Karnataka Assembly Election 2023: ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ: ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವರುಣಾ (Varuna) ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ಹೇಳಿದ್ದಾರೆ. ” ತಂದೆ, ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ, ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಆದರೆ ಈಗ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ”.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದರು.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ಸೇರಿ ಯಾರೇ ಸ್ಪರ್ಧಿಸಿದರೂ ನಾವು ಫೈಟ್ ಮಾಡಲು ಸಿದ್ಧವಿದ್ದೇವೆ. ವರುಣಾ ಕ್ಷೇತ್ರದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ವರುಣಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ, ಹಾಗಾಗಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:27 pm, Sat, 1 April 23