ವಿಜಯನಗರ: ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಪಕ್ಷ ಬಿಟ್ಟು ಹೋದರೂ ಅವರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿ ಅವರು, ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು, ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ ಎಂದರು.
ಬಿಜೆಪಿಯ ಕೆಲವು ಹಿರಿಯ ನಾಯಕರು ತಾವೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆನಂದಸಿಂಗ್ಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆಸರಿದು ಯುವಕರಿಗೆ ಅವಕಾಶ ಮಾಡಿಕೊಟ್ಟರು. ಜಗದೀಶ್ ಶೆಟ್ಟರ್ ಕೂಡ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ರಾಜ್ಯದಲ್ಲಿ ಪಕ್ಷ ದೊಡ್ಡ ಸ್ಥಾನಮಾನಗಳನ್ನು ನೀಡಿತ್ತು. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು.
ಇದನ್ನೂ ಓದಿ: ಪಕ್ಷ ಬಿಟ್ಟು ಹೋದವರ ವಿರುದ್ಧ ಯಡಿಯೂರಪ್ಪ ಗುಟುರು: ಮುಂದೆ ಇವರ ಬಂಡವಾಳ ಬಯಲು ಮಾಡ್ತೇವೆ, ಸವದಿ, ಶೆಟ್ಟರ್ ವಿರುದ್ಧ ವಾಗ್ದಾಳಿ
ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದು ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಅವರಿಗೆ ಪಕ್ಷ ಕೊಟ್ಟ ಸ್ಥಾನಮಾನಗಳನ್ನ ನೋಡಿದರೆ ಅವರು ಹೈಕಮಾಂಡ್ ಜೊತೆ ಮಾತನಾಡಿ ಹಕ್ಕಿನಲ್ಲಿ ಸ್ಥಾನಮಾನ ಪಡೆದುಕೊಳ್ಳಬೇಕಾಗಿತ್ತು. ಆದರೂ ಅವರು ಪಕ್ಷ ತೊರೆಯುತ್ತಿದ್ದಾರೆ. ಮುಂದೆ ಅವರು ಪಶ್ಚಾತ್ತಾಪ ಪಡುತ್ತಾರೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹಂತಹಂತವಾಗಿ ಬದಲಾವಣೆ ಆಗುತ್ತದೆ. ಬಿಜೆಪಿಯಲ್ಲಿ ಲಿಂಗಾಯತರ ಕೋಟೆ ಭದ್ರವಾಗಿದೆ. ಯಡಿಯೂರಪ್ಪ ಮತ್ತು ನನ್ನಂತಹ ಸಾಕಷ್ಟು ನಾಯಕರನ್ನ ಬೆಳಿಸಿದ್ದಾರೆ ಎಂದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:57 pm, Sun, 16 April 23