AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hangal Election 2023 Winner: ಹಾನಗಲ್​ನಲ್ಲಿ ಮತ್ತೊಮ್ಮೆ ಗೆದ್ದುಬೀಗಿದ ಕಾಂಗ್ರೆಸ್​ನ​ ಶ್ರೀನಿವಾಸ​ ಮಾನೆ

Srinivas Mane: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಹಾನಗಲ್​ ವಿಧಾನಸಭಾ ಕ್ಷೇತ್ರದ (Hangal Assembly Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆದ್ದುಬೀಗಿದ್ದಾರೆ.

Hangal Election 2023 Winner: ಹಾನಗಲ್​ನಲ್ಲಿ ಮತ್ತೊಮ್ಮೆ ಗೆದ್ದುಬೀಗಿದ ಕಾಂಗ್ರೆಸ್​ನ​ ಶ್ರೀನಿವಾಸ​ ಮಾನೆ
ಶ್ರೀನಿವಾಸ ಮಾನೆ
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 3:52 PM

Share

Hangal Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಹಾನಗಲ್​ ವಿಧಾನಸಭಾ ಕ್ಷೇತ್ರದ (Hangal Assembly Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆದ್ದುಬೀಗಿದ್ದಾರೆ. ಕಳೆದ ಬಾರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ,  ಕ್ಷೇತ್ರದಲ್ಲಿ ಉತ್ತಮ ಹಿಡಿತವನ್ನ ಸಾಧಿಸಿದ್ದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ 87,490 ಮತವನ್ನ ಪಡೆದು ಗೆದ್ದುಬೀಗಿದ್ದರು. ಈ ಬಾರಿ ಕೂಡ ಗೆಲುವನ್ನ ಸಾಧಿಸಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಶಿವರಾಜ್​ ಸಜ್ಜನರ ಸ್ಪರ್ಧಿಸಿದ್ದರು. ಈ ಹಿಂದೆ ನಡೆದಿದ್ದ ಉಪಚುನಾವಣೆಯಲ್ಲಿ 80,117 ಮತಗಳನ್ನ ಪಡೆದು 7,373 ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲ್ಲಬೇಕೆಂದು ಹರಸಾಹಸ ಪಟ್ಟಿದ್ದರು. ಜೊತೆಗೆ ಅಬ್ಬರದ ಪ್ರಚಾರ ಕೂಡ ಕೈಗೊಂಡಿದ್ದರು. ಇನ್ನು ಜೆಡಿಎಸ್​ನಿಂದ ಮನೋಹರ ತಹಶೀಲ್ದಾರ್ ಸ್ಪರ್ಧೆ ಮಾಡಿದ್ದು, ಇವರು ಈ ಹಿಂದೆ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಬರೋಬ್ಬರಿ 4 ಬಾರಿ ಗೆದ್ದಿದ್ದರು. ಆದರೂ ಇವರನ್ನ ಕಾಂಗ್ರೆಸ್​ ಕೈಬಿಟ್ಟಿತ್ತು. ಬಳಿಕ ಇವರು ಜೆಡಿಎಸ್​​ ಸೇರಿಕೊಂಡಿದ್ದು, ಜೊತೆಗೆ ಗೆಲ್ಲಬೇಕೆಂದು ಭರ್ಜರಿ ಪ್ರಚಾರ ಕೂಡ ಕೈಗೊಂಡಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಇದೀಗ ಕಾಂಗ್ರೆಸ್​ನ  ಶ್ರೀನಿವಾಸ್ ಮಾನೆ ಗೆಲುವಿನ ಮಂದಹಾಸ ಬಿರಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು