ಗುಜರಾತ್ ಮಾದರಿಯೇ ಬಿಜೆಪಿ ಸೋಲಿಗೆ ಕಾರಣ: ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಗುಜರಾತ್ ಮಾದರಿಯೇ ಬಿಜೆಪಿ ಸೋಲಿಗೆ ಕಾರಣ: ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Follow us
Rakesh Nayak Manchi
|

Updated on:May 16, 2023 | 6:24 PM

ದಾವಣಗೆರೆ: ಕರ್ನಾಟಕದಲ್ಲಿ ಬಿಜೆಪಿ (BJP) ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿ ಕೈಗೊಂಡ ತಪ್ಪು ನಿರ್ಧಾರ, ಗುಜರಾತ್​ ಮಾದರಿ ಪ್ರಯೋಗ ಹಾಗೂ ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಕಾಂಗ್ರೆಸ್​ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನರು ಹೇಳುತ್ತಿದ್ದರು. ಆವಗಲೇ ನಮಗೆ ಸೋಲಾಗಿಯಿತು ಎಂದರು.

ಇದನ್ನೂ ಓದಿ: ಸೋಲಿನಿಂದ ದೃತಿಗೆಟ್ಟ ಮಾಜಿ ಶಾಸಕ: ಕ್ಷೇತ್ರದಾದ್ಯಂತ ಕಾಮಗಾರಿ ಸ್ಥಳಕ್ಕೆ ಸುತ್ತುತ್ತಿರುವ ರೇಣುಕಾಚಾರ್ಯ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದು ಹೇಳಿದ ರೇಣುಕಾಚಾರ್ಯ, ತನ್ನ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಈ ಸೋಲು ತೀವ್ರ ಬೇಸರವನ್ನು ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ದಲಿತರಿಗೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮಾಜಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ನಾಯಕರಿದ್ದಾರೆ. ಆದರೆ ಇಂತಹ ಪ್ಲಾನ್ ಬಿಜೆಪಿಯಲ್ಲಿ ಮಾಡಲೇ ಇಲ್ಲ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Tue, 16 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ