Haliyal Election 2023 Winner: ಹಳಿಯಾಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: 9ನೇ ಬಾರಿ ಗೆಲುವು ಸಾಧಿಸಿದ ಆರ್​​ ವಿ ದೇಶಪಾಂಡೆ 

RV Deshpande: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿರುವ ಹಾಲಿ ಮತ್ತು ಹಿರಿಯರಾದ ಆರ್​ ವಿ ದೇಶಪಾಂಡೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 

Haliyal Election 2023 Winner: ಹಳಿಯಾಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: 9ನೇ ಬಾರಿ ಗೆಲುವು ಸಾಧಿಸಿದ ಆರ್​​ ವಿ ದೇಶಪಾಂಡೆ 
ಆರ್​ವಿ ದೇಶಪಾಂಡೆ
Follow us
ಕಿರಣ್ ಹನುಮಂತ್​ ಮಾದಾರ್
| Updated By: Digi Tech Desk

Updated on:May 13, 2023 | 1:03 PM

Haliyala Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್​ ಭದ್ರಕೋಟೆಯಾಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ (Haliyal Assembly Constituency) ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿರುವ ಹಾಲಿ ಮತ್ತು ಹಿರಿಯರಾದ ಆರ್​ ವಿ ದೇಶಪಾಂಡೆ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಸತತ 8 ಬಾರಿ ಗೆದ್ದಿರುವ ಇವರು ಈ ಬಾರಿ 9ನೇ ಬಾರಿ ಗೆಲ್ಲುವ ಮೂಲಕ ಅತೀ ಹೆಚ್ಚು ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದ ಅಭ್ಯರ್ಥಿಗಳ ಸಾಲಿಗೆ ಸೇರಿದ್ದಾರೆ. ಇನ್ನು ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 61,577 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು.

ಜೆಪಿಯಿಂದ ಸುನೀಲ್​ ಹೆಗಡೆ ಸ್ಪರ್ಧಿಸಿದ್ದರು. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ​ ಪರವಾಗಿ ಕಣದಲಿದ್ದು, 56,437 ಮತಗಳನ್ನ ಪಡೆದು 5,140ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಸುನೀಲ್​ ಹೆಗಡೆ ಹೇಗಾದರೂ ಮಾಡಿ ಗೆಲುವು ಸಾಧಿಸಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಆದರೂ ಗೆಲುವು ಸಾಧಿಸಲಾಗಲಿಲ್ಲ.  ಇನ್ನು ಜೆಡಿಎಸ್​ ಅಭ್ಯರ್ಥಿಯಾಗಿ ಎಸ್​ ಎಲ್​ ಘೋಟ್ನೆಕರ್ ಇದೇ ಮೊದಲ ಬಾರಿ ಕಣಕ್ಕೀಳಿದಿದ್ದರು. ಇವರು ಈ ಹಿಂದೆ ಕಾಂಗ್ರೆಸ್​ನಿಂದ ಎಂಎಲ್​ಸಿ ಕೂಡ ಆಗಿದ್ದರು. ಜೊತೆಗೆ ಆರ್​ವಿ ದೇಶಪಾಂಡೆ ಅವರ ಬಲಗೈ ಬಂಟನೆಂದು ಕರೆಯಿಸಿಕೊಂಡಿದ್ದರು. ಆದರೆ ಗುರುವಿನ ವಿರುದ್ದವೇ ಸ್ಪರ್ಧೆ ಮಾಡುತ್ತಿರುವುದು ಚುನಾವಣಾ ಕಣವನ್ನ ರಂಗೇರುವಂತೆ ಮಾಡಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:50 pm, Sat, 13 May 23

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು