ಡಿಕೆ ಶಿವಕುಮಾರ್ ದೆಹಲಿ ಭೇಟಿ ರದ್ದು: ನನ್ನ ಜೊತೆ ಯಾವ ಶಾಸಕರೂ ಇಲ್ಲ ಎಂದ ಡಿಕೆ ಶಿವಕುಮಾರ್

ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ಡಿಕೆ ಶಿವಕುಮಾರ್ ಅವರು ರದ್ದುಗೊಳಿಸಿದ್ದಾರೆ. ನನ್ನ ಜೊತೆ ಯಾವ ಶಾಸಕರು ಇಲ್ಲ ಅಂತಾರೆ. ಹಾಗಾದ್ರೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಕನಕಪುರದ ಬಂಡೆಗೆ ಸಿಕ್ತಾ?

ಡಿಕೆ ಶಿವಕುಮಾರ್ ದೆಹಲಿ ಭೇಟಿ ರದ್ದು: ನನ್ನ ಜೊತೆ ಯಾವ ಶಾಸಕರೂ ಇಲ್ಲ ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Follow us
Rakesh Nayak Manchi
|

Updated on:May 15, 2023 | 8:06 PM

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹಾಗಾದ್ರೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಕನಕಪುರದ ಬಂಡೆಗೆ ಸಿಕ್ಕಿತಾ? ಸಿದ್ದರಾಮಯ್ಯ (Siddaramaiah) ಅವರನ್ನು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸುತ್ತಾ? ಅಥವಾ ಬೇರೊಬ್ಬ ನಾಯಕನನ್ನು ಆಯ್ಕೆ ಮಾಡುತ್ತಾ? ಎಂಬ ಪ್ರಶ್ನೆ ಇದೀಗ ಎದ್ದಿದೆ.

ದೆಹಲಿ ಪ್ರವಾಸ ರದ್ದು ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್, ನನಗೆ ಆರೋಗ್ಯದ ಸಮಸ್ಯೆಯಿದೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆ. ಹೊಟ್ಟೆ ನೋವಿದೆ, ವೈದ್ಯರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಹತಾಷೆಯ ಮಾತುಗಳನ್ನಾಡಿದ ಅವರು, ನನ್ನ ಜೊತೆ ಯಾವ ಶಾಸಕರು ಇಲ್ಲ, ನನಗೆ ಯಾರ ಬೆಂಬಲ ಬೇಡ. ಯಾರು ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಷೆಯಿಂದಾಗಿಯೇ?

ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ನನ್ನ ಬಳಿ 135 ಶಾಸಕರು ಇದ್ದಾರೆ, ಎಲ್ಲರೂ ಕಾಂಗ್ರೆಸ್ ಶಾಸಕರು. ನನಗೆ ಸಮಯದ ಪ್ರಜ್ಞೆ ಇದೆ, ಹೋರಾಟದ ಕಿಚ್ಚು ಇದೆ. ಹೋರಾಟದಲ್ಲಿ ಯಶಸ್ಸು ಸಿಗಬೇಕಾದರೆ ತಾಳ್ಮೆ ಇರಬೇಕು. ಧರ್ಮರಾಯರಂತೆ ತಾಳ್ಮೆ ಇರಬೇಕು. ನನ್ನನ್ನು ಬಂಡೆ ಅಂತಾ ನೀವು ಕರೆಯುತ್ತೀರಿ, ಬಂಡೆ ಅಂದರೆ ಪ್ರಕೃತಿ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂತಹ ಹತಾಷೆಯ ಮಾತುಗಳನ್ನಾಡುವುದನ್ನು ನೋಡಿದಾಗ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಸಿಕ್ಕಂತಿದೆ. ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಸ್ಥಾನಕ್ಕಾಗಿ ಭಾರೀ ಲಾಭಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಪುತ್ರ ಯತೀಂದ್ರ ಅವರ ಸ್ಪರ್ಧೆಯನ್ನು ತ್ಯಾಗ ಮಾಡಲಾಗಿದೆ, ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷ ಕಟ್ಟಿದ್ದೇನೆ, ಶಾಸಕರ ಬೆಂಬಲವೂ ನನಗಿದೆ ಎಂದು ಹೇಳುವ ಮೂಲಕ ವಿರಿಷ್ಠರ ಮನವೋಲಿಸುವ ಸಾಧ್ಯತೆ ಇದೆ.

ದೆಹಲಿಗೆ ತೆರಳಿದ ಡಿಕೆ ಸುರೇಶ್

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದು ಮಾಡಿದ ಬೆನ್ನಲ್ಲೇ ಇವರ ಸಹೋದರನೂ ಆಗಿರುವ ಸಂಸದ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ. ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಜೆ 5.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇವರ ದೆಹಲಿ ಪ್ರವಾಸ ಸದ್ಯ ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Mon, 15 May 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ