AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್?

ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಬಂದು ನಾಲ್ಕು ದಿನಗಳು ಕಳೆದರೂ ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಸಿದ್ದರಾಮಯ್ಯ ಅಥವಾ ಡಿಕೆಶಿ ಯಾರಾಗ್ತಾರೆ ಸಿಎಂ ಎಂಬ ಕುತೂಹಲದ ಮಧ್ಯೆ ಇದೀಗ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬೆಳಗಾವಿ ಕಾಂಗ್ರೆಸ್‌ ಶಾಸಕರು ಲಾಭಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್?
ಬೆಳಗಾವಿ ಸಚಿವಾಂಕ್ಷಿಗಳು
ಕಿರಣ್ ಹನುಮಂತ್​ ಮಾದಾರ್
|

Updated on: May 18, 2023 | 9:17 AM

Share

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ(Karnataka Assembly Elections 2023 Result)ಬಂದು ನಾಲ್ಕು ದಿನಗಳು ಕಳೆದರೂ ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್​ ಯಾರಾಗ್ತಾರೆ ಸಿಎಂ ಎಂಬ ಕುತೂಹಲದ ಮಧ್ಯೆ, ಇದೀಗ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬೆಳಗಾವಿ ಕಾಂಗ್ರೆಸ್‌ ಶಾಸಕರು ಲಾಭಿ ನಡೆಸಿದ್ದಾರೆ. ಬೆಂಗಳೂರಲ್ಲೇ ಬೀಡು ಬಿಟ್ಟಿರುವ ಬೆಳಗಾವಿ ಕಾಂಗ್ರೆಸ್‌ ನಾಯಕರು ಸಚಿವ ಸ್ಥಾನ ಪಡೆದೇ ಬೆಳಗಾವಿಗೆ ಹೋಗೋಣವೆಂದು ಕಸರತ್ತು ನಡೆಸಿದ್ದಾರೆ. ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್

ಬಿಜೆಪಿ ಭದ್ರಕೋಟೆಯಾಗಿದ್ದ ಬೆಳಗಾವಿಯಲ್ಲಿ ಈಗ ಕಾಂಗ್ರೆಸ್ ಪಾರುಪತ್ಯ ಶುರುವಾಗಿದೆ. ಇನ್ನು ಸಿದ್ದರಾಮಯ್ಯ ಶಿಷ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದೆ. ಆದ್ರೆ, ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಬೆಳಗಾವಿಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಲಿಂಗಾಯತ 7, ಎಸ್ಸಿ 1, ಬ್ರಾಹ್ಮಣ1, ಎಸ್ಟಿ 1, ಮುಸ್ಲಿಂ 1 ಸೇರಿ 11 ಕೈ ಶಾಸಕರು, ಇಬ್ಬರು ಎಂಎಲ್‌ಸಿಗಳು ಇದ್ದು, ಲಿಂಗಾಯತ ನಾಯಕರ ಮಧ್ಯೆಯೇ ಸಚಿವರಾಗಲು ಹೆಚ್ಚಿನ ಪೈಪೋಟಿ ನಡೆಯುತ್ತಿದೆ.

ಇದನ್ನೂ ಓದಿ:ಸತೀಶ್​ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಬದ್ಧತೆಯಿದ್ದರೆ ಕಾಂಗ್ರೆಸ್ ಕ್ರಮಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ

ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ

ಐವರು ಲಿಂಗಾಯತ ಶಾಸಕರ ಮಧ್ಯೆ ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಶುರುವಾಗಿದೆ. ಹೌದು ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ್ ಸವದಿ, ಪ್ರಕಾಶ್ ಹುಕ್ಕೇರಿ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ್ ಮಧ್ಯೆ ಸಚಿವ ಸ್ಥಾನಕ್ಕೆ ಫೈಟ್ ಶುರುವಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ ಅಥಣಿ ಜೊತೆ ಕಾಗವಾಡ, ಕುಡಚಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿರುವ ಲಕ್ಷ್ಮಣ್ ಸವದಿ ಪ್ರಬಲ ಹುದ್ದೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆದು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಜಯ ಸಾಧಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಕೋಟಾದಡಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಜೊತೆಗೆ ಸತತ ಮೂರು ಬಾರಿ ಚಿಕ್ಕೋಡಿಯಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಂಎಲ್‌ಸಿ ಪ್ರಕಾಶ್​ ಹುಕ್ಕೇರಿ ತಮಗೆ ಇಲ್ಲವೇ, ತಮ್ಮ ಮಗ ಗಣೇಶ್ ಹುಕ್ಕೇರಿಗೆ ಸಚಿವ ಸ್ಥಾನ ನೀಡಲು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮನವಿ ಕೂಡ ಮಾಡಿದ್ದಾರೆ. ಇನ್ನು 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ತ್ಯಜಿಸಿ ಲೋಕಸಭೆಗೆ ಸ್ಪರ್ಧಿಸಿದ್ದರು. ಹೀಗಾಗಿ ಈ ಬಾರಿ ತಮಗೆ ಇಲ್ಲ ತಮ್ಮ ಮಗನಿಗೆ ಸಚಿವ ಸ್ಥಾನ ನೀಡಲು ಪ್ರಕಾಶ್ ಹುಕ್ಕೇರಿ ಬೇಡಿಕೆ ಇಟ್ಟಿದ್ದಾರೆ. ಮತ್ತೊಂದೆಡೆ ಮೂರನೇ ಬಾರಿ ಶಾಸಕರಾಗಿರುವ ರಾಮದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿದ್ದರಾಮಯ್ಯ ಆಪ್ತ ಅಶೋಕ್ ಪಟ್ಟಣ್ ಬೈಲಹೊಂಗಲ ಕಾಂಗ್ರೆಸ್‌ ಶಾಸಕ ಮಹಾಂತೇಶ ಕೌಜಲಗಿ ಸಹ ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಈ ನಡುವೆ ಬೆಳಗಾವಿ ಜಿಲ್ಲೆಗೆ ಕನಿಷ್ಠ ‌ಮೂರು ಮಂತ್ರಿ ಸ್ಥಾನ ಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೇಳಿದ್ದಾರೆ. ಒಟ್ಟಿನಲ್ಲಿ ಐವರು ಲಿಂಗಾಯತ ಶಾಸಕರ ಪೈಕಿ ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?