ವಿಧಾನಸಭೆ ಚುನಾವಣೆ ಫಲಿತಾಂಶ ಗೊಂದಲ: ಕಾನೂನ ಸಮರಕ್ಕಿಳಿದ ಎರಡು ಕ್ಷೇತ್ರಗಳ ಅಭ್ಯರ್ಥಿಗಳು
ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತ್ತು ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ ಅವರ ನಡುವಿನ ಅಂತರ ಕೇವಲ 248 ಆಗಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ಮರು ಎಣಿಕೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ(Karnataka Assembly Elections 2023 Result) ಕಾಂಗ್ರೆಸ್ ಪಕ್ಷ ಜನರ ಮನ್ನಣೆ ಪಡೆದು 136 ಸೀಟ್ಗಳ ಮೂಲಕ ಬಹುಮತದಿಂದ ಗದ್ದುಗೆ ಏರಿದೆ. ಆದ್ರೆ ಗೆದ್ದೇ ಗೆಲ್ಲುತ್ತೇವೆ ಎಂಬ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಮುಗ್ಗರಿಸಿ ಬಿದ್ದಿದೆ. ಬಿಜೆಪಿಗೆ ತನಗೆ ಬಂದ ಸೋಲನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ಇನ್ನು ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ(Manjunath Gowda) ಅವರು ಮರು ಮತ ಎಣಿಕೆ ಆಗಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದಾರೆ. ಚುನಾವಣೆ ಫಲಿತಾಂಶ ಹೊರ ಬಿದ್ದು ನಾಲ್ಕು ದಿನ ಕಳೆದರೂ ನ್ಯಾಯಬೇಕೆಂದು ಹೋರಾಟಕ್ಕಿಳಿದಿದ್ದಾರೆ. ಇನ್ನು ಮತ್ತೊಂದೆಡೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ(Sowmya Reddy) ಬಾಯಿಗೆ ಬಂದ ತುತ್ತು ಕೈಯಿಂದ ಜಾರಿದಂತಾಗಿದೆ. ಕೇವಲ 160 ಮತಗಳ ಅಂತರದಲ್ಲಿ ಗೆದ್ದಿದ್ದಾರೆ ಎಂದು ಘೋಷಣೆಯಾಗಿದ್ದ ಬಳಿಕ ಮರು ಮತ ಎಣಿಕೆಯಾಗಿ ಸೋಲುಂಡಿದ್ದಾರೆ.
ನ್ಯಾಯಾಲಯದ ಮೆಟ್ಟಿಲೇರಿದ ಮಂಜುನಾಥ ಗೌಡ
ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತ್ತು ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ ಅವರ ನಡುವಿನ ಅಂತರ ಕೇವಲ 248 ಮತಗಳು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ಮರು ಎಣಿಕೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಮತ ಎಣಿಕೆ ಕುತೂಹಲ ಕೆರಳಿಸಿತ್ತು. ಎಣಿಕೆ ಅಧಿಕಾರಿಗಳು ನನಗೆ ದೂರವಾಣಿ ಕರೆ ಮಾಡಿ ಚುನಾವಣೆಯಲ್ಲಿ ನಾನು ಗೆದ್ದಿದ್ದೇನೆ ಎಂದು ಹೇಳಿದರು. ಆದರೆ ನಂತರ ಕಾಂಗ್ರೆಸ್ ಅಭ್ಯರ್ಥಿ 248 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಿಸಲಾಯಿತು, ಹೀಗಾಗಿ ಮತಗಳ ಮರು ಎಣಿಕೆ ಕೋರಿ ನಾನು ನ್ಯಾಯಾಲಯದ ಮೊರೆ ಹೋಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಖಾಸಗಿ ಸುದ್ದಿ ವಾಹಿನಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಬಗ್ಗೆ ಆಗಲೇ ಭವಿಷ್ಯ ನುಡಿದಿದ್ದರು ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ
ಗೆದ್ದು ಸೋತ ಅಭ್ಯರ್ಥಿ ಸೌಮ್ಯ ರೆಡ್ಡಿ
ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ ಅವರು 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ. ಮೊದಲು ಮತ ಎಣಿಕೆ ನಡೆದಾಗ 160 ಮತಗಳಿಂದ ಸೌಮ್ಯ ರೆಡ್ಡಿ ಗೆದ್ದಿರುವುದಾಗಿ ಘೋಷಿಸಲಾಗಿತ್ತು. ಆದರೆ ತದನಂತರ ಸಂಸದ ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿ ಅಕ್ರಮ ನಡೆಸಿದ್ದು, ಮರು ಮತ ಎಣಿಕೆಯಾದ ಬಳಿಕ ಕೇವಲ 16 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಸೌಮ್ಯ ರೆಡ್ಡಿ ಅಕ್ರೋಶ ಹೊರ ಹಾಕಿದ್ದರು.
ಮಗಳಿಗೆ ನ್ಯಾಯಾ ಕೊಡಿಸಲು ಹೋರಾಟಕ್ಕೆ ಇಳಿಯುವೆ ಎಂದು ರಾಮಲಿಂಗ ರೆಡ್ಡಿ
ಸೌಮ್ಯಾ ಅವರಿಗೆ ಅನ್ಯಾಯವಾಗಿದೆ. ಈ ಬಗ್ಗೆ ಪಕ್ಷ ಕಾನೂನು ಹೋರಾಟ ನಡೆಸಲಾಗುವುದು. ಚುನಾವಣಾ ಅಧಿಕಾರಿಯು ಅಸಿಂಧು ಎಂದು ಪರಿಗಣಿಸಿದ 250 ಮತಗಳನ್ನು ಕೆಲವು ಕಾಣದ ಕೈಗಳ ಒತ್ತಡದಿಂದಾಗಿ ಎಣಿಕೆ ಪ್ರಕ್ರಿಯೆಯಲ್ಲಿ ಸೇರಿಸಿರುವುದು ನಮಗೆ ಆಶ್ಚರ್ಯ ತಂದಿದೆ. ಒಂದು ಬಾರಿ ಅಸಿಂಧು ಎಂದು ಪರಿಗಣಿಸಿದ ಮತಗಳನ್ನು ಮತ ಎಣಿಕೆ ಪ್ರಕ್ರಿಯೆಯಲ್ಲಿ ಸೇರಿಸುವಂತಿಲ್ಲ. ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಉತ್ತರಪ್ರದೇಶದ ಕೆಲವು ರಾಜಕಾರಣಿಗಳು ಮತ್ತು ಮಾಜಿ ಸಚಿವ ಆರ್ ಅಶೋಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಪ್ರಭಾವವಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ