AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hiriyuru Election 2023 Winner: ಹಿರಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಗೆಲುವು

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಹಿರಂಗಗೊಂಡಿದ್ದು, ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ.

Hiriyuru Election 2023 Winner: ಹಿರಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಗೆಲುವು
ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿಯ ಕೆ ಪೂರ್ಣಿಮಾ ವಿರುದ್ಧ ಕಾಂಗ್ರೆಸ್​ನ ಡಿ ಸುಧಾಕರ್​ಗೆ ಗೆಲುವು
Rakesh Nayak Manchi
|

Updated on:May 13, 2023 | 5:06 PM

Share

Hiriyuru Assembly Election Results 2023, ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ (D Sudhakar) ಅವರು ಗೆಲುವು ಸಾಧಿಸಿದ್ದಾರೆ. ಸುಧಾಕರ್ ಅವರು 2018ರಲ್ಲಿ ಮೊದಲಬಾರಿ ಬಿಜೆಪಿಯಿಂದ ಸ್ಪರ್ಧಿಸಿ 12,857 ಮತಗಳ ಅಂತರದಿಂದ ಗೆದ್ದಿರುವ ಕೆ ಪೂರ್ಣಿಮಾ ಶ್ರೀನಿವಾಸ್ (K Poornima Srinivas) ಅವರ ವಿರುದ್ಧ 30322 ಮತಗಳ ಅಂತದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಸುಧಾಕರ್ ಅವರು ಒಟ್ಟು ಮತದಾನದಲ್ಲಿ ಶೇ 46ರಷ್ಟು ಮತ ಪಡೆದುಕೊಂಡರೆ, ಬಿಜೆಪಿಯ ಪೂರ್ಣಿಮಾ ಅವರು ಶೇ 30.9ರಷ್ಟು ಮತ ಪಡೆದಿದ್ದಾರೆ. ಜೆಡಿಎಸ್​ನ ಎಂ ರವೀಂದ್ರಪ್ಪ ಅವರು ಶೇ 19.3ರಷ್ಟು ಮತ ಪಡೆದಿದ್ದಾರೆ. ಗೊಲ್ಲರು, ಒಕ್ಕಲಿಗರು ಮತ್ತು ಇತರೆ ಪ್ರಮುಖ ಸಮುದಾಯದ ಜನರು ಇಲ್ಲಿ ನಿರ್ಣಾಯಕವಾಗಿದ್ದಾರೆ.

ಇದನ್ನೂ ಓದಿ: Chitradurga Election 2023 Winner: ತಿಪ್ಪಾರೆಡ್ಡಿ ಗೆಲುವಿಗೆ ಬ್ರೇಕ್, ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಗೆಲುವು

2008ರಲ್ಲಿ ಪಕ್ಕದ ಚಳ್ಳಕೆರೆ ಎಸ್​ಟಿ ಮೀಸಲು ಕ್ಷೇತ್ರವಾದ ಬಳಿಕ ಚಳ್ಳಕೆರೆ ಕಾಂಗ್ರೆಸ್ ಶಾಸಕರಾಗಿದ್ದ ಡಿ.ಸುಧಾಕರ್ ಹಿರಿಯೂರಿಗೆ ಲಗ್ಗೆಯಿಟ್ಟಿದ್ದರು. ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿ ಸಚಿವರಾಗಿದ್ದರು. 2013ರಲ್ಲಿ ಕಾಂಗ್ರೆಸ್ ಶಾಸಕರಾಗಿ ಗೆದ್ದಿದ್ದರು. ಆದರೆ, ಜೆಡಿಎಸ್ ಅಬ್ಯರ್ಥಿಯಾಗಿ ಸ್ಪರ್ಧೆಯೊಡ್ಡಿದ್ದ ಮಾಜಿ ಸಚಿವ ಎ.ಕೃಷ್ಣಪ್ಪ ಅಲ್ಪ ಮತಗಳಿಂದ ಸೋಲುಂಡಿದ್ದರು. ಬಳಿಕ ಕೆಲ ವರ್ಷದಲ್ಲೇ ಎ.ಕೃಷ್ಣಪ್ಪ ವಿಧಿವಶರಾಗಿದ್ದರು.

ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಆಗಿದ್ದ ಮಾಜಿ ಸಚಿವ ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾ ಶ್ರೀನಿವಾಸ್ 2018ರಲ್ಲಿ ಹಿರಿಯೂರಿನಿಂದ ಬಿಜೆಪಿ ಅಬ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಎರಡು ಪ್ರಬಲ ಸಮುದಾಯಗಳಾದ ಗೊಲ್ಲ ಮತ್ತು ಒಕ್ಕಲಿಗ ಸಮುದಾಯ ದೂರವಿಟ್ಟು ಜೈನ ಸಮುದಾಯದ ಡಿ.ಸುಧಾಕರ್ ಅವರನ್ನು 2008 ಮತ್ತು 2013ರಲ್ಲಿ ಗೆಲ್ಲಿಸಿದ್ದ ಜನ 2018ರಲ್ಲಿ ಗೊಲ್ಲ ಸಮುದಾಯದ ಪೂರ್ಣಿಮಾ ಗೆಲ್ಲಿಸಿದ್ದರು. ಇದೀಗ ಕ್ಷೇತ್ರದ ಜನತೆ ಮತ್ತೆ ಸುಧಾಕರ್ ಅವರ ಕೈ ಹಿಡಿದಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Sat, 13 May 23

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?