ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು.

ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್
ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿ, ಪತ್ತೆಯಾದ ಹಣ
Follow us
ಆಯೇಷಾ ಬಾನು
|

Updated on: May 08, 2023 | 1:01 PM

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ₹2.54 ಕೋಟಿ ಪತ್ತೆಯಾಗಿದ್ದ ಕೇಸ್​ಗೆ ಸಂಬಂಧಿಸಿ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಕಾರಣ ಕೇಳಿ ಐಟಿ ನೋಟಿಸ್​ ನೀಡಿದೆ. ಜಿಯೋನ್​​​​​ ಹಿಲ್ಸ್​ ಗಾಲ್ಫ್ ರೆಸಾರ್ಟ್​ನ 279 ನಂಬರ್ ವಿಲ್ಲಾದಲ್ಲಿ ಹಣ ಪತ್ತೆಯಾಗಿತ್ತು. ಮತದಾರರಿಗೆ ಹಂಚಲು ತಂದಿಟ್ಟಿದ್ದ ಹಣವನ್ನು ಕೆಜಿಎಫ್ SP ಧರಣಿದೇವಿ ಜಪ್ತಿ ಮಾಡಿದ್ದರು. ಪ್ರಕರಣ ಸಂಬಂಧ ಚುನಾವಣಾಧಿಕಾರಿ ಶ್ರುತಿ ಎಫ್​ಐಆರ್ ದಾಖಲಿಸಿದ್ದರು. ಸದ್ಯ ಹಣ ಸಂಗ್ರಹದ ಮೂಲ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದ್ದು, ವಿಲ್ಲಾದ ರೂಮ್ ನಂಬರ್-279ನಲ್ಲಿ ಬೆಡ್​​ ಮೇಲೆ 500, 200, 2 ಸಾವಿರ ರೂ. ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿತ್ತು. ಬಂಗಾರಪೇಟೆ ಪಂಚಾಯಿತಿ ಹೆಸರು, ಬೂತ್​ಗಳ ಹೆಸರು ಬರೆದು ಎನ್ವಲಪ್ ಕವರ್​ಗಳಲ್ಲಿ ಹಣ ಇಟ್ಟಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ

ರೂಮ್​ನಲ್ಲಿ ಒಟ್ಟು 2 ಕೋಟಿ ರೂ. ಹಣ ಪತ್ತೆಯಾಗಿದ್ದವು. ಅಲ್ಲದೇ ವಿಲ್ಲಾದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪರಿಶೀಲನೆ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಒಂದೂವರೆ ಕೋಟಿ ಹಣ ಪತ್ತೆಯಾಗಿತ್ತು. ಹೀಗೆ ಒಟ್ಟಾರೆ 4.5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿತ್ತು. ಅಧಿಕಾರಿಗಳು ದಾಳಿ ಮಾಡುವ ಮುಂಚೆಯೇ ಹಣ ತಂದಿಟ್ಟವರು ಎಸ್ಕೇಪ್ ಆಗಿದ್ದರು.

ಇನ್ನು ದಾಖಲೆಗಳ ಪರಿಶೀಲನೆ ನಡೆಸಿದಾಗ ಈ ವಿಲ್ಲಾ ಬೆಂಗಳೂರು ಮೂಲದ ಪೋನಿಕಾ ಕಾಪಾಡಿಯಾ ವೈಫ್ ಆಫ್ ಕರನ್ ಕಾಪಾಡಿಯಾ ಎಂಬುವರ ಹೆಸರಿನಲ್ಲಿದೆ. ರಮೇಶ್ ಯಾದವ್ ಎಂಬವರು ಬಾಡಿಗೆ ಪಡೆದಿದ್ದಾರೆ ಎಂಬುದು ಗೊತ್ತಾಗಿತ್ತು. ಕಾರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮುಖಂಡನದ್ದು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸ್ರು ತನಿಖೆ ಕೈಗೊಂಡಿದ್ದರು. ಸದ್ಯ ಈಗ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಐಟಿ ನೋಟಿಸ್ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ