AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gundlupete Election Results: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ

Gundlupet Assembly Election Result 2023 Live Counting Updates: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆರ್ ನರೇಂದ್ರ, ಬಿಜೆಪಿಯಿಂದ ಡಾ. ಪ್ರೀತಮ್ ನಾಗಪ್ಪ ಹಾಗೂ ಜೆಡಿಎಸ್​ನಿಂದ ಮಂಜುನಾಥ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Gundlupete Election Results: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ
ಕಾಂಗ್ರೆಸ್​​, ಬಿಜೆಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: Rakesh Nayak Manchi|

Updated on: May 13, 2023 | 4:10 AM

Share

Gundlupete Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಗುಂಡ್ಲುಪೇಟ ವಿಧಾನಸಭಾ ಕ್ಷೇತ್ರದಲ್ಲಿ (Gundlupet Assembly Constituency) ಕಾಂಗ್ರೆಸ್​ನಿಂದ ಕೆ.ಎಂ ಗಣೇಶ್​ ಪ್ರಸಾದ್​​ ಅವರು ಕಣದಲ್ಲಿದ್ದರೇ, ಬಿಜೆಪಿಯಿಂದ ಸಿಎಸ್​ ನಿರಂಜನ್​ ಕುಮಾರ್​ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್​ನಿಂದ ಕಡಬೂರ್​ ಮಂಜುನಾಥ್​​​ ಸ್ಪರ್ಧೆ ಮಾಡಿದ್ದಾರೆ.

2018ರ ಸಾರ್ವತ್ರಿಕ ವಿಧಾನ ಸಭಾ ಚುನಾ­ವಣೆಯಲ್ಲಿ ಬಿಜೆಪಿಯ ಸಿ.ಎಸ್‌.ನಿರಂಜನ ಕುಮಾರ್‌ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಗುಂಡ್ಲುಪೇಟೆ ವಿಧಾನ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆಲುವು ಸಾಧಿಸಿ ಶಾಸಕ, ಸಚಿವರಾಗಿದ್ದ ದಿ.ಹೆಚ್‌.ಎಸ್‌.ಮಹದೇವಪ್ರಸಾದ್‌ ಕುಟುಂಬ ಸದಸ್ಯರು ಕಳೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲುಂಡರು. ನಂತರ ಅಧಿಕಾರ ಇಲ್ಲದಿದ್ದರೂ ಸಹ ಕಳೆದ 5 ವರ್ಷಗಳಿಂದ ಮಾಜಿ ಸಚಿವ ದಿವಂಗತ ಎಚ್‌.ಎಸ್‌.ಮಹದೇವಪ್ರಸಾದ್‌ ಸುಪುತ್ರ ಎಚ್‌.ಎಂ.ಗಣೇಶಪ್ರಸಾದ್‌ ಕ್ಷೇತ್ರದ ಮತದಾರರ ಸಂಪರ್ಕದಲ್ಲಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಬೇಕು ಎಂಬ ನಿರೀಕ್ಷೆಯಲ್ಲಿದ್ದಾರೆ. ಗಣೇಶ್‌ ಪ್ರಸಾದ್‌ ಅವರ ಸ್ಪರ್ಧೆಯಿಂದ ಕ್ಷೇತ್ರದಿಂದ ಅದು ಒಂದೇ ಕುಟುಂಬದ ಮೂರನೇ ತಲೆಮಾರು ಚುನಾವಣಾ ರಣರಂಗದಲ್ಲಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಇದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್