ಜಗದೀಶ್ ಶೆಟ್ಟರ್ಗೆ ಪಕ್ಷ ಟಿಕೆಟ್ ಕೊಟ್ಟೇ ಕೊಡುತ್ತದೆ: ಬಿಎಸ್ ಯಡಿಯೂರಪ್ಪ
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಪಕ್ಷ ಟಿಕೆಟ್ ಕೊಟ್ಟೇ ಕೊಡುತ್ತದೆ. MLC ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ (Jagadish Shettar) ಪಕ್ಷ ಟಿಕೆಟ್ ಕೊಟ್ಟೇ ಕೊಡುತ್ತದೆ. MLC ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟರ್ಗೆ ಟಿಕೆಟ್ ಕೊಡಿ ಎಂದು ನಾನು ವರಿಷ್ಠರಿಗೆ ಹೇಳಿದ್ದೇನೆ. ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸ್ವಂತ ಬಲದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. MLC ಸ್ಥಾನ ಕೊಟ್ಟಿದ್ರೂ ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸ್ಥಳೀಯರ ಅಭಿಪ್ರಾಯದಂತೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಅಸಮಾಧಾನಗೊಂಡವರನ್ನು ಕರೆದು ಮಾತನಾಡುತ್ತಿದ್ದೇವೆ ಎಂದು ಹೇಳಿದರು.
ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ
ಬಿಜೆಪಿ ತೊರೆಯಲು ಎಂಎಲ್ಸಿ ಲಕ್ಷ್ಮಣ ಸವದಿ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, MLC ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವನ್ನು ಕೊಟ್ಟಿದೆ. ಆದರೂ ಅವರು ಈ ರೀತಿ ತೀರ್ಮಾನ ಮಾಡಿದ್ದಾರೆ ಎಂದರು. ಶಿವಮೊಗ್ಗ ನಗರ ಟಿಕೆಟ್ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ. ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು. ಅಸಮಾಧಾನಗೊಂಡ ಎಲ್ಲರನ್ನೂ ಮನವೊಲಿಕೆ ಮಾಡುತ್ತೇವೆ. ನಮ್ಮ ಸರ್ಕಾರ ಬಂದ ಮೇಲೆ ಸೂಕ್ತ ಸ್ಥಾನಮಾನ ಕೊಡುತ್ತೇವೆ. ಈಶ್ವರಪ್ಪ ನನ್ನಂತೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಹಾಸನ ಕ್ಷೇತ್ರದ ಟಿಕೆಟ್ ವಿಚಾರ ನನಗೆ ದೇವೇಗೌಡರಿಗೆ ಮಾತ್ರ ಗೊತ್ತು: ಕುಮಾರಸ್ವಾಮಿಗೆ ಹೆಚ್ಡಿ ರೇವಣ್ಣ ಟಾಂಗ್
ತಮ್ಮೇಶ್ ಗೌಡನನ್ನು ಗೆಲ್ಲಿಸಿ ಇಲ್ಲವಾದ್ರೆ ನಾನು ತಲೆಎತ್ತಿಕೊಂಡು ಓಡಾಡಲು ಆಗಲ್ಲ
ಬ್ಯಾಟರಾಯನಪುರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ತಮ್ಮೇಶ್ ಗೌಡನನ್ನು ಗೆಲ್ಲಿಸಿಕೊಂಡು ಬರುವಂತೆ ಮನವಿ ಮಾಡಿದರು. ಗೆಲ್ಲಿಸಿಕೊಂಡು ಬರದಿದ್ದರೆ ನಾನು ತಲೆಎತ್ತಿಕೊಂಡು ಓಡಾಡಲು ಆಗಲ್ಲ. ಟಿಕೆಟ್ ವಿಚಾರವಾಗಿ ಕೊನೆಯ ನಿಮಿಷದವರೆಗೂ ಚರ್ಚೆ ಮಾಡಿದ್ದೇವೆ. ಇವನೊಬ್ಬನಿಗೋಸ್ಕರ ಗಂಟೆಗಟ್ಟಲೆ ಚರ್ಚೆ ಮಾಡಿ, ಟಿಕೆಟ್ ಫೈನಲ್ ಮಾಡಲಾಗಿದೆ. ಇಲ್ಲದಿದ್ದರೆ ನನ್ನ ಮರ್ಯಾದೆ ಉಳಿಯುವುದಿಲ್ಲ ಅಷ್ಟೇ ಎಂದರು.
ಇದನ್ನೂ ಓದಿ: ಬೈಲಹೊಂಗಲ: ಆಯ್ಕೆ ಪ್ರಕ್ರಿಯೆ ವೇಳೆ 109ಕ್ಕೆ 98 ಮತ ಪಡೆದವರಿಗಿಲ್ಲ ಬಿಜೆಪಿ ಟಿಕೆಟ್; ಸಾಮೂಹಿಕ ರಾಜೀನಾಮೆ ಪರ್ವ ಶುರು
ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರುತ್ತೇವೆ
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. ಎರಡು ಮೂರು ಕಡೆ ಗೊಂದಲ ಇದ್ದರೂ ಕೂಡಾ ಉಳಿದ ಎಲ್ಲ ಕಡೆ ಒಳ್ಳೆಯ ಅಭ್ಯರ್ಥಿಗಳ ಆಯ್ಕೆಯನ್ನು ಸಂಸದೀಯ ಮಂಡಳಿ ಮಾಡಿದೆ. ಯಾರ ಬಲ ಇಲ್ಲದೆ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.
ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 3:51 pm, Wed, 12 April 23