Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023: ಏಪ್ರಿಲ್ 19ರಂದು ನಾಮಪತ್ರ ಸಲ್ಲಿಕೆಗೆ ಕುಮಾರಸ್ವಾಮಿ ಮುಹೂರ್ತ ನಿಗದಿ

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದಲೇ ನಾಮಪತ್ರ ಸಲ್ಲಿಕೆ ಮುಹೂರ್ತ ನಿಗದಿ ಮಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಯಾವಾಗ ನಾಮಪತ್ರ ಸಲ್ಲಿಸಲಿದ್ದಾರೆ? ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ

Karnataka Assembly Polls 2023: ಏಪ್ರಿಲ್ 19ರಂದು ನಾಮಪತ್ರ ಸಲ್ಲಿಕೆಗೆ ಕುಮಾರಸ್ವಾಮಿ ಮುಹೂರ್ತ ನಿಗದಿ
HD Kumaraswamy
Follow us
ರಮೇಶ್ ಬಿ. ಜವಳಗೇರಾ
|

Updated on:Apr 03, 2023 | 2:04 PM

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನಾಂಕ ಪ್ರಕಟವಾಗಿದ್ದು, ಇದೇ ಮೇ.10ರಂದು ಮತದಾನಸ ನಡೆಯಲಿದೆ. ಇನ್ನು ಏಪ್ರಿಲ್‌ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಏಪ್ರಿಲ್ 19ರಂದು ನಾಮಪತ್ರ (Nomination) ಸಲ್ಲಿಕೆಗೆ ಮುಹೂರ್ತ ನಿಗದಿ ಮಾಡಿಕೊಂಡಿದ್ದಾರೆ. ಹೌದು…ಇಂದು(ಏಪ್ರಿಲ್ 03) ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಏಪ್ರಿಲ್ 19ರಂದು ನಾನು ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಹಾಗೇ ಏಪ್ರಿಲ್ 20 ಹಾಗೂ 21ಎರಡು ದಿನಗಳ ಕಾಲ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಏ.17ರಂದು ಪುತ್ರ ನಿಖಿಲ್ ರಾಮನಗರದಲ್ಲಿ ನಾಮಪತ್ರ ಸಲ್ಲಿಸುತ್ತಾನೆ ಎಂದರು.

ಇದನ್ನೂ ಓದಿ: Karnataka Assembly Polls 2023: ಇಂದು ಜೆಡಿಎಸ್​ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ, ಹಾಸನ ಟಿಕೆಟ್ ಯಾರಿಗೆ?

ಚನ್ನಪಟ್ಟಣ ಕ್ಷೇತ್ರದ ಜನತೆ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಮನೆ ಮಗನ ರೀತಿಯಲ್ಲಿ ನನಗೆ ಆಶೀರ್ವಾದ ಮಾಡುತ್ತಾರೆ. ರಾಮನಗರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ನಿಮ್ಮ ಮನೆ ಮಗನನ್ನ ಬಿಟ್ಟು ಬೇರೆ ಯಾರೂ ಸಿಎಂ ಆಗುವುದಕ್ಕೆ ಆಗಲ್ಲ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ ಪಂಚರತ್ನ ರತಯಾತ್ರೆ ಯಶಸ್ವಿಯಾಗಿದ್ದು, ಎಲ್ಲಾ ಭಾಗದಲ್ಲೂ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಕೆಲ ಭಿನ್ನಾಭಿಪ್ರಾಯ ಇರಬಹುದು. ಅದನ್ನ ಕೂತು ಮಾತನಾಡಿ ಸರಿಪಡಿಸಿಕೊಳ್ಳಬಹುದು. ನನಗೆ ಸಂಪೂರ್ಣ ವಿಶ್ವಾಸ ಇದೆ. ಈ ಬಾರಿಯೂ ಗೆಲ್ಲುತ್ತೇವೆ. ಆದರೆ ಕೆಲವರು ಆತಂಕ ವ್ಯಕ್ತಪಡಿಸಿದ್ರು. ನಿಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಅಂದರು. ಆದರೆ ಅವರಿಗೆ ನಾನು ಒಂದೇ ಮಾತು ಹೇಳಿದ್ದೇನೆ. ಈ ಬಾರಿ ನಾನು ಒಂದೇ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಎಂದು. ಚನ್ನಪಟ್ಟಣದಲ್ಲಿ ನಮ್ಮ ಶಕ್ತಿ ದೊಡ್ಡಮಟ್ಟದಲ್ಲಿದೆ. ಚನ್ನಪಟ್ಟಣಕ್ಕೆ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ ಎಂದರು.

ಮೈತ್ರಿ ಸರ್ಕಾರದಲ್ಲಿ ದೊಡ್ಡ ದೊಡ್ಡ ಸವಾಲುಗಳಿದ್ದವು. ರೈತರ ಸಾಲ ಮನ್ನಾ ಮಾಡಿದ್ದೆ. ಕಾಂಗ್ರೆಸ್ ಒತ್ತಡದ ನಡುವೆಯೂ ಉತ್ತಮ ಆಡಳಿತ ಕೊಟ್ಟಿದ್ದೆ, ಆಗ ಚನ್ನಪಟ್ಟಣದ ಕಡೆ ಗಮನಕೊಡುತ್ತಿಲ್ಲ ಎಂಬ ಅಪಪ್ರಚಾರ ಮಾಡಿದ್ರು. ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು ಸರ್ಕಾರ ತೆಗೆದ್ರು ಎಂದು ಪರೋಕ್ಷವಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್​ ವಿರುದ್ಧ ಕಿಡಿಕಾರಿದರು.

ಈಗ ಫ್ರೀ ಪೋಲ್ ಸರ್ವೆಗಳು ನಡೆಯುತ್ತಿವೆ. ದುಡ್ಡು ಕೊಟ್ರೆ ಜೆಡಿಎಸ್ ಗೆ 200 ಸೀಟ್ ಬರುತ್ತೆ ಅಂತಾನೂ ತೋರಿಸುತ್ತಾರೆ. ಹಾಗಾಗಿ ಈ ಫ್ರೀ ಪೋಲ್ ಸರ್ವೆಗಳ ಬಗ್ಗೆ ತಲೆಕಡೆಸಿಕೊಳ್ಳಲ್ಲ. ಕ್ಷೇತ್ರಕ್ಕೆ ಹೆಚ್ವು ಅನುದಾನ ತಂದಿದ್ದೇನೆ ಅಂತ ಕೆಲವರು ಓಡಾಡ್ತಿದ್ದಾರೆ. ಆದರೆ ನನ್ನ ಹೆಸರು ಹೇಳಿಕೊಂಡೇ ಅನುದಾನ ತರಬೇಕು, ಇಲ್ಲಿ ಕುಮಾರಸ್ವಾಮಿ ಸೋಲಿಸುತ್ತೇನ ಎಂದು ದುಡ್ಡು ತರುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಈ ವ್ಯಕ್ತಿಗಳು ಎಲ್ಲಿದ್ದರು? ಚುನಾವಣೆ ಸಂದರ್ಭದಲ್ಲಿ ಮಾತ್ರ ಇವರು ಬರುವುದು. ನನಗೆ ಇನ್ನೊಂದು ವರ್ಷ ಅಧಿಕಾರ ಇದ್ದಿದ್ರೆ ಎಲ್ಲಾ ಸಮಸ್ಯೆ ಬಗೆಹರಿಸುತ್ತಿದ್ದೆ. ನನ್ನ ಅಧಿಕಾರ ತೆಗೆದವರು ಇವರೇ. ಈಗ ಕೆಲಸ ಮಾಡಿಲ್ಲ ಎಂದು ಹೇಳುತ್ತಿರುವುದು ಇವರೇ ಎಂದು ಹೆಸರು ಹೇಳದೇ ಯೋಗೇಶ್ವರ್​ ವಿರುದ್ಧ ವಾಗ್ದಾಳಿ ನಡೆಸಿದರು.

2018ರ ರೀತಿಯಲ್ಲಿ ಈ ಚುನಾವಣೆ ನಡೆಸಿಕೊಡಿ. ನೀವೇ ಮುಂದೆ ನಿಂತು ಚುನಾವಣೆ ನಡೆಸಿ. ನನ್ನನ್ನ ನೀವು ರಕ್ಷಣೆ ಮಾಡಿದ್ರೆ, ರಾಜ್ಯದ ಬಡವರನ್ನ ನಾನು ರಕ್ಷಣೆ ಮಾಡುತ್ತೇನೆ. ಈ ಬಾರಿ ನನಗೆ ಶಕ್ತಿ ನೀಡಿ ಎಂದು ಕುಮಾರಸ್ವಾಮಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು. ಅಲ್ಲದೇ ಚುನಾವಣಾ ಜವಾಬ್ದಾರಿಯನ್ನ ಕ್ಷೇತ್ರದ ಕಾರ್ಯಕರ್ತರಿಗೆ ವಹಿಸಿದರು.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Mon, 3 April 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !