ಮೋದಿಯವರನ್ನು ವಿಷಸರ್ಪ ಅಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ: ಕ್ಷಮೆ ಕೇಳಲ್ಲ ಎಂದ ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

Follow us
ವಿವೇಕ ಬಿರಾದಾರ
|

Updated on:May 01, 2023 | 1:19 PM

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ (Sonia Gandhi) ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ‌ ಕಂಪನಿಗೆ ಕಾಂಗ್ರೆಸ್ (Congress) ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡುತ್ತೇನೆ. ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಿಡಿಸದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಲ್ಲರಕ್ಕಿಂತ ನಾನು ಗಟ್ಟಿಯಾಗಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರದು ನಮ್ಮ ತರಹ ಸ್ಟ್ರಾಂಗ್ ಹಿಂದೂತ್ವ ಅಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಕನಸು ಕಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಚಿತ ಗ್ಯಾಸ್, ನಂದಿನಿ ಹಾಲು ಸೇರಿದಂತೆ ಬಿಜೆಪಿ ಪ್ರಜಾ ಪ್ರಣಾಳಿಕೆ ಮುಖ್ಯಾಂಶಗಳು ಇಲ್ಲಿವೆ

ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣನೆ ಮಾಡಿದೆ ಎನ್ನುವ ಹೇಳಿಕೆ  ವಿಚಾರವಾಗಿ ಮಾತನಾಡಿದ ಅವರು ಅವರ ಹತ್ತೀರನೇ ಅಧಿಕಾರ ಇದೆ ಅಲ್ಲ. ಕೆಲವೊಮ್ಮೆ ಅಧಿಕಾರ ಹೋಗತ್ತೆ ಬಿಡಿ. ನಾನು ಸ್ವಲ್ಪ ಸ್ಟೇಟ ಫಾರ್ವರ್ಡ್, ಕುಟುಂಬ ರಾಜಕಾರಣಕ್ಕೆ ವಿರೋಧಿ. ಇವಾಗ ನನಗೂ ಅಧಿಕಾರ ಇಲ್ಲ. ನನ್ನ ಮುಖ್ಯಮಂತ್ರಿ ಅಭ್ಯರ್ಥಿ ಅಂತೀರಿ. ನಾನು ಲಿಂಗಾಯತರಿಗೆ ಅನ್ಯಾಯ ಮಾಡಿಲ್ಲ. ನಾನು ಗೆಲ್ಲುತ್ತೇನೆ ಲೀಡ್ ನೋಡಲ್ಲ ಎಂದರು.

ಜಗದೀಶ್ ಶೆಟ್ಟರ್ ಯಾವತ್ತೂ ಹಿಂದುತ್ವದ ಪರ ಮಾತಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಗಲಾಟೆಯಾದಗ 4 ಜನರನ್ನು ಎನಕೌಂಟರ್ ಮಾಡಬೇಕಿತ್ತು. ಹಳೇ ಹುಬ್ಬಳ್ಳಿಯಲ್ಲಿ ಗಲಾಟೆ ಮಾಡಿದಾಗ ಶೆಟ್ಟರ್ ಕಡೆ ಅಧಿಕಾರ ಇತ್ತು. ಪೊಲೀಸ್ ಠಾಣೆಗ ಹೋದವರನ್ನು ನಾಲ್ಕು ಜನರನ್ನ ಎನಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಲಿಂಗಾಯತ ಜಪ ಮಾಡುತ್ತಿದ್ದಾರೆ. ನಾವು ಸಭೆ ಮಾಡಿದ್ದು ನಿಜ, ಜಗದೀಶ್​ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದರ ಪರಿಣಾಮ ಏನಾಗುತ್ತೆ ಎಂದು ಚರ್ಚೆ ಮಾಡಿದ್ದೇವೆ. ಲಿಂಗಾಯತ ಮುಖ್ಯಮಂತ್ರಿ ಅನ್ನೋ ಪ್ರಶ್ನೆ ಇಲ್ಲ. ಕಾಂಗ್ರೆಸ್​ಗೆ ತಾಕತ್ ಧಮ್ ಇದ್ದರೇ ಲಿಂಗಾಯತ ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದರು.

ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರದಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯಪುರದಲ್ಲಿ ಹಿಂದೂ ಮುಸ್ಲಿಂ ಇಲೆಕ್ಷನ್ ರೀ. ಅಲ್ಲಿ ಯಾರಾದರು ಹಿಂದೆ ಪಡೆಯಲಿ ಅಥವಾ ಬಿಡಲಿ ತಲೆ ಕೆಡಿಸಿಕೊಳ್ಳಬೇಡಿ. ಯಾವ ಬಿಗ್ ಶಾಕ್ ಇಲ್ಲ. ನನ್ನ ಶಾಕ್ ಬೇರೆ ಇದೆ ಎಂದು ಮಾತನಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Mon, 1 May 23

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್