿಕೆ :

ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕದಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಒಂದು ವೇಳೆ ಶ್ರೀನಿವಾಸ್ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಅವರನ್ನು ಸೋಲಿಸುವ ಪಣತೊಟ್ಟಂತಿದೆ. ಈ ಮೂಲಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯ ಫಿಕ್ಸ್ ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೂಡಾ ರವಾನಿಸಿದ್ದಾರೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು ಈ ಪೋಸ್ಟರ್ ಮೂಲಕ ಸಂದೇಶ ಸಾರಿದ್ದರು. ಪ್ರಸನ್ನ ಕುಮಾರ್ ಹಾಗೂ ಹೊನ್ನಗಿರಿ ಗೌಡ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ