Nalin Kumar Kateel: ಸೋಲಿನ ಹೊಣೆ ಹೊತ್ತುಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಸೋಲಿನ ಹೊಣೆಯನ್ನು ನಳೀನ್ ಕುಮಾರ್ ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ.

Nalin Kumar Kateel: ಸೋಲಿನ ಹೊಣೆ ಹೊತ್ತುಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 13, 2023 | 1:55 PM

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸೋಲು ಕಂಡಿದೆ. ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ಸರ್ಕಾರ ರಚಿಸುತ್ತಿದೆ. ಈ ಸೋಲಿನ ಹೊಣೆಯನ್ನು ತಾವು ಹೊತ್ತುಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ ಮುಂಬರುವ ಎಂಪಿ ಚುನಾವಣೆ ಕಡೆ ಗಮನ ಹರಿಸಿ ಗೆಲ್ಲುವ ಭರವಸೆಯನ್ನು ಅವರು ನೀಡಿದ್ದಾರೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಅವರು ಕೆಲಸ ಮಾಡಲಿದ್ದಾರೆ.

ಮೇ 10ರಂದು 224 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಎಕ್ಸಿಟ್​ಪೋಲ್ ರಿಸಲ್ಟ್​ನಲ್ಲಿ ಚುನಾವಣೆ ಫಲಿತಾಂಶ ಅತಂತ್ರವಾಗಲಿದೆ ಎಂದು ಬಂತು. ಆದರೆ, ಇದು ಸುಳ್ಳಾಗಿದೆ. ಕಾಂಗ್ರೆಸ್ ಸ್ಪಷ್ಟಬಹುಮತೊಂದಿಗೆ ಸರ್ಕಾರ ರಚಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಪಕ್ಷಗಳು ಹೀನಾಯ ಸೋಲು ಕಂಡಿವೆ. ಈ ಸೋಲಿನ ಹೊಣೆಯನ್ನು ನಳೀನ್ ಕುಮಾರ್ ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ.

‘ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ನಾನೇ ಹೊತ್ತುಕೊಳ್ಳುತ್ತೇನೆ. ವಿರೋಧ ಪಕ್ಷದಲ್ಲಿದ್ದುಕೊಂಡು ಒಳ್ಳೆಯ ಕೆಲಸ ಮಾಡುತ್ತೇವೆ. ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ಬಿಜೆಪಿಯಿಂದ ಆಯ್ಕೆ ಆಗಿರುವವರಿಗೆ ಅಭಿನಂದನೆ ಸಲ್ಲಿಸ್ತೇನೆ. ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸುತ್ತೇನೆ. ಜನತೆಯ ತೀರ್ಪನ್ನು ಸ್ವಾಗತಿಸುತ್ತೇವೆ.  ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ. ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ಆಗಿ ನಾನು ಹೊಣೆ ಹೊರುತ್ತೇನೆ. ಸೋತಿರೋ ಕಡೆ ಯಾಕೆ ಸೋತಿದ್ದೇವೆ ಎಂದು ಪರಾಮರ್ಶೆ ಮಾಡ್ತೇವೆ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್ಡೇಟ್ –

ವಿಧಾನಸಭೆ ಚುನಾವಣೆ ತಾಜಾ ಸುದ್ದಿ –