AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟರೆ ಬಿಜೆಪಿಗೆ ನಷ್ಟವಿಲ್ಲ, ಅವರು ಮುಂದೆ ಪಶ್ಚಾತ್ತಾಪ ಪಡುತ್ತಾರೆ: ಸಿಎಂ ಬೊಮ್ಮಾಯಿ

ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಪಕ್ಷ ಬಿಟ್ಟು ಹೋದರೂ ಅವರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟರೆ ಬಿಜೆಪಿಗೆ ನಷ್ಟವಿಲ್ಲ, ಅವರು ಮುಂದೆ ಪಶ್ಚಾತ್ತಾಪ ಪಡುತ್ತಾರೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್
Rakesh Nayak Manchi
Rakesh Nayak Manchi|

Updated on:Apr 16, 2023 | 7:57 PM

Share

ವಿಜಯನಗರ: ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಪಕ್ಷ ಬಿಟ್ಟು ಹೋದರೂ ಅವರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿ ಅವರು, ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು, ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ ಎಂದರು.

ಬಿಜೆಪಿಯ ಕೆಲವು ಹಿರಿಯ ನಾಯಕರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆನಂದಸಿಂಗ್​ಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆಸರಿದು ಯುವಕರಿಗೆ ಅವಕಾಶ ಮಾಡಿಕೊಟ್ಟರು. ಜಗದೀಶ್ ಶೆಟ್ಟರ್ ಕೂಡ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ರಾಜ್ಯದಲ್ಲಿ ಪಕ್ಷ ದೊಡ್ಡ ಸ್ಥಾನಮಾನಗಳನ್ನು ನೀಡಿತ್ತು. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು.

ಇದನ್ನೂ ಓದಿ: ಪಕ್ಷ ಬಿಟ್ಟು ಹೋದವರ ವಿರುದ್ಧ ಯಡಿಯೂರಪ್ಪ ಗುಟುರು: ಮುಂದೆ ಇವರ ಬಂಡವಾಳ ಬಯಲು ಮಾಡ್ತೇವೆ, ಸವದಿ, ಶೆಟ್ಟರ್ ವಿರುದ್ಧ ವಾಗ್ದಾಳಿ

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದು ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಅವರಿಗೆ ಪಕ್ಷ ಕೊಟ್ಟ ಸ್ಥಾನಮಾನಗಳನ್ನ ನೋಡಿದರೆ ಅವರು ಹೈಕಮಾಂಡ್ ಜೊತೆ ಮಾತನಾಡಿ ಹಕ್ಕಿನಲ್ಲಿ ಸ್ಥಾನಮಾನ ಪಡೆದುಕೊಳ್ಳಬೇಕಾಗಿತ್ತು. ಆದರೂ ಅವರು ಪಕ್ಷ ತೊರೆಯುತ್ತಿದ್ದಾರೆ. ಮುಂದೆ ಅವರು ಪಶ್ಚಾತ್ತಾಪ ಪಡುತ್ತಾರೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹಂತಹಂತವಾಗಿ ಬದಲಾವಣೆ ಆಗುತ್ತದೆ. ಬಿಜೆಪಿಯಲ್ಲಿ ಲಿಂಗಾಯತರ ಕೋಟೆ ಭದ್ರವಾಗಿದೆ. ಯಡಿಯೂರಪ್ಪ ಮತ್ತು ನನ್ನಂತಹ ಸಾಕಷ್ಟು ನಾಯಕರನ್ನ ಬೆಳಿಸಿದ್ದಾರೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Sun, 16 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!