AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ: ಹೆಚ್​ ಡಿ ಕುಮಾರಸ್ವಾಮಿ

ಹೆಚ್​.ಡಿ.ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ. ಶಕುನಿಗಳು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮುಗಿಸಬೇಕು ಅಂತಿವೆ. ಹಾಸನ ಕ್ಷೇತ್ರದ ಟಿಕೆಟ್​ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್​ ಗೆಲ್ಲಿಸಬೇಕೆಂಬುದೆ ನನ್ನ ಗುರಿ. ಹೆಚ್​.ಡಿ.ರೇವಣ್ಣ 2 ಕ್ಷೇತ್ರಗಳ ಟಿಕೆಟ್​ ಕೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ: ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on:Apr 11, 2023 | 1:11 PM

Share

ಹಾಸನ: ಹಾಸನ (Hassan) ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಗೆಲ್ಲಲ್ಲ. ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ. ವಾಸ್ತವಿಕ, ಗ್ರೌಂಡ್​ ರಿಯಾಲಿಟಿ ಮೇಲೆ ಟಿಕೆಟ್​​ ನೀಡುತ್ತೇವೆ. ಒಂದೂವರೆ ವರ್ಷದ ಹಿಂದೆ ಹಾಸನದ ಶಾಸಕರು ಸವಾಲು ಹಾಕಿದ್ದರು. ಹಾಗಾಗಿ ಸಾಮಾನ್ಯ ಕಾರ್ಯಕರ್ತನ ನಿಲ್ಲಿಸಿ ಗೆಲ್ಲುತ್ತೇನೆ ಎಂದಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿ ಮಠಕ್ಕೆ ತೆರಳಿ, ಸ್ವಾಮೀಜಿ ದರ್ಶನ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತಾನಾಡಿದ ಅವರು ಹೆಚ್​.ಡಿ.ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ. ಶಕುನಿಗಳು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮುಗಿಸಬೇಕು ಅಂತಿವೆ. ಹಾಸನ ಕ್ಷೇತ್ರದ ಟಿಕೆಟ್​ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್​ ಗೆಲ್ಲಿಸಬೇಕೆಂಬುದೇ ನನ್ನ ಗುರಿ. ಹೆಚ್​.ಡಿ.ರೇವಣ್ಣ 2 ಕ್ಷೇತ್ರಗಳ ಟಿಕೆಟ್​ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಹಾಸನ ‘ಕುಟುಂಬ ಕಲಹಕ್ಕೆ’ ಹೊಸ ತಂತ್ರ ಮುಂದಿಟ್ಟ ಹೆಚ್​ಡಿ ರೇವಣ್ಣ, ಇಷ್ಟಕ್ಕೂ ಅವರ ಇರಾದೆ ಏನು? ದೊಡ್ಡಗೌಡರು ತಥಾಸ್ತು ಅಂತಾರಾ?

ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ನಡೆಯುತ್ತಿದೆ. ನಾನು ನಿರಂತರವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೆನೆ. ಕೆಲವು ಸಣ್ಣ- ಪುಟ್ಟ ಸಮಸ್ಯೆಗಳಿಂದ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಗೊಂದಲ ಬಗ್ಗೆ ಹಲವಾರು ಚರ್ಚೆ, ನಾಲ್ಕು ಗೋಡೆಗಳ ಮಧ್ಯೆ ನಡೆದಿದ್ದು, ಮಾಧ್ಯಮಗಳಿಗೆ ತಮಗೆ ಏನು ಬೇಕೋ ಹಾಗೇ ಮಾತನಾಡುತ್ತಿದ್ದಾರೆ‌ ಎಂದು ಮಾಧ್ಯಮಗಳ ಮೇಲೆ ಹರಿಹಾಯ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಈಗ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಈ ಹಿಂದೆ ದಲಿತ ಕಾರ್ಡ್​ನನ್ನು ಕೊಟ್ಟಾಗ ಅವರು ಉಪಯೋಗ ಮಾಡಿಕೊಳ್ಳಿಲ್ಲ. ಈಗ ಅವರು ದಲಿತ ಸಿಎಂ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:07 pm, Tue, 11 April 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ