ಕೋಲಾರ: ಚುನಾವಣಾ ಅಧಿಕಾರಿಗಳಿಂದ ಹೆಚ್ ಡಿ ಕುಮಾರಸ್ವಾಮಿ ಹೆಲಿಕಾಪ್ಟರ್ ತಪಾಸಣೆ
ಪಂಚರತ್ನ ಯಾತ್ರೆ ಸಂಬಂಧ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಕೋಲಾರ: ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (Model Code Of Conduct) ಜಾರಿಯಲ್ಲಿದ್ದು, ಚುನಾವಣಾ ಅಧಿಕಾರಿಗಳು (Election Commission Officers) ರಾಜಕೀಯ ನಾಯಕರ ಮತ್ತು ಬೆಂಬಲಿಗರ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪಂಚರತ್ನ ಯಾತ್ರೆ (Pancharatna Yatra) ಸಂಬಂಧ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರ (HD Kumaraswamy) ಹೆಲಿಕಾಪ್ಟರ್ನ್ನು (Helicopter) ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ನಂತರ ಹೆಚ್.ಡಿ ಕುಮಾರಸ್ವಾಮಿ ಅಲಂಗೂರಿಗೆ ತೆರಳಿ ಮಾಜಿ ಸಚಿವ ದಿವಂಗತ ಶ್ರೀನಿವಾಸ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.
ಇದನ್ನೂ ಓದಿ: ಶಾಸಕಿ ಸೌಮ್ಯಾರೆಡ್ಡಿ ಕಾರು ಸೀಜ್ ಪ್ರಕರಣ; ಕಾರು ಚಾಲಕನ ವಿರುದ್ದ FIR ದಾಖಲು
ಸಿಎಂ ಬೊಮ್ಮಾಯಿ ಕಾರು ತಪಾಸಣೆ
ಬೆಂಗಳೂರು ಗ್ರಾಮಾಂತರ: 2023 ರ ಮಾರ್ಚ್ 31 ರಂದು ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್ಪೋಸ್ಟ್ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ತಪಾಸಣೆ ಮಾಡಿದ್ದರು. ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ ತಂಡವು ಸಿಎಂ ಬೊಮ್ಮಾಯಿ ಅವರ ಕಾರನ್ನು ಪರಿಶೀಲಿಸಿದ್ದರು. ಯಾವುದೇ ರೀತಿಯ ಆಕ್ಷೇಪಾರ್ಹ ವಸ್ತುಗಳು ಸಿಗದ ಹಿನ್ನೆಲೆ ತಪಸಣೆ ಮಾಡಿ ಕಳುಹಿಸಿದ್ದರು.
ಭಾರತದ ಚುನಾವಣಾ ಆಯೋಗ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿತ್ತು. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು. ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ
ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:19 pm, Mon, 10 April 23