ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರು ಪಕ್ಷ ತ್ಯಜಿಸಿ ಕಾಂಗ್ರೆಸ್‌ಗೆ ಸೇರಿದ್ದರಿಂದ ನಷ್ಟವಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶೆಟ್ಟರ್‌ಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ. ಹಲವರಿಗೆ ಟಿಕೆಟ್ ನೀಡಲಾಗಿಲ್ಲ. ಏಕೆ ಟಿಕೆಟ್ ನೀಡುತ್ತಿಲ್ಲ ಎಂಬುದನ್ನು ಅವರಿಗೆ ತಿಳಿಸಿದ್ದೆವು. ಅದನ್ನು ಇಲ್ಲಿ ಬಹಿರಂಗಪಡಿಸಲಾಗದು. ಮತದಾರರಿಗೆ ಯಾವ ರೀತಿ ಮನವರಿಕೆ ಮಾಡಿಕೊಡಬೇಕೋ ಆ ರೀತಿ ತಿಳಿಸುತ್ತೇವೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಮತ ಬ್ಯಾಂಕ್ ಹೊಂದಿದೆ. ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಜಗದೀಶ್ ಶೆಟ್ಟರ್ ಸೋಲುತ್ತಾರೆ ಎಂದು ಹೇಳಿದರು.
ಶೆಟ್ಟರ್ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಯಾರ ಕಪಿಮುಷ್ಟಿಯಲ್ಲಿತ್ತು? ಯಾರ ಕಪಿಮುಷ್ಟಿಯಲ್ಲೂ ಇಲ್ಲ, ಹಿಂದೆ ಹೇಗಿದೆಯೋ ಹಾಗೆಯೇ ಇದೆ ಎಂದು ಅಮಿತ್ ಶಾ ಹೇಳಿದರು.
ಇದನ್ನೂ ಓದಿ: ಶಿಡ್ಲಘಟ್ಟ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದೆ, ಬಿಜೆಪಿಗೆ ಮತ ನೀಡಿ ಎಂದ ನಡ್ಡಾ
ಲಿಂಗಾಯತರಿಗೆ ಅನ್ಯಾಯತರಿಗೆ ಅನ್ಯಾಯ ಆಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತರನ್ನು ತಗೆದು ನಾವು ಲಿಂಗಾಯತರಿಗೇ ಟಿಕೆಟ್ ಕೊಟ್ಟಿದ್ದೇವೆ. ಬೇರೆಯವರಿಗೆ ಕೊಟ್ಟಿಲ್ಲ. ಕಾಂಗ್ರೆಸ್ ಇಬ್ಬರು ಲಿಂಗಾಯತ ಮುಖ್ಯಮಂತ್ರಿಗಳಿಗೆ ಅಪಮಾನ ಮಾಡಿದೆ. ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂದು ಹೇಳಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ. ಬಿಜೆಪಿ ಎಲ್ಲ ಸಮುದಾಯಕ್ಕೂ ಗೌರವ ಕೊಟ್ಟಿದೆ. ಜೆಡಿಎಸ್ ಪಕ್ಷದಲ್ಲಿ ಕುಮಾರಸ್ವಾಮಿ ಖಾಯಂ ಅಧ್ಯಕ್ಷರು. ಬಿಜೆಪಿಯಲ್ಲಿ ಅದ್ಯಕ್ಷರು ಮುಖ್ಯಮಂತ್ರಿಗಳು ಪದಾಧಿಕದಿಗಳು ಬದಲಾಗುತ್ತಾರೆ ಎಂದರು.
ಮಹದಾಯಿ ವಿವಾದವನ್ನು ಕಾಂಗ್ರೆಸ್ ಬಗೆಹರಿಸಬಹುದಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಮಹದಾಯಿ ವಿವಾದ ಬಗೆಹರಿಸಲಿಲ್ಲ. ನೀರು ಕೇಳಿದವರಿಗೆ ಕಾಂಗ್ರೆಸ್ ಸರ್ಕಾರ ಗುಂಡೇಟು ನೀಡಿತ್ತು. ಕಿತ್ತೂರು ಕರ್ನಾಟಕಕ್ಕೆ ಕಾಂಗ್ರೆಸ್‌ನಿಂದ ಅಪಮಾನ ಮಾಡುವ ಕೆಲಸ ಆಗಿದೆ. ಮಹದಾಯಿ ಹೋರಾಟಕ್ಕೆ ಕಾಂಗ್ರೆಸ್ ನ್ಯಾಯ ಒದಗಿಸಲಿಲ್ಲ. ಆದರೆ ನಮ್ಮ ಬಿಜೆಪಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಿತು. ಕೃಷ್ಣಾ ಮೇಲ್ದಂಡೆ, ತುಂಗಾ ಮೇಲ್ದಂಡೆ ಯೋಜನೆಗಳಿಗೂ ಆದ್ಯತೆ ನೀಡಿತು. ಕೆರೂರು ಲಿಫ್ಟ್ ಯೋಜನೆಗೂ ಆದ್ಯತೆ ನೀಡಿದ್ದೇವೆ. ಧಾರವಾಡ – ಬೆಳಗಾವಿ ರೈಲ್ವೆ ಯೋಜನೆಗೂ ಚಾಲನೆ ಸಿಗಲಿದೆ ಎಂದು ಶಾ ಹೇಳಿದರು.
ಸತತ ಎರಡನೇ ಬಾರಿಗೆ ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಚುನಾವಣೆಗೆ ಟಿಕೆಟ್ ನೀಡದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಗೆಲ್ಲುವ ಅರ್ಹತೆಯ ಆಧಾರದಲ್ಲಿ ಟಿಕೆಟ್ ನೀಡಿದ್ದೇವೆ. ಬಹುಸಂಖ್ಯಾತ-ಅಲ್ಪಸಂಖ್ಯಾತ ಎಂಬ ನೆಲೆಯಲ್ಲಿ ಟಿಕೆಟ್ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ