AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಶಿವರಾಜಕುಮಾರ್ ​ಪ್ರಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಯಿ ಹೇಳಿದ್ದೇನು?

ನಟ ಶಿವರಾಜಕುಮಾರ್​ ಪ್ರಚಾರಕ್ಕೆ ಸಂಸದ ಪ್ರತಾಪ್ ಸಿಂಹ, ಸಚಿವ ವಿ. ಸೋಮಣ್ಣ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ನಟ ಶಿವರಾಜಕುಮಾರ್ ​ಪ್ರಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಯಿ ಹೇಳಿದ್ದೇನು?
ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ
ವಿವೇಕ ಬಿರಾದಾರ
|

Updated on:May 06, 2023 | 12:16 PM

Share

ಹುಬ್ಬಳ್ಳಿ: ನಟ ಶಿವರಾಜಕುಮಾರ್ (Shivarajkumar)​ ಪ್ರಚಾರಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಮತ್ತು ಸಚಿವ ವಿ. ಸೋಮಣ್ಣ (V Somanna) ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ, ನಟರು ಯಾವ ಪಕ್ಷ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದರೇ ನನಗೇನು ಅಭ್ಯಂತರವಿಲ್ಲ. ಕಾಂಗ್ರೆಸ್​ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಹ ಬರುತ್ತಿದ್ದಾರೆ. ಇಂದು (ಮೇ.06) ಹಾವೇರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಬರುತ್ತಿದ್ದಾರೆ. ಮೊದಲಿಗಿಂತಲೂ ಈಗ ಪ್ರಧಾನಿ ಮೋದಿಯವರ ಅಲೆ ಜಾಸ್ತಿಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹುಬ್ಬಳ್ಳಿಯಲ್ಲಿ ಅವರು ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ನಟ ಶಿವರಾಜಕುಮಾರ್ ಪ್ರಚಾರ

ಇನ್ನು ಹುಬ್ಬಳ್ಳಿಯಲ್ಲಿ ಇಂದು ನಟ ಶಿವರಾಜಕುಮಾರ್​ ಹುಬ್ಬಳ್ಳಿ-ಧಾರವಾಡ‌ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಮಾಡಲಿದ್ದಾರೆ. ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನಾಗಶೆಟ್ಟಿಕೊಪ್ಪದಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದಾರೆ. ನಾಗಶೆಟ್ಟಿಕೊಪ್ಪದಿಂದ ರಾಮನಗರದ ವರೆಗೂ ಬೃಹತ್ ರೋಡ್‌ಶೋ ಮಾಡಲಿರುವ ಶಿವಣ್ಣ.

ಏನಿದು ಶಿವಣ್ಣ vs ಪ್ರತಾಪ್​​ ಸಿಂಹ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ತೆರಳಿರುವ ನಟ ಶಿವರಾಜ್‌ ಕುಮಾರ್‌ ಅವರ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಸದರ ಟ್ವೀಟ್​ನಲ್ಲಿ ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವ ಭಾವ ಭಕುತಿಗೆ ಎಂದಿದ್ದಾರೆ. ಈ ಮೂಲಕ ನಟ ಶಿವರಾಜ್‌ ಕುಮಾರ್‌ಗೆ ಟಾಂಗ್‌ ನೀಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಸೆಂಟ್ರಲ್ ನಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ – ಲಿಂಗಾಯತರ ಮತ ಕೈ ತಪ್ಪದಂತೆ ನೋಡಿಕೊಳ್ಳಲು ಸಂಕೇಶ್ವರ್ ಸಹಕಾರ ಕೋರಿದ ಪ್ರಲ್ಹಾದ್ ಜೋಶಿ

ಪುನಿತ ರಾಜಕುಮಾರ್ ಆಸ್ಪತ್ರೆ​​

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸಚಿವ ಸೋಮಣ್ಣ ಅವರು ತಮ್ಮ ಕ್ಷೇತ್ರದಲ್ಲಿ ನಿರ್ಮಿಸಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ನಟ ಪುನೀತ್‌ ರಾಜ್‌ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಿದ್ದರು. ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಸೋಮಣ್ಣ ಅವರ ಕಾರ್ಯವನ್ನು ಶ್ಲಾಘಿಸಿದ್ದರು. ಸದ್ಯ ಸಚಿವ ಸೋಮಣ್ಣ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಅವರು ವಿರೋಧಿ ಅಭ್ಯರ್ಥಿಯಾದ ಸಿದ್ದರಾಮಯ್ಯ ಅವರ ಪರ ಪ್ರಚಾರದಲ್ಲಿ ಶಿವರಾಜ್‌ ಕುಮಾರ್‌ ಭಾಗಿಯಾಗಿರುವುದು ಪ್ರತಾಪ್‌ ಸಿಂಹ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಶಿವಣ್ಣ ಹೇಳಿದ್ದೇನು

ವಿ.ಸೋಮಣ್ಣ, ಪ್ರತಾಪಸಿಂಹ ನಮಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ನಮಗೆ ಗೌರವ ಇದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಕರೆದರೆ ಅವರ ಪರವಾಗಿಯೂ ನಾನು ಪ್ರಚಾರಕ್ಕೆ ಹೋಗುತ್ತೇನೆ. ಬಿಜೆಪಿಯವರು ಯಾರೂ ನನ್ನನ್ನ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಾಪ್​ ಸಿಂಹ ಹೇಳಿದ್ದೇನು

ಅವರು (ಶಿವರಾಜ್​ಕುಮಾರ್​) ಏನು ಮಾತನಾಡಿದ್ದಾರೆ ಅನ್ನೋದನ್ನ ಕೇಳಿದ್ದೇನೆ. ನಾನು ಶಿವಣ್ಣನ ಅಭಿಮಾನಿ. ನಾನು ಅವರ ಮನ ಮೆಚ್ಚಿದ ಹುಡುಗಿ, ರಥ ಸಪ್ತಮಿ ಸಿನಿಮಾಗಳನ್ನು ನೋಡ್ಕೊಂಡು ಬಂದಿದ್ದೀನಿ. ಶಿವಣ್ಣ ಭೇಟಿಯಾದಾಗಲೆಲ್ಲ ನಮಸ್ಕಾರ ಮಾಡುತ್ತೇನೆ. ಅವರ ಇಡೀ ಕುಟುಂಬವನ್ನು ನಾವು ರಾಜಕೀಯದ ಹೊರತಾಗಿ ನೋಡುತ್ತೇವೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sat, 6 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು