AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಚುನಾವಣೆಗೆ ಕಾರ್ಯತಂತ್ರ: ದಿಲ್ಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸ್ ನಾಯರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಕರ್ನಾಟಕ ಕಾಂಗ್ರೆಸ್​ನ ಪ್ರಮುಖ ನಾಯಕರುಗಳಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಇದರಿಂದ ರಾಜ್ಯ ಕಾಂಗ್ರೆಸ್​ನಲ್ಲಿ ರಾಜಕೀಯ ಗರಿಗೆದರಿವೆ.

ಮುಂದಿನ ಚುನಾವಣೆಗೆ ಕಾರ್ಯತಂತ್ರ: ದಿಲ್ಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸ್ ನಾಯರಿಗೆ ಹೈಕಮಾಂಡ್ ದಿಢೀರ್ ಬುಲಾವ್
ಕಾಂಗ್ರೆಸ್ ಲೀಡರ್ಸ್
TV9 Web
| Edited By: |

Updated on:Dec 11, 2022 | 1:44 PM

Share

ಬೆಂಗಳೂರು/ನವದೆಹಲಿ: ಗುಜರಾತ್ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣ ಫುಲ್​ ಆ್ಯಕ್ಟೀವ್ ಆಗಿದೆ. ಕರುನಾಡ ಗದ್ದುಗೆಗಾಗಿ ಬಿಜೆಪಿ, ಕಾಂಗ್ರೆಸ್​ ತಂತ್ರ, ಪ್ರತಿತಂತ್ರಗಳ ಬಾಣ ಬಿಡುವುದಕ್ಕೆ ಸನ್ನದ್ಧರಾಗಿ ಕುಳಿತಿವೆ. ಶತಾಯಗತಾಯವಾಗಿ ಕರುನಾಡಿನಲ್ಲಿ ಮತ್ತೆ ಆಡಳಿತ ನಡೆಸಬೇಕು ಎಂದು ಬಿಜೆಪಿ ಇದ್ರೆ, ಇತ್ತ ಕಾಂಗ್ರೆಸ್ ಕೂಡ ಕೇಸರಿಗೆ ಕೌಂಟರ್ ಕೊಟ್ಟು, ರಾಜ್ಯದ ಗದ್ದುಗೆಯನ್ನ ಹಿಡಿಯಬೇಕು ಎಂಬ ಕನಸಿನ ಗೋಪುರವನ್ನೇ ಕಟ್ಟಿಕೊಂಡಿದೆ. ಇದಕ್ಕಾಗಿ ರಣವ್ಯೂಹ ರಚಿಸಲು ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ (Karnataka Congress) ನಾಯರಿಗೆ ಹೈಕಮಾಂಡ್ ಬುಲಾವ್ ನೀಡಿದೆ.

ಇದನ್ನೂ ಓದಿ: Karnataka Politics: ದಲಿತ ಬಲ ಪಂಗಡದ ಯುವ ನಾಯಕರ ಹುಡುಕಾಟದಲ್ಲಿ ರಾಜ್ಯ ಬಿಜೆಪಿ

ಹೌದು… ಇನ್ನು ನಾಲ್ಕೈದು ತಿಂಗಳಲ್ಲಿ ಕರುನಾಡಿನಲ್ಲಿ ವಿಧಾನಸಭೆ (Karnataka Assembly Election 2023) ಯುದ್ಧವೇ ಶುರುವಾಗುತ್ತೆ. ರಾಜ್ಯದ ಚುಕ್ಕಾಣಿಗಾಗಿ ಮೂರು ಪಕ್ಷಗಳು ಮದಗಜಗಳಂತೆ ಕಾಳಗಕ್ಕೆ ಇಳಿದಿವೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಹೈಕಮಾಂಡ್​ ಸಹ ಮುಂಬರುವ ವಿಧಾನಸಭೆ ಚುನಾವಣೆ ತಯಾರಿ ನಡೆಸಿದ್ದು, ಈ ಬಗ್ಗೆ ಕಾರ್ಯತಂತ್ರಗಳನ್ನು ರೂಪಿಸಲು ರಾಜ್ಯ ಕಾಂಗ್ರೆಸ್ ನಾಯಕರನ್ನು ದೆಹಲಿಗೆ ಬರುವಂತೆ ಹೇಳಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಹಾಗೂ ಹಿರಿಯ ನಾಯಕರಾದ ಬಿ.ಕೆ ಹರಿಪ್ರಸಾದ್, ಹೆಚ್ ಕೆ ಪಾಟೀಲ್, ಡಾ ಜಿ ಪರಮೇಶ್ವರ್ , ಕಾರ್ಯಾಧ್ಯಕ್ಷರು ಸೇರಿದಂತೆ ಒಟ್ಟು 14 ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಆಹ್ವಾನಿಸಿದೆ. ಈ ಹಿನ್ನೆಲೆಯಲ್ಲಿ ನಾಳೆ(ಡಿಸೆಂಬರ್ 12) ಬೆಳಿಗ್ಗೆ ರಾಜ್ಯ ಕಾಂಗ್ರೆಸ್​ನ ಪ್ರಮುಖ ನಾಯಕರು ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: RSS ನಾಯಕರಿಂದ ಸಿಎಂ ಬೊಮ್ಮಾಯಿ ಮೇಲಿಂದ ಮೇಲೆ ಭೇಟಿ: ಮತ್ತೆ ಮುನ್ನಲೆಗೆ ಬಂದ ಸಂಪುಟ ವಿಸ್ತರಣೆ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸುದೀರ್ಘ ಸಭೆ ನಡೆಸಲಿದ್ದಾರೆ. ಖರ್ಗೆ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾ ಹಾಗೂ ಕೆ ಸಿ ವೇಣುಗೋಪಾಲ್ ಸಹ ಸಭೆಯಲ್ಲಿ ಭಾಗಿಯಾಗಲಿದ್ದು, ಚುನಾವಣಾ ತಂತ್ರಗಾರಿಕೆ, ಪ್ರಚಾರ ಕಾರ್ಯಕ್ರಮ ಹಾಗೂ ಟಿಕೆಟ್ ಹಂಚಿಕೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಇನ್ನು ಇದೇ ವೇಳೆ ನಾಯಕರಿಗೆ ಒಂದೊಂದು ಪ್ರಮುಖ ಜವಾಬ್ದಾರಿ ಹಂಚುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಟಿಕೆಟ್ ಆಕಾಂಕ್ಷಿಗಳಿಗೆ ಡವ ಡವ ಯೆಸ್…ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಅಂದರೆ ಜನವರಿ ಕೊನೆ ಅಥವಾ ಫೆವ್ರವರಿಯಲ್ಲೇ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಈಗಾಗಲೇ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸಿದೆ. ಇದೀಗ ಹೈಕಮಾಂಡ್ ಜೊತೆ ರಾಜ್ಯ ನಾಯಕರ ಸಭೆ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳಲ್ಲಿ ಡವ ಡವ ಶುರುವಾಗಿದೆ.

ಗುಜರಾತ್​ನಲ್ಲಿ ಬಿಜೆಪಿ ಊಹೆಗೂ ಮೀರಿದ ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿದ್ದೇ ತಡ, ಕರ್ನಾಟಕ ಬಿಜೆಪಿ ನಾಯಕರು ಸಹ ಹಿರಿಹಿರಿ ಹಿಗ್ಗಿದ್ದಾರೆ. ಗುಜರಾತ್​ನಂತೆ ಕರುನಾಡಿನಲ್ಲಿ ಕಾಂಗ್ರೆಸ್​ಗೆ ಗುನ್ನಾ ಕೊಡಬೇಕು ಎಂದು ಈಗಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಮಾಚಲ ಪ್ರದೇಶ ಚುನಾವಣೆಯಂತೆ ಸಹ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಚುನಾವಣಾ ಸಮರಕ್ಕೆ ತಯಾರಿ ನಡೆಸಿದೆ.

ಒಟ್ಟಾರೆ ಕರುನಾಡಿನ ಗದ್ದುಗೆಗಾಗಿ ಬಿಜೆಪಿ, ಕಾಂಗ್ರೆಸ್ ತಂತ್ರ, ಪ್ರತಿತಂತ್ರಗಳ ಬಗ್ಗೆ ಜಪ ಮಾಡುತ್ತಿದ್ದು, ಮುಂದಿನ ವಿಧಾಸಭೆ ಚುನಾವಣೆ ಭಾರೀ ರಂಗೇರುವ ಎಲ್ಲಾ ಸಾಧ್ಯತೆಗಳಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:34 pm, Sun, 11 December 22

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?