AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ ಹೊಡೆಯುತ್ತಾ ಎಂದು ಟಿಕೆಟ್​ ಆಕಾಂಕ್ಷಿ ಬಳಿ ಕೇಳಿತ್ತಾ ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ ಹೆಚ್​ಡಿಕೆ

ಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್​ ಕಾರ್ಯಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡು ಒಂದು ಕಾಲು ಹೊರಗಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಲಿಂಗೇಗೌಡ ಅವರಿಗೆ ಪರ್ಯಾಯ ಅಭ್ಯರ್ಥಿಯನ್ನು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಲಕ್ ಹೊಡೆಯುತ್ತಾ ಎಂದು ಟಿಕೆಟ್​ ಆಕಾಂಕ್ಷಿ ಬಳಿ ಕೇಳಿತ್ತಾ ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ ಹೆಚ್​ಡಿಕೆ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Feb 12, 2023 | 6:48 PM

Share

ಹಾಸನ: ಜಿಲ್ಲೆಯ ಅರಸೀಕೆರೆ ಹಾಗೂ ಹಾಸನ(Hassan) ಕ್ಷೇತ್ರಗಳ ವಿಧಾನಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ದಳಪತಿಗಳ ಮಧ್ಯೆ ನಡೆಯುತ್ತಿರುವ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇಂದು(ಫಬ್ರವರಿ 12) ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹಾಸನ ಜಿಲ್ಲಾ ಪ್ರವಾಸ ಕೈಗೊಂಡು ಎಲ್ಲಾ ಗೊಂದಲಗಳಿಗೆ ತೆರೆಳೆದಿದ್ದಾರೆ. ಹಾಸನ ಟಿಕೆಟ್​ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತೊಡೆತಟ್ಟಿದ್ದ ರೇವಣ್ಣ ಕುಟುಂಬ ಶಾಂತವಾಗಿದ್ದು, ಅಂತಿಮವಾಗಿ ಕುಮಾರಸ್ವಾಮಿ ನಿರ್ಧಾರಕ್ಕೆ ಬದ್ಧವಾಗಿದೆ. ಇನ್ನು ಕುಮಾರಸ್ವಾಮಿ ಪರೋಕ್ಷವಾಗಿ ಅರಸೀಕೆರೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಅರಸೀಕೆರೆ ಕಣದ ಟಿಕೆಟ್ ಗೊಂದಲಕ್ಕೆ ಅಂತ್ಯ ಹಾಡಿದ್ದಾರೆ. ಆದ್ರೆ, ಹಾಸನ ಟಿಕೆಟ್​ ಮಾತ್ರ ಇನ್ನೂ ನಿಗೂಢವಾಗಿ ಇಟ್ಟಿದ್ದಾರೆ.

ಇದನ್ನೂ ಓದಿ: ನನ್ನ ಮುಂದಿನ ನಡೆ ಕ್ಷೇತ್ರದ ಮತದಾರರು ತೀರ್ಮಾನಿಸುತ್ತಾರೆ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ

ಹೌದು…ಹಾಸನ ಹಾಗೂ ಅರಸೀಕೆರೆ ವಿಧಾನಸಭೆ ಟಿಕೆಟ್​ ಫೈಟ್ ಜೋರಾದ ಹಿನ್ನೆಲೆಯಲ್ಲಿ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರು ಇಂದು (ಫೆಬ್ರವರಿ 12) ಹಾಸನ ಜಿಲ್ಲಾ ಪ್ರವಾಸ ಕೈಗೊಂಡು, ಅರಸೀಕೆರೆಯಲ್ಲಿ ಬೃಹತ್ ಸಮಾವೇಶ ಮಾಡಿದರು. ಈ ಮೂಲಕ ಶಕ್ತಿ ಪ್ರದರ್ಶನ ಮಾಡಿ ಸ್ವಪಕ್ಷದ ಹಾಲಿ ಶಾಸಕ ಶಿವಲಿಂಗೇಗೌಡ ವಿರುದ್ಧ ಸಮರ ಸಾರಿದರು. ಅಲ್ಲದೇ ಈ ಸಮಾವೇಶದಲ್ಲಿ ಬಾಣಾವರ ಅಶೋಕ್ ಅವರನ್ನು ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದರು. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾಗ ತಮ್ಮ ಪಕ್ಕದಲ್ಲಿ ನಿಂತಿದ್ದ ಅಶೋಕ್ ರತ್ತ ತಿರುಗಿ ಲಕ್ ಹೊಡೆಯುತ್ತಾ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಣಾವರ ಅಶೋಕ್​ಗೆ ಟಿಕೆಟ್​ ಎಂದರು. ಇದರೊಂದಿಗೆ ಹಾಲಿ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಅವರಿಗೆ ಶಾಕ್ ಕೊಟ್ಟು ಅರಸೀಕೆರೆ ಟಿಕೆಟ್​ ಗೊಂದಲಗಳಿಗೆ ಹೆಚ್​ಡಿಕೆ ಪೂರ್ಣವಿರಾಮ ಇಟ್ಟರು.

ಪರೋಕ್ಷವಾಗಿ ಅಶೋಕ್​ ಅರಸೀಕೆರೆ ಅಭ್ಯರ್ಥಿ ಎಂದು ಹೆಚ್​ಡಿಕೆ ಘೋಷಣೆ ಮಾಡಿದ್ದು, ಇದೀಗ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಸೇರ್ತಾರಾ? ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ? ಎನ್ನುವುದೇ ಕಾದುನೋಡಬೇಕಿದೆ. ಮೂಲಗಳ ಪ್ರಕಾರ ಶಿವಲಿಂಗೇಗೌಡ ಅವರು ಕಾಂಗ್ರೆಸ್​ ಸೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, 3 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಭಾಗವಹಿಸಿಲ್ಲ. ಹೀಗಾಗಿ ಅಲ್ಟರ್​ನೇಟಿವ್ ನಾವು ಮಾಡಲೇ ಬೇಕಲ್ಲ. ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಪಕ್ಷದ ಚಿಹ್ನೆ ಅಡಿ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ.ಹೀಗಾಗಿ ಹೆಸರು ಘೋಷಿಸೋ ಅವಶ್ಯಕತೆಯೇ ಇಲ್ಲ. ಈಗಾಗಲೇ ಎಲ್ಲರಿಗೂ ಗೊತ್ತಿರೋ ವಿಚಾರ ಆಗಿದೆ ಎಂದು ಸ್ಪಷ್ಟಪಡಿಸಿದರು.

Published On - 6:46 pm, Sun, 12 February 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ