ಹೊಸ ಪಕ್ಷ ಸ್ಥಾಪನೆ ಜತೆಗೆ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನೂ ಘೋಷಿಸಿದ ಜನಾರ್ದನ ರೆಡ್ಡಿ

ಗಾಲಿ ಜನಾರ್ದನ ರೆಡ್ಡಿ 'ಕಲ್ಯಾಣ ರಾಜ್ಯ ಪ್ರಗತಿ' ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡುವುದರ ಜೊತೆ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಕ್ಷೇತ್ರವನ್ನು ಸಹ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ.

ಹೊಸ ಪಕ್ಷ ಸ್ಥಾಪನೆ ಜತೆಗೆ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನೂ ಘೋಷಿಸಿದ ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 25, 2022 | 3:35 PM

ಬೆಂಗಳೂರು/ಕೊಪ್ಪಳ: ಕೊನೆಗೂ ಗಾಲಿ ಜನಾರ್ದನ ರೆಡ್ಡಿ(Janardhana Reddy( ತಮ್ಮದೇಯಾದ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ (kalyana rajya pragati party)ಘೋಷಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಕ್ಷೇತ್ರವನ್ನು ಸಹ ಘೋಷಿಸಿದ್ದಾರೆ. ಈ ಮೂಲಕ ರಾಜಕೀಯ ವಲಯದಿಂದ ಕಣ್ಮರೆಯಾಗಿದ್ದ ರೆಡ್ಡಿ ಈಗ ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಿದ್ದಾರೆ.

ಇದನ್ನೂ ಓದಿ: ಹೊಸ ರಾಜಕೀಯ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

ಇಂದು(ಡಿಸೆಂಬರ್ 25) ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ನಾನು ಮುಂದಿನ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. 15 ದಿನಗಳ ಒಳಗೆ ಪಕ್ಷದ ಲಾಂಛನ, ಕಚೇರಿ ಎಲ್ಲವೂ ಬಿಡುಗಡೆ ಮಾಡುತ್ತೇನೆ. ಪತ್ನಿಯೂ ನನ್ನ ಜೊತೆಗೆ ಇರ್ತಾರೆ. ಸಾರ್ವಜನಿಕ ಬದುಕಿನಲ್ಲಿ ಇನ್ನು ಗುರುತಿಸಿಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಗಣಿಧಣಿ ಚುನಾವಣೆಗೆ ಗಂಗಾವತಿ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ.

ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ರಾಜ್ಯದ ಪ್ರಗತಿಯೇ ನನ್ನ ಗುರಿಯಾಗಿದೆ. ಗುರಿ ಇಟ್ಕೊಂಡು ಜನರು ಮೆಚ್ಚುವ ಕೆಲಸ ಮಾಡುತ್ತೇನೆ. ಸರ್ಕಾರ ನನ್ನ ಟಾರ್ಗೇಟ್ ಮಾಡ್ತಾರೆ ಮುಂದೆನೂ ಮಾಡ್ತಾರೆ. ರಾಜ್ಯದಲ್ಲಿ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂದು ಪಕ್ಷದ ಪ್ರಣಾಳಿಕೆಯೊಂದಿಗೆ ಕೆಲವೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಹಾಲಿ ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಿಷ್ಟು

ಕೊಪ್ಪಳ ಜಿಲ್ಲೆ ಗಂಗಾವತಿ ಕ್ಷೇತ್ರದಿಂದ ಜನಾರ್ದನ ರೆಡ್ಡಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಲಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯಿಸಿದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯೇ ಗೆಲ್ಲೋದು. ಹೊಸ ಪಕ್ಷದ ಬಗ್ಗೆ ನಮ್ಮ ರಾಜ್ಯ ನಾಯಕರು ನೋಡಿಕೊಳ್ಳುತ್ತಾರೆ. ಹನುಮನ ಆಶೀರ್ವಾದ ಬಿಜೆಪಿಗೆ ಇರುತ್ತೆ. ಜನಾರ್ದನ ರೆಡ್ಡಿ ಜತೆ ನಮ್ಮ ಕೆಲ ನಾಯಕರು ಕಾಣಿಸಿಕೊಂಡಿದ್ದರು. ಆದರೆ ಜನಾರ್ದನರೆಡ್ಡಿ ಅವರೇ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ರೆಡ್ಡಿ ಘೋಷಿಸಿದ ಪಕ್ಷಕ್ಕೆ ಬಿಜೆಪಿಯಿಂದ ಯಾರೂ ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕುಚುಕು ಗೆಳೆಯ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮೊದಲ ಪ್ರತಿಕ್ರಿಯೆಯಲ್ಲೇ ಅಚ್ಚರಿ ಮಾತುಗಳಾನ್ನಾಡಿದ ಶ್ರೀರಾಮುಲು!

ಜನಾರ್ದನ ರೆಡ್ಡಿ ಹೊಸ ಪಕ್ಷದಿಂದ ನಮಗೇನು ನಷ್ಟ ಆಗುವುದಿಲ್ಲ. ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ಅದನ್ನ ಜನ ತೀರ್ಮಾನ ಮಾಡ್ತಾರೆ. ಗಂಗಾವತಿಯಿಂದ ಎರಡೂ ಬಾರಿ ಗೆದ್ದಿದ್ದೇನೆ. ನಾನು ಏನು ಅಭಿವೃದ್ಧಿ ಮಾಡಿದ್ದೆನೆ ಎನ್ನುವುದು ಜನರಿಗೆ ಗೊತ್ತಿದೆ. ಮತದಾರರನ್ನ ಕಡಗಣೆನೆ ಮಾಡುವುದಕ್ಕೆ ಆಗುವುದಿಲ್ಲ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:50 pm, Sun, 25 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್