Harapanahalli Election Results: ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಪಕ್ಷೇತರ ಅಭ್ಯರ್ಥಿ ಲತಾಗೆ ಗೆಲುವು

Harapanahalli Assembly Election Result 2023 Live Counting Updates: 2013ರ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಎಂ ಪಿ ಪ್ರಕಾಶ್‌ ಪುತ್ರ ಎಂ.ಪಿ. ರವೀಂದ್ರ ಜಿ ಕರುಣಾಕರರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದರು. 2018ರ ಚುನಾವಣೆಯಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ಕಾಂಗ್ರೆಸ್‌ ಎಂ ಪಿ ರವೀಂದ್ರ ಅವರನ್ನು ಸೋಲಿಸಿ ಶಾಸಕರಾಗಿದ್ದರು.

Harapanahalli Election Results: ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಪಕ್ಷೇತರ ಅಭ್ಯರ್ಥಿ ಲತಾಗೆ ಗೆಲುವು
ಬಿಜೆಪಿಯ ಕರುಣಾಕರ ರೆಡ್ಡಿ
Follow us
ರಶ್ಮಿ ಕಲ್ಲಕಟ್ಟ
|

Updated on:May 13, 2023 | 7:20 PM

Harapanahalli Assembly Election Results 2023: ಹರಪನಹಳ್ಳಿ (Harapanahalli Constituency) ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್ ಅವರಿಗೆ ಮತದಾರ ಮಣೆಹಾಕಿದ್ದಾರೆ. ಇದುವರೆಗೆ 15 ಚುನಾವಣೆಗಳು ನಡೆದಿದ್ದು, ಇದರಲ್ಲಿ 10 ಸಲ ಕಾಂಗ್ರೆಸ್‌, 2 ಸಲ ಪ್ರಜಾ ಸೋಸಿಯಲಿಸ್ಟ್‌ ಪಾರ್ಟಿ, ಪಕ್ಷೇತರ 1 ಸಲ, ಬಿಜೆಪಿ 2 ಸಲ ಅಧಿಕಾರ ಪಡೆದಿದೆ. ಲಿಂಗಾಯತ ಸಮುದಾಯದ ಮತಗಳು ಇಲ್ಲಿ ನಿರ್ಣಾಯಕವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ, ಕುರುಬ, ಮುಸ್ಲಿಂ ಮತದಾರರು ಕೂಡ ಪ್ರಬಲರಾಗಿದ್ದಾರೆ. 1967ರಿಂದ 2008ರವರೆಗೆ ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾಗಿದ್ದ ಹರಪನಹಳ್ಳಿ 2008ರಲ್ಲಿ ಪುನರ್‍‌ ವಿಂಗಡಣೆಗೊಂಡು ಸಾಮಾನ್ಯ ಕ್ಷೇತ್ರವಾಗಿ ಬದಲಾಗಿದೆ. 2018ರ ಚುನಾವಣೆಯಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ಗೆದ್ದು ಶಾಸಕರಾಗಿದ್ದರು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಂಪಿ ರವೀಂದ್ರ, ಜೆಡಿಎಸ್​​ ನಿಂದ ಸ್ಪರ್ಧಿಸಿದ್ದ ಕೊಟ್ರೇಶ್ ನಂತರದ ಸ್ಥಾನಗಳನ್ನು ಪಡೆದುಕೊಂಡಿದ್ದರು. ಈ ಬಾರಿ ಜೆಡಿಎಸ್ ನೂರ್ ಅಹಮ್ಮದ್ ಅವರನ್ನು ಕಣಕ್ಕಿಳಿಸಿದ್ದು, ಎಎಪಿ ನಾಗರಾಜ, ಕಾಂಗ್ರೆಸ್ ಕೊಟ್ರೇಶ್ ಮತ್ತು ಬಿಜೆಪಿ ಕರುಣಾಕರ ರೆಡ್ಡಿಯನ್ನು ಕಣಕ್ಕಿಳಿಸಿದೆ. ಪಕ್ಷೇತರ ಅಭ್ಯರ್ಥಿಯಾಗಿ ಲತಾ ಕಣಕ್ಕಿಳಿದಿದ್ದರು.

1999 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ ಟಿ ಪರಮೇಶ್ವರ ನಾಯ್ಕ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆದರು. 2004ರ ಚುನಾವಣೆಯಲ್ಲಿ ಟಿ ಪರಮೇಶ್ವರ ನಾಯ್ಕ್ 2ನೇ ಸಲ ಶಾಸಕರಾದರು. 2008ರಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯರಾದ ಎಂ. ಪಿ. ಪ್ರಕಾಶ್ ಸ್ಪರ್ಧೆ ಮಾಡಿದ್ದರು. ತೀವ್ರ ಜಿದ್ದಾಜಿದ್ದನಿಂದ ನಡೆದ ಚುನಾವಣೆಯಲ್ಲಿ ಕರಣಾಕರ ರೆಡ್ಡಿ ಗೆಲುವು ಸಾಧಿಸಿದ್ದರು.

2013ರ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಎಂ ಪಿ ಪ್ರಕಾಶ್‌ ಪುತ್ರ ಎಂ.ಪಿ. ರವೀಂದ್ರ ಜಿ ಕರುಣಾಕರರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದರು. 2018ರ ಚುನಾವಣೆಯಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ಕಾಂಗ್ರೆಸ್‌ ಎಂ ಪಿ ರವೀಂದ್ರ ಅವರನ್ನು ಸೋಲಿಸಿ ಶಾಸಕರಾಗಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:16 am, Sat, 13 May 23

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ