AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಕ್ಷೇತ್ರದ ಟಿಕೆಟ್​ ವಿಚಾರವಾಗಿ ಏನನ್ನೂ ಹೇಳುವುದಿಲ್ಲ, ಪದೇಪದೆ ಪ್ರಶ್ನಿಸಬೇಡಿ ಎಂದ ಹೆಚ್​ಡಿ ದೇವೇಗೌಡ

ಹಾಸನ ಕ್ಷೇತ್ರದ ಟಿಕೆಟ್​ ವಿಚಾರವಾಗಿ ಏನನ್ನೂ ಹೇಳುವುದಿಲ್ಲ. ಪದೇಪದೆ ಪ್ರಶ್ನಿಸಬೇಡಿ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.

ಗಂಗಾಧರ​ ಬ. ಸಾಬೋಜಿ
|

Updated on:Apr 04, 2023 | 8:04 PM

Share

ದೆಹಲಿ: ಹಾಸನ ಕ್ಷೇತ್ರದ ಟಿಕೆಟ್​ ವಿಚಾರವಾಗಿ ಏನನ್ನೂ ಹೇಳುವುದಿಲ್ಲ. ಪದೇಪದೆ ಪ್ರಶ್ನಿಸಬೇಡಿ ಎಂದು ದೆಹಲಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ (HD Deve Gowda) ಹೇಳಿದರು. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಇನ್ನೂ ಒಂದು ಪಟ್ಟಿ ಪ್ರಕಟಿಸಿಲ್ಲ. ಕಾಂಗ್ರೆಸ್​ನವರು 2ನೇ ಪಟ್ಟಿ ಪ್ರಕಟಿಸಲು ಹೆಣಗಾಡುತ್ತಿದ್ದಾರೆ. ಆದರೆ ಚುನಾವಣೆಗೂ ಮೊದಲೇ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ 97 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಹಾಸನ JDS ಅಭ್ಯರ್ಥಿ ವಿಚಾರದಲ್ಲಿ ನಾವು ನಿರ್ಧಾರ ಮಾಡುತ್ತೇವೆ. JDS ಎಷ್ಟು ಸ್ಥಾನ ಪಡೆಯಲಿದೆ ಎಂದು ಮತದಾರರು ನಿರ್ಧರಿಸುತ್ತಾರೆ ಎಂದು ಹೇಳಿದರು. ಒಂದು ಪ್ರಾದೇಶಿಕ ಪಕ್ಷಕ್ಕೆ ಯಾಕೆ ಇಷ್ಟೊಂದು ವಿರೋಧ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷವನ್ನು ಬೆಳೆಸುತ್ತಾರೆ. ಕರುಣಾನಿಧಿ ಕುಟುಂಬದಲ್ಲಿ ಏಳು ಜನ ಇದ್ದಾರೆ. ರಾಜ್ಯ ಸಭೆ, ಲೋಕಸಭೆ ಅಂತಾ ಬೇರೆ ಸ್ಥಾನದಲ್ಲಿದ್ದಾರೆ. ಒಂದು ಪ್ರಾದೇಶಿಕ ಪಕ್ಷವನ್ನು ಕೊಲ್ಲಲ್ಲು ಯಾಕೆ ಇಷ್ಟು ಪ್ರಯತ್ನ. ಈ ಪ್ರಶ್ನೆಯನ್ನು ಕಾಂಗ್ರೆಸ್, ಬಿಜೆಪಿ ತಮಿಳುನಾಡಿನಲ್ಲಿ ಕೇಳಲಿ ಎಂದು ಕಿಡಿಕಾರಿದರು.

ವರುಣದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ನಾನು ಮಾತನಾಡುವುದಿಲ್ಲ

ವರುಣದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ನಾನು ಮಾತನಾಡುವುದಿಲ್ಲ. ವರುಣದಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕೆಂದು ನಿರ್ಧಾರವಾಗಿತ್ತು. ಆದರೆ ವರುಣದಲ್ಲಿ ವಿಜಯೇಂದ್ರ ನಿಲ್ಲಲ್ಲ ಎಂದು ಬಿಎಸ್​ವೈ ಹೇಳಿದ್ದಾರೆ. ವರುಣದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್​ ಇದೆ.

ಇದನ್ನೂ ಓದಿ: HD Kumaraswamy: ಸುಧಾಕರ್ ಹಣದ ದಾಹ ಪ್ರತಿ ಹಳ್ಳಿಗೂ ಗೊತ್ತಿದೆ; ಹೆಚ್​ಡಿ ಕುಮಾರಸ್ವಾಮಿ ತಿರುಗೇಟು

ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ನಡ್ಡಾ, ಗೃಹ ಸಚಿವ ಶಾ ಇದ್ದಾರೆ. ಅವರು ಏನು ಹೇಳಿದ್ದಾರೆ ಗೊತ್ತಿಲ್ಲ, ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ಈ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಯಾರ ಜೊತೆಗೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಆತ್ಮಕಥೆಯ ಪುಸ್ತಕವನ್ನು ಸಂಸದರಿಗೆ ನೀಡಿದ್ದೇನೆ

ಆತ್ಮಕಥೆಯ ಪುಸ್ತಕವನ್ನು ಸಂಸದರಿಗೆ ಕೊಡಬೇಕಿತ್ತು. 90 ಪರ್ಸೆಂಟ್ ಸಂಸದರಿಗೆ ಕೊಟ್ಟಿದ್ದೇನೆ. ರಾಜ್ಯಸಭಾ, ಲೋಕಸಭಾ ಸ್ಪೀಕರ್​ಗೆ ಪುಸ್ತಕ ಕೊಟ್ಟಿದ್ದೇನೆ. ರಾಷ್ಟ್ರಪತಿಗಳಿಗೂ ಪುಸ್ತಕ ಕೊಟ್ಟಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಡೊಕೆ ಸಾಧ್ಯವಾಗಿಲ್ಲ. ಅವರೊಬ್ಬರಿಗೆ ಬಿಟ್ಟು ಎಲ್ಲಾ ಕೇಂದ್ರ ಸಚಿವರಿಗೆ ನಾನೇ ಸಹಿ ಮಾಡಿ ಪುಸ್ತಕವನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: K Sudhakar: ಜೆಡಿಎಸ್ 120 ಸ್ಥಾನ ಗೆದ್ದರೆ ರಾಜಕೀಯವಾಗಿ ನಿವೃತ್ತಿ; ಸಚಿವ ಕೆ ಸುಧಾಕರ್

ಕೆಲವು ಕಡೆ ಜೆಡಿಎಸ್ ಬಲಿಷ್ಠವಾಗಿಲ್ಲ; ಹೆಚ್​ಡಿಕೆ

ರಾಜ್ಯದ ಕೆಲವು ಕಡೆಗಳಲ್ಲಿ ಜೆಡಿಎಸ್​ ಸ್ಪಲ್ಪ ದುರ್ಬಲವಾಗಿದೆ, ಅದನ್ನು ಒಪ್ಪಿಕೊಳ್ಳುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲಿ ನಮಗೆ ಮತ ಹಾಕಲು ಜನ ಸಿದ್ಧರಿದ್ದಾರೆ. ಅವರನ್ನು ಸಮರ್ಥವಾಗಿ ಸೆಳೆಯಲು ಜೆಡಿಎಸ್ ಅಭ್ಯರ್ಥಿಗಳ ಕೊರತೆಯಿದೆ. ಅಂತಹ ಕಡೆ ಮತವಾಗಿ ಪರಿವರ್ತಿಸುವ ನಾಯಕರು ಬಂದಾಗ ಚಿಂತನೆ ಮಾಡಲಾಗುವುದು.

ಕೆಲವೆಡೆ ಸಂಘಟನೆ, ಮತವಾಗಿ ಪರಿವರ್ತಿಸುವ ಅಭ್ಯರ್ಥಿ ಕೊರತೆಯಿದೆ. ಇದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಕಾಂಗ್ರೆಸ್ ಹಾಗೂ ಬಿಜೆಪಿಯವರು ಅವರ ದೌರ್ಬಲ್ಯ ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ? ಅವರ ಪರಿಸ್ಥಿತಿ ಏನು ಎಂಬುದು ನನಗೂ ತಿಳಿದಿದೆ. ಸಮರ್ಥವಾದ ಅಭ್ಯರ್ಥಿಗಳು ಇರುವ ಕಡೆ ಘೋಷಣೆ ಮಾಡಿದ್ದೇವೆ. ಮತ ಪರಿವರ್ತಿಸುವುದಾಗಿ ಬರುವವರಿದ್ದರೆ ಜೆಡಿಎಸ್​ಗೆ ಸೇರಿಸಿಕೊಳ್ಳುತ್ತೇವೆ ಎಂದು ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎರಡನೇ ಪಟ್ಟಿಯಲ್ಲೇ ಹಾಸನ ಟಿಕೆಟ್ ಘೋಷಣೆ

ಜೆಡಿಎಸ್​ನ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲೇ ಹಾಸನ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಲಾಗುವುದು. ಆ ಬಗ್ಗೆ ನಮಗಿಂತ ಹೆಚ್ಚಾಗಿ ನಿಮಗೇ ಕುತೂಹಲವಿದೆ. ಹಾಸನ ಬಿಟ್ಟು ಉಳಿದ ಕಡೆಗಳ ಪಟ್ಟಿ ಬಿಡುಗಡೆ ಮಾಡಿದ್ರೆ ಏನೇನೋ ಕತೆ ಶುರುವಾಗುತ್ತದೆ. ಹೀಗಾಗಿ 2ನೇ ಪಟ್ಟಿಯಲ್ಲೇ ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Tue, 4 April 23