AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Humnabad Election Results: ಹಮನಾಬಾದ್ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಹಮನಾಬಾದ್​ನಲ್ಲಿ ರಾಜಶೇಖರ್ ಪಾಟೀಲ್​​ಗೆ ಗೆಲುವು

Humnabad Assembly Election Result 2023 Live Counting Updates: ಹಮನಾಬಾದ್ ವಿಧಾನಸಭಾ ಕ್ಷೇತ್ರದಿಂದ (Humnabad Assembly constituency) ಕಾಂಗ್ರೆಸ್ ಪಕ್ಷವು ಹಾಲಿ ಶಾಸಕ ರಾಜಶೇಖರ್‌ ಬಿ ಪಾಟೀಲ್‌ ಅವರನ್ನು ಕಣಕ್ಕಿಳಿಸಿದ್ದು, ಅವರೇ ಗೆಲುವು ಸಾಧಿಸಿದ್ದಾರೆ.

Humnabad Election Results: ಹಮನಾಬಾದ್ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಹಮನಾಬಾದ್​ನಲ್ಲಿ ರಾಜಶೇಖರ್ ಪಾಟೀಲ್​​ಗೆ ಗೆಲುವು
ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ರಾಜಶೇಖರ್‌ ಬಿ ಪಾಟೀಲ್‌Image Credit source: Facebook
Ganapathi Sharma
|

Updated on:May 13, 2023 | 10:52 PM

Share

Humnabad Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಹಮನಾಬಾದ್ ವಿಧಾನಸಭಾ ಕ್ಷೇತ್ರದಿಂದ (Humnabad Assembly constituency) ಕಾಂಗ್ರೆಸ್ ಪಕ್ಷವು ಹಾಲಿ ಶಾಸಕ ರಾಜಶೇಖರ್‌ ಬಿ ಪಾಟೀಲ್‌ ಅವರನ್ನು ಕಣಕ್ಕಿಳಿಸಿದ್ದು, ಅವರೇ ಗೆಲುವು ಸಾಧಿಸಿದ್ದಾರೆ. ಬಿಜೆಪಿಯು ಸಿದ್ದು ಪಾಟೀಲ ಅವರನ್ನು ಕಣಕ್ಕಿಳಿಸಿತ್ತು. ಜೆಡಿಎಸ್​ನಿಂದ ಸಿ.ಎಂ. ಫಯಾಜ್, ಎಎಪಿಯಿಂದ ಬ್ಯಾಂಕ್‌ ರೆಡ್ಡಿ ಅಭ್ಯರ್ಥಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜಶೇಖರ್‌ ಬಿ ಪಾಟೀಲ್‌ 31,814 ಮತಗಳ ಅಂತರದಿಂದ ಜಯಗಳಿಸಿದ್ದರು.

ಈ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲ ಹಿಡಿತವನ್ನು ಹೊಂದಿದೆ. ಈ ಹಿಂದಿನ ಮೂರು ಚುನಾವಣೆಗಳಲ್ಲಿ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ಪೈಪೋಟಿ ನೀಡಿದ್ದರೂ ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹಾಲಿ ಶಾಸಕರ ಇಬ್ಬರು ಸಹೋದರರು ವಿಧಾನ ಪರಿಷತ್ ಸದಸ್ಯರಾಗಿರುವುದರಿಂದ ಸಹಜವಾಗಿಯೇ ಇಲ್ಲಿ ಕಾಂಗ್ರೆಸ್ ಭದ್ರ ಅಡಿಪಾಯ ಹೊಂದಿದೆ.

ರಾಜಶೇಖರ್‌ ಬಿ ಪಾಟೀಲ್‌ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು ಇದೀಗ ಐದನೇ ಬಾರಿ ಕಣಕ್ಕಿಳಿದಿದ್ದಾರೆ.ಈ ಕ್ಷೇತ್ರ ರೂಪುಗೊಂಡ ಬಳಿಕ 15 ಚುನಾವಣೆಗಳು ನಡೆದಿದ್ದು ಎರಡು ಬಾರಿ ಮಾತ್ರ ಕಮ್ಯುನಿಸ್ಟ್ ಮತ್ತು ಜೆಡಿಎಸ್ ಜಯಗಳಿಸಿವೆ. 1999ರಲ್ಲಿ ಒಂದು ಬಾರಿ ಮಾತ್ರ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಸುಭಾಶ್ ಕಲ್ಲೂರ ಅವರನ್ನು ಕಣಕ್ಕಿಳಿಸಿದ್ದರೆ ಜೆಡಿಎಸ್ ಪಕ್ಷದಿಂದ ನಸೀಮುದ್ದೀನ್ ಪಟೇಲ್ ಸ್ಪರ್ಧಿಸಿದ್ದರು. ಬಿಜೆಪಿ ಎರಡನೇ ಹಾಗೂ ಜೆಡಿಎಸ್ ಮೂರನೇ ಸ್ಥಾನ ಗಳಿಸಿದ್ದವು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:20 am, Sat, 13 May 23

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?