Karnataka Assembly Election 2023: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಹ್ಲಾದ್ ಜೋಶಿ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ರಾಷ್ಟ್ರೀಯ ಅಧ್ಯಕ್ಷರಿಗೆ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರವಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.

Karnataka Assembly Election 2023: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Follow us
ವಿವೇಕ ಬಿರಾದಾರ
|

Updated on: Apr 14, 2023 | 12:12 PM

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ರಾಷ್ಟ್ರೀಯ ಅಧ್ಯಕ್ಷರಿಗೆ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರವಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಹೇಳಿದ್ದಾರೆ. ಬಿಜೆಪಿಯಲ್ಲಿ (BJP) 52 ಹೊಸ ಮುಖಗಳಿಗೆ ಟಿಕೆಟ್​ ಕೊಡಲಾಗಿದೆ. ಕಾಂಗ್ರೆಸ್ (Congress) ಪಕ್ಷದವರಂತೆ ಅಪ್ಪ-ಮಕ್ಕಳಿಗೆ ಟಿಕೆಟ್ ಕೊಡಲ್ಲ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು (Laxman Savadi) ಕಾಂಗ್ರೆಸ್​ಗೆ ಹೋಗಬಾರದು ಎಂಬುದು ನಮ್ಮ ಅಪೇಕ್ಷೆ. ಲಕ್ಷ್ಮಣ ಸವದಿ ಅವರಿಗೆ ನಮ್ಮ ಪಾರ್ಟಿ ಎಲ್ಲವನ್ನೂ ಸಹ ಕೊಟ್ಟಿದೆ. ಪರಾಜಿತ ಲಕ್ಷ್ಮಣ ಸವದಿಯವರನ್ನು ನಮ್ಮ ಪಾರ್ಟಿ ಡಿಸಿಎಂ ಮಾಡಿತ್ತು ಎಂದರು.

ಇಂದು (ಏ.14) ಡಾ. ಬಿ. ಆರ್​ ಅಂಬೇಡ್ಕರ್​ ಅವರ ಜಯಂತಿ ನಿಮಿತ್ತ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಬಳಿ ಇರುವ ಪ್ರತಿಮೆಗೆ ಪ್ರಹ್ಲಾದ್ ಜೋಶಿ ಮಾಲಾರ್ಪಣೆ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಯೂಸ್ ಆಂಡ್​ ಥ್ರೋ ಪಕ್ಷ. ಬಿಜೆಪಿಯಲ್ಲಿ ಭವಿಷ್ಯ ಇತ್ತು, ದಯವಿಟ್ಟು ಅಲ್ಲಿಗೆ ಹೋಗಬೇಡಿ. ಬಿಜೆಪಿಯಲ್ಲಿ ಹೆಚ್ಚಿನ ಆಕಾಂಕ್ಷಿಗಳಿರುವುದರಿಂದ ಗೊಂದಲ ಆಗಿದೆ. ಯಾವ ಪಾರ್ಟಿ ಗೆಲ್ಲುತ್ತೆ, ಆ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿರುತ್ತಾರೆ. 90 ಪರ್ಸೆಂಟ್ ಇಂದು ಅಥವಾ ನಾಳೆ ಸಮಸ್ಯೆ ಬಗೆಹರಿಯುತ್ತೆ ಎಂದು ಹೇಳಿದರು.

ಇದನ್ನೂ ಓದಿ: ವರುಣಾ ರಣತಂತ್ರ: ಬಿಎಸ್​ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಯರನ್ನ ಭೇಟಿಯಾದ ವಿ ಸೋಮಣ್ಣ

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್​​ರವರ 132ನೇ ಜಯಂತಿ. ನಾಡಿನ ಜನತೆಗೆ ಡಾ.ಅಂಬೇಡ್ಕರ್ ಜಯಂತಿಯ ಶುಭಾಶಯಗಳು. ಡಾ.ಅಂಬೇಡ್ಕರ್ ಅವರು ಬಲವಾದ ಆರ್ಥಿಕ ಬುನಾದಿ ಹಾಕಿದ್ದಾರೆ. ಅಂಬೇಡ್ಕರ್ ಅವರಿ​ಗೆ ಸಿಗಬೇಕಾದ ಪ್ರಾಶಸ್ತ್ಯ ಕಾಂಗ್ರೆಸ್​ ಕಾಲದಲ್ಲಿ ಸಿಗಲಿಲ್ಲ. ನಾವು ಅಂಬೇಡ್ಕರ್ ಜನ್ಮಸ್ಥಳ, ಅಧ್ಯಯನಸ್ಥಳ ಅಭಿವೃದ್ಧಿಪಡಿಸಿದ್ದೇವೆ. ಅಂಬೇಡ್ಕರ್ ಅವರಿ​ಗೆ ಗೌರವ ಕೊಡುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಮೋದಿ ಪ್ರಧಾನಮಂತ್ರಿ ಆಗಲಿಕ್ಕೆ ಬಾಬಾಸಾಹೇಬರು ಕಾರಣ. ಸಮಾನತೆ ಮಂತ್ರ ಪ್ರಾಮಾಣಿಕ ಮಂತ್ರವನ್ನು ಅಂಬೇಡ್ಕರ್​ ಅವರು ಹೇಳಿದ್ದಾರೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ