AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಪತ್ರನಿಗೆ ಟಿಕೆಟ್​ ನೀಡುವಂತೆ ಎಂಟಿಬಿ ನಾಗರಾಜ್​​ ಯಡಿಯೂರಪ್ಪ, ಸಿಎಂ ಬೊಮ್ಮಾಯಿಗೆ ದುಂಬಾಲು

ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ನನ್ನ ಪುತ್ರನಿಗೆ ಟಿಕೆಟ್​​ ನೀಡಬೇಕೆಂದು ಮನವಿ ಮಾಡಿದ್ದೇನೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಟಿಕೆಟ್​ ಬಗ್ಗೆ ಚರ್ಚಿಸಲಾಗಿದೆ. ಈಗ ಬಿ.ಎಸ್​​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ‌ ಎಂದು ಎಂಟಿಬಿ ನಾಗರಾಜ್​ ಹೇಳಿದರು.

Karnataka Assembly Election 2023: ಪತ್ರನಿಗೆ ಟಿಕೆಟ್​ ನೀಡುವಂತೆ ಎಂಟಿಬಿ ನಾಗರಾಜ್​​ ಯಡಿಯೂರಪ್ಪ, ಸಿಎಂ ಬೊಮ್ಮಾಯಿಗೆ ದುಂಬಾಲು
ಸಚಿವ ಎಂಟಿಬಿ ನಾಗರಾಜ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 07, 2023 | 2:59 PM

Share

ಮುಖ್ಯಾಂಶಗಳು

  • ಸಚಿವ ಎಂಟಿಬಿ ನಾಗರಾಜ್​ ಪುತ್ರನಿಗೆ ಟಿಕೆಟ್​​ ನೀಡುವಂತೆ ಬಿಜೆಪಿ ಕೋರ್​ ಟೀಂಗೆ ಮನವಿ ಮಾಡಿದ್ದಾರೆ.
  • ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ನನ್ನ ಪುತ್ರನಿಗೆ ಟಿಕೆಟ್​​ ನೀಡಬೇಕೆಂದು ಮನವಿ ಮಾಡಿದ್ದೇನೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಟಿಕೆಟ್​ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
  • ಕುರುಬ ಸಮುದಾಯಕ್ಕೆ 8 ಟಿಕೆಟ್ ನೀಡಬೇಕು ಎಂದು ಕೇಳಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election) ದಿನ ಎಣಿಕೆ ಪ್ರಾರಂಭವಾಗಿದ್ದು, ಅಖಾಡದ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಮೂರು ಪಕ್ಷದಲ್ಲೂ ಟಿಕೆಟ್​ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜೊತೆಗೆ ಪಕ್ಷಾಂತರ ಕೂಡ ಏರುಗತಿಯಲ್ಲಿ ಸಾಗುತ್ತಿದೆ. ಕಾಂಗ್ರೆಸ್​ (Congress) ಈಗಾಗಲೆ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೊಂದು ಪಟ್ಟಿ ಬಿಡುಗಡೆಯಾಗಲಿದೆ. ಇತ್ತ ಜೆಡಿಎಸ್ (JDS)​ 1 ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮತ್ತೊಂದು ಪಟ್ಟಿ ಬಿಡುಗಡೆ ಮಾಡಲಿದೆ. ಈ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ಎಂದು ತಿಳಿಯಲಿದೆ. ಇನ್ನು ಬಿಜೆಪಿ (BJP), ಹಂತ 1,2,3 ಮಾದರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಕೇಂದ್ರಕ್ಕೆ ​​ಕಳುಹಿಸಿದೆ. ಇಂದು ಮತ್ತು ನಾಳೆ (ಏ.7,8) ಕೇಂದ್ರ ಮಟ್ಟದಲ್ಲಿ ಸಭೆ ನಡೆದು ಏಪ್ರಿಲ್​.9 ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಟಿಕೆಟ್​ ಆಕಾಂಕ್ಷಿಗಳು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa), ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಮನೆ ಮುಂದೆ ಪರೇಡ್​​ ನಡೆಸಿದ್ದಾರೆ. ಈಗ ಸಚಿವ ಎಂಟಿಬಿ ನಾಗರಾಜ್​ (MTB Nagaraj) ಕೂಡ ದುಂಬಾಲು ಬಿದ್ದಿದ್ದು, ಪುತ್ರನಿಗೆ ಟಿಕೆಟ್​​ ನೀಡುವಂತೆ ಬಿಜೆಪಿ ಕೋರ್​ ಟೀಂಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಬಿಜೆಪಿ ನಾಯಕ ಬಿ.ಎಸ್​​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್​ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ನನ್ನ ಪುತ್ರನಿಗೆ ಟಿಕೆಟ್​​ ನೀಡಬೇಕೆಂದು ಮನವಿ ಮಾಡಿದ್ದೇನೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಟಿಕೆಟ್​ ಬಗ್ಗೆ ಚರ್ಚಿಸಲಾಗಿದೆ. ಈಗ ಬಿ.ಎಸ್​​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ‌ ಎಂದು ಹೇಳಿದರು. ಅಲ್ಲದೇ ಪುತ್ರನಿಗೆ ಟಿಕೆಟ್​ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗು ಮನವಿ ಮಾಡಿದ್ದೇನೆ. ನಾನು ಹೊಸಕೋಟೆ ಅಲ್ಲ, ಎಲ್ಲೂ ಸ್ಪರ್ಧೆ ಮಾಡೋದಿಲ್ಲ. ನನ್ನ ಮಗನಿಗೆ ಬಿಜೆಪಿ ಟಿಕೆಟ್ ಕೊಡಿ ಗೆಲ್ಲಿಸುತ್ತೇನೆ ಎಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೌಮ್ಯಾ ರೆಡ್ಡಿಯಿಂದ ಮತದಾರರಿಗೆ ಆಮಿಷ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕುರುಬ ಸಮುದಾಯಕ್ಕೆ 8 ಟಿಕೆಟ್ ನೀಡಬೇಕು ಎಂದು ಕೇಳಿದ್ದೇನೆ. ಗೆಲ್ಲುವ ಕ್ಷೇತ್ರದಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಹೊಸಕೋಟೆ ಕ್ಷೇತ್ರದಲ್ಲಿ ಚುನಾವಣೆ ಮತ್ತು ರಾಜಕೀಯ ಪ್ರಾಬಲ್ಯಕ್ಕಾಗಿ ಬಿಎನ್ ಬಚ್ಚೇಗೌಡ ಮತ್ತು ಎಮ್ ಟಿ ಬಿ ನಾಗರಾಜ್ ಕಾದಾಡುತ್ತಿದ್ದರು. ಇನ್ನು ಅವರ ಮಕ್ಕಳಾದ ಶರತ್ ಬಚ್ಚೇಗೌಡ ಮತ್ತು ನೀತಿಶ್ ನಾಗರಾಜ್ ಅದನ್ನು ಮುಂದುವರಿಸಿಕೊಂಡು ಹೋಗಲಿದ್ದಾರೆ. 2023 ವಿಧಾನಸಭಾ ಚುನಾವಣೆಗೆ ಹೊಸಕೋಟೆಯಿಂದ ನಾಗರಾಜ್, ತಮ್ಮ ಮಗನಿಗಾಗಿ ಪ್ರಚಾರವನ್ನೂ ಆರಂಭಿಸಿದ್ದಾರೆ. ಕಳೆದ ಬಾರಿಯ ಉಪಚುನಾವಣೆಯಲ್ಲಿ ಶರತ್ ವಿರುದ್ಧ ಸೋತಿದ್ದ ನಾಗರಾಜ್ ಈ ಬಾರಿ ಮಗನನ್ನು ಗೆಲ್ಲಿಸುವ ಪಣತೊಟ್ಟಂತಿದೆ. ಅದರ ಭಾಗವಾಗಿ ಅವರು ಸಂಸದ ಬಚ್ಚೇಗೌಡರ ಆಪ್ತ ಹುಲ್ಲೂರು ಮಂಜುನಾಥ ಅವರನ್ನು ತಮ್ಮೆಡೆ ಸೆಳೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Fri, 7 April 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್