AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?

Karnataka Elections: ವೋಟರ್ ಐಡಿಗೆ ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?
ವೋಟರ್ ಐಡಿ (ಸಾಂದರ್ಭಿಕ ಚಿತ್ರ)
Ganapathi Sharma
| Edited By: |

Updated on:May 09, 2023 | 11:36 AM

Share

ದೇಶದಲ್ಲಿ 18 ವರ್ಷ ವಯಸ್ಸು ಪೂರ್ಣಗೊಂಡವರು ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮತದಾನಕ್ಕೆ (Voting)  ಅರ್ಹರಾಗಿದ್ದಾರೆ. ಇಂಥವರು ತಮ್ಮ ರಾಜ್ಯ ಅಥವಾ ಪ್ರದೇಶದಲ್ಲಿ ಚುನಾವಣೆ(Election) ಸಮಯದಲ್ಲಿ ಮತ ಚಲಾಯಿಸಲು ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮತದಾರರ ಗುರುತಿನ ಚೀಟಿಯು (Voter ID) ನಿಮ್ಮ ಮತವನ್ನು ಚಲಾಯಿಸುವ ಮೊದಲು ಪರಿಶೀಲಿಸಲಾಗುವ ಪ್ರಮುಖ ಗುರುತಿನ ದಾಖಲೆಯಾಗಿದೆ. ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ ಮತ್ತು ವಿವರಗಳಿಗೆ ಸಂಬಂಧಿಸಿದಂತೆ ಇಮೇಲ್ ಸಂದೇಶ ಕಳುಹಿಸುತ್ತದೆ. ಹೆಚ್ಚಿನ ವಿವರ ತಿಳಿಯುವುದಕ್ಕಾಗಿ ರೆಫರೆನ್ಸ್ ಐಡಿಯನ್ನು ನೆನಪು ಇಟ್ಟುಕೊಳ್ಳಬೇಕಾಗುತ್ತದೆ. ನೀವು ಅದನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

  • ಅರ್ಜಿಯ ಸ್ಥಿತಿ ತಿಳಿಯುವುದಕ್ಕಾಗಿ ನೀವು ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
  • ನಂತರ ‘Application status’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ರೆಫರೆನ್ಸ್ ಐಡಿ ನಮೂದಿಸಿ ‘Track Application status’ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ.

ದೂರವಾಣಿ ಕರೆ ಮೂಲಕ ಅರ್ಜಿಯ ಸ್ಥಿತಿ ತಿಳಿಯುವುದು ಹೇಗೆ?

  • ಚುನಾವಣಾ ಆಯೋಗ್ ಕಾಲಿಂಗ್ ಸರ್ವೀಸ್ ಬಳಸಿಕೊಂಡು ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.
  • ಇದಕ್ಕಾಗಿ ನೀವು ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬೇಕು.
  • ಕರೆಯಲ್ಲಿ ಬರುವ ಸೂಚನೆಗಳನ್ನು ಅನುಸರಿಸಿ, ರೆಫರೆನ್ಸ್ ಐಡಿ ಮೂಲಕ ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.

ಎಸ್​ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ವೋಟರ್ ಐಡಿ ಕಾರ್ಡ್ ಯಶಸ್ವಿಯಾಗಿ ನೋಂದಾವಣೆಯಾದಾಗ ಚುನಾವಣಾ ಆಯೋಗವು ಸಾಮಾನ್ಯವಾಗಿ ಎಸ್​ಎಂಎಸ್ ಸಂದೇಶ ಕಳುಹಿಸುತ್ತದೆ. ಅರ್ಜಿಯ ಸ್ಥಿತಿಯ ಬಗ್ಗೆಯೂ ಎಸ್​ಎಂಎಸ್ ಕಳುಹಿಸುತ್ತದೆ. ಆದರೆ, ಈ ಸೇವೆ ಕೆಲವು ರಾಜ್ಯಗಳಲ್ಲಿ ಮಾತ್ರ ಸದ್ಯ ಲಭ್ಯವಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 3 May 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ