ವಿಶೇಷ ವಿಮಾನದಲ್ಲೇ ಜಗದೀಶ್ ಶೆಟ್ಟರ್ ಬೆಂಗಳೂರಿಗೆ, ಕಾಂಗ್ರೆಸ್ ಹಿರಿಯ ನಾಯಕರೊಬ್ಬರ ನಿವಾಸದಲ್ಲಿ ಮೀಟಿಂಗ್ ಫಿಕ್ಸ್

ಬಿಜೆಪಿಗೆ ಗುಡ್​ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಇದಕ್ಕೆ ಪೂಕರವೆಂಬಂತೆ ಕಾಂಗ್ರೆಸ್ ಹಿರಿಯ ನಾಯಕ ಶೆಟ್ಟರ್​ಗೆ ವಿಶೇಷ ವಿಮಾನ ಕಳುಹಿಸಿದ್ದಾರೆ. ಅಲ್ಲದೇ ಮಾತುಕತೆಗೆ ತಮ್ಮ ಮನೆಗೆ ಆಹ್ವಾನಿಸಿದ್ದಾರೆ.

ವಿಶೇಷ ವಿಮಾನದಲ್ಲೇ ಜಗದೀಶ್ ಶೆಟ್ಟರ್ ಬೆಂಗಳೂರಿಗೆ, ಕಾಂಗ್ರೆಸ್ ಹಿರಿಯ ನಾಯಕರೊಬ್ಬರ ನಿವಾಸದಲ್ಲಿ ಮೀಟಿಂಗ್ ಫಿಕ್ಸ್
Follow us
ರಮೇಶ್ ಬಿ. ಜವಳಗೇರಾ
|

Updated on:Apr 16, 2023 | 5:50 PM

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar)​ ಕೊನೆಗೂ ಅಧಿಕೃತವಾಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಏಪ್ರಿಲ್ 16) ಬೆಳಗ್ಗೆ ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿ ಅವರಿಗೆ ರಾಜೀನಾಮೆ ನೀಡಿ ಹುಬ್ಬಳಿಗೆ ವಾಪಸ್ ಆಗಿದ್ದಾರೆ. ಇದೀಗ ಜಗದೀಶ್ ಶೆಟ್ಟರ್ ಅವರ ಮುಂದಿನ ರಾಜಕೀಯ ನಡೆ ಏನು ಎನ್ನುವುದು ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಶೆಟ್ಟರ್ ಅವರು ಬಹುತೇಕ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದೆ. ಈಗಾಗಲೇ ಕೆಲ ಹಿರಿಯ ನಾಯಕರು ಜಗದೀಶ್ ಶೆಟ್ಟರ್​ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅಲ್ಲದೇ ಶೆಟ್ಟರ್​ ಅವರಿಗೆ ಬೆಂಗಳೂರಿಗೆ ಬರಲು ಕಾಂಗ್ರೆಸ್​ ನಾಯಕನೇ ವಿಶೇಷ ವಿಮಾನ ಕಳುಹಿಸಿದ್ದು, ಆ ವಿಮಾನದಲ್ಲಿ ಶೆಟ್ಟರ್ ಬೆಂಗಳೂರಿಗೆ ಹೊರಟಿದ್ದಾರೆ. ನಮ್ಮ ಬೀಗರದ್ದು ಎಂದು ಹೇಳುತ್ತ ಕಾಂಗ್ರೆಸ್​ ಮುಖಂಡರೊಂದಿಗೆ ವಿಮಾನ ಹತ್ತಿದರು.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಪತ್ನಿ ಜತೆ ಮುನೇನಕೊಪ್ಪ ಮಹತ್ವದ ಚರ್ಚೆ, ನಿರ್ಧಾರ ಬದಲಾಗಬಹುದು: ಸಚಿವ ಅಚ್ಚರಿ ಹೇಳಿಕೆ

ಶಾಮನೂರು ಶಿವ ಶಂಕರಪ್ಪ ಅವರ ಎರಡು ಹೆಲಿಕಾಪ್ಟಾರ್ ಹಾಗೂ​ ಒಂದು ವಿಮಾನ ಬೆಳಗ್ಗೆಯಿಂದ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿದೆ ಕಾಯುತ್ತಿತ್ತು. ಆದ್ರೆ, ಶೆಟ್ಟರ್​, ಸಂಜೆ ಕಾಂಗ್ರೆಸ್​ ಮುಖಂಡ ಜೊತೆ ವಿಮಾನ ಹತ್ತಿದ್ದು, ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಉದ್ಯಮಿ ಯುಬಿ ಶೆಟ್ಟಿ, ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ಆಕಾಂಕ್ಷಿ ರಜತ್ ಉಳ್ಳಾಗಡ್ಡಿ ಮಠ ಹಾಗೂ ಶಾಜಾಮನ್ ಮುಜಾಹಿದ್ ಅವರು ಜಗದೀಶ್ ಶೆಟ್ಟರ್​ ಜೊತೆ ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಹೊರಟಿದ್ದಾರೆ,

ಮಿಡ್ ನೈಟ್ ಮೀಟಿಂಗ್

ಜಗದೀಶ್ ಶೆಟ್ಟರ್​ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಲು ಹಿರಿಯ ನಾಯಕ ಶಾಮನೂರು ಶಿವಶಂಕ್ರಪ್ಪ ಅವರ ನಿವಾಸವನ್ನು ಫಿಕ್ಸ್ ಮಾಡಲಾಗಿದೆ. ಇದರಂತೆ ಜಗದೀಶ್ ಶೆಟ್ಟರ್ ಅವರು ಇಂದು ರಾತ್ರಿ ಶಾಮನೂರು ಶಿವ ಶಂಕ್ರಪ್ಪ ಅವರ ನಿವಾಸಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ಜಗದೀಶ್ ಶೆಟ್ಟರ್​ ಅವರ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ ರಾತ್ರಿ ಶಾಮನೂರು ಶಿವ ಶಂಕ್ರಪ್ಪ ಅವರ ನಿವಾಸದಲ್ಲಿ ನೇರ ನೇರವಾಗಿ ಮಾತುಕತೆಗಳು ನಡೆಯಲಿದ್ದು, ನಾಳೆ(ಏಪ್ರಿಲ್ 26) ಬಹುತೇಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇನ್ಮು ಕೆಲವರ ಜೊತೆ ಮಾತುಕತೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ನಾನು ಕೆಲವರ ಜೊತೆ ಚರ್ಚೆ ಮಾಡಬೇಕಿದೆ. ಹೆಲಿಕಾಪ್ಟರ್​ ಇರುವುದು ನಮ್ಮ ಹಿರಿಯರದ್ದು. ಶಾಮನೂರ ಗಣೇಶ ಅವರು ಹೆಲಿಕಾಪ್ಟರ್ ಕಳಸಿದ್ದಾರೆ. ನಾನು ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.

ನಾನಿನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ನಾನು ಬಿಜೆಪಿ ಶಾಸಕರಾಗಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ರೆ ಕಷ್ಟ ಆಗುತ್ತಿತ್ತು. ಹೀಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಸಂಘದ ಕೆಲ ಹಿರಿಯರು ನನ್ನ ಜೊತೆ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ನನ್ನ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ. ನನಗೆ ಎಲ್ಲ ಸ್ಥಾನ ಮಾನ ಕೊಟ್ಟಿದ್ದಾರೆ. ನಾನು ಒಪ್ಪಿಕೊಳ್ಳುತ್ತೇನೆ. ಎರಡು ಬಾರಿ ನನಗೆ ಅವಕಾಶ ಸಿಕ್ಕಾಗಲೂ ಪ್ರಮಾಣಿಕ ಕೆಲಸ ಮಾಡಿದ್ದೇನೆ. ಯಾಕೆ ನನಗೆ ಅವಕಾಶ ಕೊಟ್ಟರು ಎನ್ನುವುದನ್ನು ನಾನು ಡಿಟೇಲ್ ಮುಂದೆ ಮಾತಾಡುತ್ತೇನೆ. ಪಕ್ಷ ನನಗೆ ಎಲ್ಲ ಅವಕಾಶ ಕೊಟ್ಟಿದೆ,ಅದಕ್ಕೆ ಅಭಿನಂದನೆ. ಇದಕ್ಕೆ ಪ್ರತಿಯಾಗಿ ನಾನು ಪಕ್ಷ ಕಟ್ಟಿದ್ದೇನೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Sun, 16 April 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?