Hubli-Dharwad Central Election Results: ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜಗದೀಶ್ ಶೆಟ್ಟರ್ ಎದುರು ಜಯ ಗಳಿಸಿದ ಮಹೇಶ್ ಟೆಂಗಿನಕಾಯಿ
Hubli-Dharwad Central Assembly Election Result 2023 Live Counting Updates: ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ನಿಂದ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ನಿಂದ ಸಿದ್ದಲಿಂಗೇಶ್ ಗೌಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.
Hubli-Dharwad Central Assembly Election Result 2023: ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಭಾರತೀಯ ಜನತಾ ಪಕ್ಷವು ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಮಾಜಿ ಸಿಎಂಗೆ ಕೊಕ್ ನೀಡಿತ್ತು. ಆ ಮೂಲಕ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ (Hubli-Dharwad Central Assembly Constituency) ಅಭ್ಯರ್ಥಿಯನ್ನಾಗಿ ಮಹೇಶ್ ಟೆಂಗಿನಕಾಯಿ ಅವರನ್ನು ಕಣಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಗೆದ್ದು ಬೀಗಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲಿ ಶೆಟ್ಟರ್ ಒಬ್ಬರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಜತೆಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದು, ಸುದೀರ್ಘ ಕಾಲ ಬಿಜೆಪಿಯಲ್ಲಿದ್ದ ಅವರು ಪಕ್ಷ ತ್ಯಜಿಸಿದ್ದರು.
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿದ್ದ ಜಗದೀಶ್ ಶೆಟ್ಟರ್, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಜಗದೀಶ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿತ್ತು.
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2 ಲಕ್ಷಕ್ಕಿಂತ ಹೆಚ್ಚು ಮತದಾರರಿದ್ದಾರೆ. 27 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಜಾತಿ, 7 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಪಂಗಡ ಮತ್ತು 42 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.
ಇನ್ನು ಕಳೆದ 2018ರ ಚುನಾವಣೆಯಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ನ ಡಾ. ಮಹೇಶ್ ಸಿ ನಾಲವಾಡ್ ಸುಮಾರು 21 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಕಂಡಿದ್ದರು.
Published On - 2:50 am, Sat, 13 May 23