AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್: ನಾಮಪತ್ರ ಸಲ್ಲಿಸಲು ಹೋಗುತ್ತಿದ್ದೇನೆ ಎಂದ ಡಿಕೆ ಸುರೇಶ್

ಇಂದು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆ ಹೋಗುತ್ತಿದ್ದೇನೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ಹೊಸ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಹುಟ್ಟು ಹಾಕಿದ್ದಾರೆ.

ರಾಜ್ಯ ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್: ನಾಮಪತ್ರ ಸಲ್ಲಿಸಲು ಹೋಗುತ್ತಿದ್ದೇನೆ ಎಂದ ಡಿಕೆ ಸುರೇಶ್
ಡಿಕೆ ಸುರೇಶ್, ಕಾಂಗ್ರೆಸ್ ಸಂಸದ
ರಮೇಶ್ ಬಿ. ಜವಳಗೇರಾ
|

Updated on:Apr 20, 2023 | 1:35 PM

Share

ರಾಮನಗರ/ಬೆಂಗಳೂರು: ನಾಮಪತ್ರ(Nomination) ಸಲ್ಲಿಕೆ ಇಂದು(ಏಪ್ರಿಲ್ 20) ಕೊನೆ ದಿನವಾಗಿದ್ದು, ಕೊನೆ ಕ್ಷಣದಲ್ಲಿ ರಾಜ್ಯ ಚುನಾವಣಾ ಅಖಾಡದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಹೌದು.. ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಸಂಸದ ಡಿಕೆ ಸುರೇಶ್ (Congress MP DK Suresh)​ ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಸ್ಪರ್ಧೆ ಮಾಡಲಿದ್ದಾರೆ. ಇದಕ್ಕೆ ಸ್ವತಃ ಡಿಕೆ ಸುರೇಶ್​ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಕೂಡ ನಾಮಪತ್ರ ಸಲ್ಲಿಸುತ್ತೇನೆ. ಹೀಗಾಗಿ ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆದ್ರೆ, ನಾಮಪತ್ರ ಸಲ್ಲಿಕೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಇದರಿಂದ ಡಿಕೆ ಸುರೇಶ್ ಅವರ ರಾಜಕೀಯ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಡಿಕೆ ಬ್ರದರ್ಸ್​​ ಪ್ರತಿತಂತ್ರ: ಆರ್ ಅಶೋಕ್​ರನ್ನ ಕಟ್ಟಿಹಾಕಲು ಪ್ರದ್ಮನಾಭನಗರದಿಂದ ಡಿಕೆ ಸುರೇಶ್​​ ಸರ್ಧೆ ?

ಇಂದು (ಏಪ್ರಿಲ್ 20) ಈ ಬಗ್ಗೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಕೂಡ ನಾಮಪತ್ರ ಸಲ್ಲಿಸುತ್ತೇನೆ.ಹೀಗಾಗಿ ಬೆಂಗಳೂರಿಗೆ ಹೋಗುತ್ತಿದ್ದೇನೆ. ಯಾವ ಕ್ಷೇತ್ರದಿಂದ ಅರ್ಜಿ ಹಾಕುತ್ತೇನೆ ಎಂದು ನನಗೂ ಗೊತ್ತಿಲ್ಲ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಎಲ್ಲಾದರೂ ಒಂದು ಕಡೆ ಅರ್ಜಿ ಹಾಕುತ್ತೇನೆ. ಕಾದುನೋಡಿ ಎಂದು ಹೊಸ ಬಾಂಬ್ ಸಿಡಿಸಿದರು.

ಇನ್ನು ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ಮಂಡ್ಯ ರಾಜಕಾರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಮ್ಮ ಪಕ್ಷದ ವರಿಷ್ಠರು ಗೆಲ್ಲುವ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಪಕ್ಷ ಸಂಘಟನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಂಡಿದ್ದೇವೆ. ನಾನು ಸುಪಾರಿ ಕಿಲ್ಲರ್​ ಆಗಲ್ಲ. ತತ್ವ ಸಿದ್ಧಾಂತ ಇಟ್ಟುಕೊಂಡಿದ್ದೇವೆ. ನನ್ನನ್ನು ಯಾರು ಸುಪಾರಿ ಕಿಲ್ಲರ್​ ಎಂದು ಹುಟ್ಟಾಕಿದ್ದಾರೋ ಗೊತ್ತಿಲ್ಲ ಎಂದರು.

ಕನಕಪುರದಲ್ಲಿ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ಸಚಿವ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಸಹ ಬೆಂಗಳೂರಿನ ಪದ್ಮನಾಭನಗರದಲ್ಲಿ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸು ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿದೆ. ಇದರ ಮಧ್ಯೆ ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು ಅವರಿಗೆ ಫಾರಂ ಬಿ ನೀಡದ್ದು, ಅದರಂತೆ ಅವರು ನಿನ್ನೆ (ಏಪ್ರಿಲ್ 19) ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಇದೀಗ ಡಿಕೆ ಸುರೇಶ್ ಕುಮಾರ್ ಅವರು ನಾಮಪತ್ರ ಸಲ್ಲಿಸಲು ಬೆಂಗಳೂರಿಗೆಹೋಗುತ್ತುದ್ದೇನೆ ಎಂದು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:25 pm, Thu, 20 April 23