ಕರ್ನಾಟಕದಲ್ಲಿ ರಕ್ತ ರಾಜಕೀಯ: 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ಟಾಂಗ್

|

Updated on: Apr 27, 2023 | 3:27 PM

ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ನಡುವೆ ರಕ್ತ ರಾಜಕಾರಣದ ಮಾತಿನೇಟು ತೀವ್ರಗೊಂಡಿದೆ. ಇದರ ಮಧ್ಯೆ ಯುವಕನೋರ್ವ ರಕ್ತದಲ್ಲಿ ಪತ್ರ ಬರೆದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ರಕ್ತ ರಾಜಕೀಯ: 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ಟಾಂಗ್
ರಕ್ತದಲ್ಲಿ ಪತ್ರ ಬರೆದ ಯುವಕ
Follow us on

ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elcetions 2023) ಅಖಾಡದಲ್ಲಿ ರಾಜಕೀಯ ನಾಯಕರ ಮಾತಿಗೆ ಮಾತು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ರಾಜ್ಯ ರಾಜಕಾರಣದಲ್ಲಿ ರಕ್ತ ರಾಜಕೀಯ (Blood Politics) ಶುರುವಾಗಿದೆ. ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುರು ಮಾಡಿದ ರಕ್ತ ಹೇಳಿಕೆ ಇದೀಗ ಇನ್ನುಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ರಕ್ತದ ಬಗ್ಗೆ ಮಾತನಾಡುತ್ತಿದ್ದಾರೆ. ರಕ್ತ ಮಾತಿಗೆ ರಕ್ತಪತ್ರವೊಂದು ಸೇರಿಕೊಂಡಿದೆ. ಹೌದು.. ರಾಜ್ಯದಲ್ಲಿ ರಕ್ತದಲ್ಲಿ ಪತ್ರ ಬರೆಯೋ ರಾಜಕಾರಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಯುವಕ ಮುಖಂಡರೊಬ್ಬರು ರಕ್ತ ಪತ್ರ ಬರೆದಿದ್ದಾರೆ. ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ‌ ಎಂದು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಲಿಂಗಾಯತ ಯುವ ಮುಖಂಡ ಮಂಜುನಾಥ ಯಂಟ್ರುವಿ ಎನ್ನುವರು ರಕ್ತದಲ್ಲೇ ಪತ್ರ ಬರೆದು ತಿರುಗೇಟು ನೀಡಿದ್ದು, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್​ ಗೆಲ್ಲಲಿದ್ದಾರೆ ಎಂದಯ ರಕ್ತದಲ್ಲಿ ಬರೆದ ಪತ್ರದ ಪೋಟೋಗಳು ವೈರಲ್ ಆಗುತ್ತಿವೆ.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪಣ, ಮಾಜಿ ಸಿಎಂಗೆ ಮೊದಲ ಶಾಕ್ ಕೊಟ್ಟ ಪ್ರಲ್ಹಾದ್ ಜೋಶಿ

ಪತ್ರದಲ್ಲಿ ಮಾನ್ಯ ಜಗದೀಶ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ, ಈ ಸಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪನವರ ಹೇಳಿಕೆಗೆ ಟಾಂಗ್ ತಿರುಗೇಟು ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳೀಗೆ ಪ್ರತಿಕ್ರಿಯಿಸಿರುವ ಮಂಜುನಾಥ ಯಂಟ್ರೂವಿ, ಒಬ್ಬ ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನೇ ಎತ್ತಿ ಕಟ್ಟಲಾಗುತ್ತಿದೆ. ರಕ್ತದಲ್ಲಿ ಬರೆದು ಕೊಡ್ತೇನೆ ಶೆಟ್ಟರ್ ಸೋಲುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ ನಾನು ರಕ್ತದಲ್ಲಿ ಬರೆದುಕೊಡ್ತೀನಿ ಯಾವುದೇ ಕಾರಣಕ್ಕೆ ಶೆಟ್ಟರ್ ಅವರು ಸೋಲುವುದಿಲ್ಲ. ಶೆಟ್ಟರ್ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ರಾಜಕೀಯ ನಾಯಕರ ಮಾತುಗಳನ್ನ ನಾನು‌ ಕೃತಿಯಲ್ಲಿ ತೋರಿಸುತ್ತೇನೆ ಎಂದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಚಿಮ್ಮಿದ ರಕ್ತ

ಹೌದು…ಆರೋಪ ಪ್ರತ್ಯಾರೋಗಳ ಮಧ್ಯೆ ನಾಯರ ಬಾಯಲ್ಲೇ ರಕ್ತದ ಮಾತುಗಳು ಉಕ್ಕಿವೆ. ಮೊದಲಿಗೆ ಈ ರಕ್ತ ಮಾತುಗಳನ್ನಾಡಿದ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಇದನ್ನು ರಕ್ತದಲ್ಲಿ ಬರೆದುಕೊಂಡುತ್ತೇನೆ ಎಂದಿದ್ದರು. ಬಳಿಕ ಸವಾಲಿನ ರಕ್ತ ಬರಹವನ್ನು ಡಿಕೆ ಶಿವಕುಮಾರ್​ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮುಂದುವರೆಸಿದ್ದರು.

ಇದನ್ನೂ ಓದಿ: ಜಗದೀಶ್​ ಶೆಟ್ಟರ್​ ಸೋಲಿಸಲು ಯಡಿಯೂರಪ್ಪನವರನ್ನೇ ಕಣಕ್ಕಿಳಿಸಿದ ಹೈಕಮಾಂಡ್​, ಲಿಂಗಾಯತ ಮುಖಂಡರ ಸಭೆಯಲ್ಲಿ ಬಿಎಸ್​ವೈ ಹೇಳಿದ್ದೇನು?

ಈ ಸಲ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬರುವುದು. ಇನ್ನು ಹದಿನೈದು ದಿನಗಳಲ್ಲಿ ನಾವೇ ಅಧಿಕಾರ ಹಿಡಿಯಲಿದ್ದೇವೆ. ಬೇಕಿದ್ರೆ ನಾನು ಅದನ್ನು ನನ್ನ ರಕ್ತದಲ್ಲಿ ಬರೆದುಕೊಡುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್ ಅವರ ರಕ್ತ ಯಾರಿಗೂ ಪ್ರಯೋಜನವಿಲ್ಲ ಎಂದು ಲೇವಡಿ ಮಾಡಿದ್ದಾರೆ.

ರಕ್ತ ಕೊರತೆಯಾದೀತು ಎಂದ ಹೆಚ್​ಡಿ ಕುಮಾರಸ್ವಾಮಿ

ಚುನಾವಣೆಯ ಸೋಲು- ಗೆಲುವು, ಅಧಿಕಾರಕ್ಕೆ ಬರುವ ಬಗ್ಗೆ ಯಾರೂ ರಕ್ತದಲ್ಲಿ ಬರೆದುಕೊಡಬೇಡಿ, ರಕ್ತದ ಕೊರತೆಯಾಗುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರು ತ್ತದೆ ಎಂದು ಡಿ.ಕೆ.ಶಿವಕುಮಾರ್‌ ರಕ್ತದಲ್ಲಿ ಬರೆದುಕೊಡುತ್ತೇನೆ ಎನ್ನುತ್ತಾರೆ. ಮತ್ತೂಂದೆಡೆ ಜಗದೀಶ್‌ ಶೆಟ್ಟರ್‌ ಸೋಲುತ್ತಾರೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಾರೆ. ಇಬ್ಬರೂ ರಕ್ತ ದಲ್ಲಿ ಬರೆದುಕೊಡುವುದು ಬೇಡ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಪ್ರಯೋಜನೆ ಇಲ್ಲ ಎಂದ ಸಿಎಂ

ಈ ಸಲ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೇ ಅಧಿಕಾರಕ್ಕೆ ಬರುವುದು. ಇನ್ನು ಹದಿನೈದು ದಿನಗಳಲ್ಲಿ ನಾವೇ ಅಧಿಕಾರ ಹಿಡಿಯಲಿದ್ದೇವೆ. ಬೇಕಿದ್ರೆ ನಾನು ಅದನ್ನು ನನ್ನ ರಕ್ತದಲ್ಲಿ ಬರೆದುಕೊಡುವೆ ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯೆ ನೀಡಿದ್ದು, ಡಿಕೆಶಿ ಅವರ ರಕ್ತ ಯಾರಿಗೂ ಪ್ರಯೋಜನವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ರಕ್ತ ಹೇಳಿಕೆಗೆ ಸಚಿವ ಸುಧಾಕರ್‌ ಟಾಂಗ್‌

ರಾಜ್ಯದಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಅಧಿಕಾರಕ್ಕೇರಲು ಸಾಧ್ಯವಿಲ್ಲ . ಅವರು ಹೇಳಿದಂತೆ ನಾನೂ ಅದೇ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಚಿವ ಸುಧಾಕರ್‌ ಟಾಂಗ್‌ ನೀಡಿದ್ದಾರೆ. ಈ ಚುನಾವಣೆ ಬಳಿಕ ಕಾಂಗ್ರೆಸ್‌ ಶಾಶ್ವತವಾಗಿ ಮುಳುಗುವ ದೋಣಿಯಾಗಲಿದೆ. ಡಿ.ಕೆ. ಶಿವಕುಮಾರ್‌ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬರುವ ದಿನಗಳು ದೂರವಿಲ್ಲ. ಬಿಜೆಪಿ ಸ್ವತಂತ್ರವಾಗಿ ಸರಕಾರ ರಚಿಸಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅಭ್ಯರ್ಥಿಗಳೂ ಸಿಗುವುದಿಲ್ಲ ಎಂದಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ