ನಾನು ಸರೆಂಡರ್ ಆಗಲ್ಲ: ಡಿಕೆ ಶಿವಕುಮಾರ್ ಹೀಗ್ಯಾಕೆ ಹೇಳಿದರು ಗೊತ್ತಾ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ. ಈ ನಡುವೆ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಕೂಡ ಹೈಕೋರ್ಟ್ ವಜಾ ಗೊಳಿಸಿದೆ. ಚುನಾವಣೆ ಸಮಯದಲ್ಲಿ ಡಿಕೆಶಿಗೆ ಇದು ದೊಡ್ಡ ಸಂಕಷ್ಟ ತಂದೊಡ್ಡಿದೆ.

ನಾನು ಸರೆಂಡರ್ ಆಗಲ್ಲ: ಡಿಕೆ ಶಿವಕುಮಾರ್ ಹೀಗ್ಯಾಕೆ ಹೇಳಿದರು ಗೊತ್ತಾ?
ಡಿಕೆ ಶಿವಕುಮಾರ್
Follow us
Rakesh Nayak Manchi
|

Updated on:Apr 20, 2023 | 6:55 PM

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ (CBI) ತನಿಖೆಗೆ ಆದೇಶಿಸಿದೆ. ಈ ನಡುವೆ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಕೂಡ ಹೈಕೋರ್ಟ್ (High Court) ವಜಾ ಗೊಳಿಸಿದೆ. ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಇದು ದೊಡ್ಡ ಸಂಕಷ್ಟ ತಂದೊಡ್ಡಿದೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಅವರು, ರಾಹುಲ್ ಗಾಂಧಿ ಅವರನ್ನೇ ಬಿಡಲಿಲ್ಲ, ಇನ್ನು ನನ್ನನ್ನು ಬಿಡುತ್ತಾರಾ? ಯಾರು ಏನೇ ಮಾಡಿದರೂ ಡಿಕೆ ಶಿವಕುಮಾರ್ ಸರೆಂಡರ್ ಆಗಲ್ಲ ಎಂದು ಹೇಳಿದರು.

ಈಗಿರುವ ಬಿಜೆಪಿ ಅಭ್ಯರ್ಥಿ ಮೊದಲು ನನ್ನನ್ನು ಸಂಪರ್ಕಿಸಿದ್ದರು, ನಮ್ಮ ಅಂಗಡಿ ಕ್ಲೋಸ್ ಆಗಿದೆ, ನಿಮಗೆ ಎಲ್ಲಿಂದ ಕುರ್ಚಿ ಕೊಡಲಿ ಅಂತ ಹೇಳಿದ್ದೆ ಎಂದು ಹೇಳಿದ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಲಿಂಬಿಕಾಯಿ ಎಲ್ಲಾ ಬಿಜೆಪಿ ಬಿಟ್ಟು ಬಂದಿದ್ದಾರೆ ಎಂದರು. ಅಲ್ಲದೆ, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್​ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾವಿರ ಕೋಟಿ ಒಡೆಯ ಡಿಕೆ ಶಿವಕುಮಾರ್ ಆಸ್ತಿ ವಿವರ ಘೋಷಣೆ

ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ ಜಿ ಪರಮೇಶ್ವರ್ ನಡುವೆ ಸಿಎಂ ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ. ಹೋದಲ್ಲಿ ಬಂದಲ್ಲಿ ಸಿಎಂ ಆಗುವ ಆಸೆ ಬಿಚ್ಚಿಡುತ್ತಿದ್ದಾರೆ. ಅದೇ ರೀತಿ ಮಂಡ್ಯದ ಸಮಾವೇಶದಲ್ಲೂ ಮಾತಿನ ನಡುವೆ ಡಿಕೆ ಶಿವಕುಮಾರ್, ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ. ಮಂಡ್ಯದ ಜೀವಾಳ ಮೈ ಶುಗರ್ ಕಾರ್ಖಾನೆ, ಮಂಡ್ಯದ ಜೀವಾಳ ಮೈ ಶುಗರ್ ಕಾರ್ಖಾನೆಗೆ ಶಾಶ್ವತ ಪರಿಹಾರ ಮಾಡಿಕೊಡುವ ಶಕ್ತಿ ನನಿಗೆ ನೀಡಿ ಎಂದು ಹೇಳಿದರು.

ಕಾರ್ಯಕರ್ತರನ್ನು ಗದರಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಭಾಷಣ ಮಾಡಲು ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಗರಂ ಆದ ಕೆಪಿಸಿಸಿ ಅಧ್ಯಕ್ಷರು, ಕಾರ್ಯಕರ್ತರನ್ನು ಗದರಿದರು. ನಂತರ ಮಾತನಾಡಿದ ಅವರು, ಮಂಡ್ಯದಲ್ಲಿ 10 ರಿಂದ 16 ಮಂದಿ ಟಿಕೆಟ್​ಗಾಗಿ ಅರ್ಜಿ ಹಾಕಿದ್ದರು. 10 ಜನ ಅಭ್ಯರ್ಥಿಗಿಂತ ತುಂಬಾ ಸೀನಿಯರ್ ಆಗಿದ್ದರು, ಅರ್ಹತೆ ಕೂಡ ಇತ್ತು. ಎಲ್ಲರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಲ್ಲರನ್ನ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಸರ್ವರಿಗೂ ಸಮಬಾಳು ಸಮಪಾಲು ರೀತಿ ಇರಬೇಕು, ಯಾರ ಸ್ವಾಭಿಮಾನ ಧಕ್ಕೆ ಬರಬಾರದು ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Thu, 20 April 23

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!