ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್

ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಇದರಿಂದ ಎಚ್​ಡಿ ರೇವಣ್ಣ ಅವರು ಶಿವಲಿಂಗೇಗೌಡಗೆ ಜ. 15 ಡೆಡ್​​ಲೈನ್ ನೀಡಿ ಕಾರ್ಯಕರ್ತರನ್ನು ಸಮಾಧಾನ ಮಾಡಿದರು.

ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್
ಶಿವಲಿಂಗೇಗೌಡ ಮತ್ತು ಹೆಚ್​ಡಿ ರೇವಣ್ಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 30, 2022 | 9:23 PM

ಹಾಸನ: ಜೆಡಿಎಸ್​ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯಲ್ಲಿ(Hassan District)  ಗೊಂದಲ ನಿರ್ಮಾಣವಾಗಿದೆ. ಅರಸೀಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ (Arasikere) ರಾಜಕೀಯ ನಿಗೂಢ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್​ನ ಮೊದಲ ಪಟ್ಟಿಯಲ್ಲಿ ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಆದ್ರೆ, ಇದೀಗ ಕಾರ್ಯಕರ್ತರು ರೊಚ್ಚಿಗೆದ್ದಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರು ಬಿಗಿ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ನನಗೆ ವೋಟ್​ ಹಾಕದಿದ್ದರೆ ನಿಮ್ಮ ಕೆಲಸ ಮಾಡಿಕೊಡಲ್ಲ: ಮುಸ್ಲಿಮರಿಗೆ ಶಾಸಕ ಪ್ರೀತಂಗೌಡ ಎಚ್ಚರಿಕೆ!

ಇಂದು(ಡಿಸೆಂಬರ್ 30) ಅರಸೀಕೆರೆ ಕ್ಷೇತ್ರದ ಜೆಡಿಎಸ್​ ಕಾರ್ಯಕರ್ತರು ಹಾಸನ ಸಂಸದ ಕಚೇರಿ ಬಳಿ ಜಮಾಯಿಸಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಆಗ್ರಹಿಸಿದರು. ಶಿವಲಿಂಗೇಗೌಡರು ನಮ್ಮನ್ನ ಕಡೆಗಣಿಸಿ ,ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಕಾರ್ಯಕ್ರಮಗಳಿಗೆ ಆಹ್ವಾನ ಮಾಡುತ್ತಿದ್ದಾರೆ. ನಮ್ಮ ಜೆಡಿಎಸ್ ಕಾರ್ಯಕರ್ತರ ಕೆಲಸವನ್ನೇ ಮಾಡಿ ಕೊಡುತ್ತಿಲ್ಲ. ಇತ್ತಿಚೆಗೆ ಜೆಡಿಎಸ್ ಅಡಿಯಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿಲ್ಲ. ನಮ್ಮ ಕಣ್ಣ ಮುಂದೆಯೇ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ ಹಾಕುತ್ತಿದ್ದಾರೆ. ಆದಷ್ಟು ಬೇಗ ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಿ ಎಂದು ಜೆಡಿಎಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದರು.

ಶಿವಲಿಂಗೇಗೌಡಗೆ ಡೆಡ್​​ಲೈನ್​ ನೀಡಿದ ರೇವಣ್ಣ

ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿ ಎಂದು ಪಟ್ಟು ಹಿಡಿದ ಕಾರ್ಯಕರ್ತರಿಗೆ ಸಮಾದಾನ ಮಾಡಿದ ಹೆಚ್.​ಡಿ. ರೇವಣ್ಣ, ಜನವರಿ 15ರವರೆಗೆ ಡೆಡ್​​ಲೈನ್ ಕೊಡೋಣ. ಬೇರೆಡೆ ಅನುಕೂಲವಾದ್ರೆ ತೀರ್ಮಾನ ತತೋ ಎಂದು ಹೇಳಿದ್ದೇನೆ. ಜ.20ರೊಳಗೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸುತ್ತೇವೆ. ಸಮಯ ಕೊಡೋಣ ಎಂದು ಹೆಚ್​ಡಿಡಿ, ಹೆಚ್​ಡಿಕೆ ಸಹ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರೇವಣ್ಣ ಶಾಸಕ ಶಿವಲಿಂಗೇಗೌಡ ಗೆ ಪರೋಕ್ಷವಾಗಿ ಜನವರಿ 15 ಡೆಡ್ ಲೈನ್ ಕೊಟ್ಟರು.

ಇದನ್ನೂ ಓದಿ: ದೇವೇಗೌಡ-ಕುಮಾರಸ್ವಾಮಿ ಹೇಳಿದಾಕ್ಷಣ ಓಡಿಬಂದು ಓಟು ಒತ್ತೋರು ಇಲ್ಲಿ ಯಾರೂ ಇಲ್ಲ: ಶಾಸಕ ಶಿವಲಿಂಗೇಗೌಡ ಗುಡುಗು

ಹದಿನೈದರವರೆಗೆ ಸಮಯ ಕೊಡೋಣ ಎಂದು ಕುಮಾರಸ್ವಾಮಿ ದೇವೇಗೌಡರು ಕೂಡ ಹೇಳಿದಾರೆ. ಹಾಗಾಗಿ ಅವರಿಗೆ ಟೈಂ ಕೊಡೋಣ ಆಮೇಲೆ ನಮ್ಮಿಂದ ಹಿಂಗಾಯ್ತು ಎಂದು ಅಪವಾದ ಬರುವುದು ಬೇಡ. ಹೊಳೆನರಸೀಪುರ ನನಗೆ ಒಂದು ಕಣ್ಣಾದ್ರೆ ನಾನು ಜೀವ ಇರುವವರೆಗೆ ಅರಸೀಕೆರೆ ಮರೆಯಲ್ಲ. ರಾತ್ರಿ ಹನ್ನೆರಡು ಗಂಟೆಗೆ ಬರಲಿ ನಿಮಗಾಗಿ ದುಡಿಯದೆ ಹೋದರೆ ನಾನು ದೇವೇಗೌಡದ ಮಗ ಅಲ್ಲ. ಎಲ್ಲವನ್ನು ಅವರಿಗೆ ಬಿಡೋಣ ಹದಿನೈದರ ಮೇಲೆ ತೀರ್ಮಾನ ಮಾಡೋಣ ಎಂದು ಹೇಳಿದರು.

ಶಿವಲಿಂಗೇಗೌಡರ ನಡೆ ನಿಗೂಢ

ಹೌದು…ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಲಿಂಗೇಗೌಡ ಅವರು ಜೆಡಿಎಸ್​ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಹಲವು ಸುತ್ತಿನ ಮಾತುಕತೆ ಮುಗಿದಿದ್ದು, ಫೆಬ್ರವರಿಯಲ್ಲಿಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:43 pm, Fri, 30 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ