AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿಗೆ ಆಮಿಷ: ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ FIR

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿಗೆ ಆಮಿಷ: ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ FIR
ವಿ.ಸೋಮಣ್ಣ
ಗಂಗಾಧರ​ ಬ. ಸಾಬೋಜಿ
|

Updated on:Apr 28, 2023 | 9:11 PM

Share

ಚಾಮರಾಜನಗರ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ (V Somanna) ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ. ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F)ರಡಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಇತ್ತೀಚೆಗೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ಇದರಿಂದ ಎಚ್ಚೆತ್ತ ಸೋಮಣ್ಣ ಅವರು ಆಡಿಯೋ ಬಗ್ಗೆ ಸ್ಪಷ್ಟನೆ ಸಹ ನೀಡಿದ್ದರು.

ಆಡಿಯೋ ಬಗ್ಗೆ ವಿ. ಸೋಮಣ್ಣ ಸ್ಪಷ್ಟನೆ 

ಆಡಿಯೋಗೂ ನನಗೂ ಸಂಬಂಧವಿಲ್ಲ. ನಾನು ಯಾವುದೋ ನಾಯಿ ನರಿಗಳಿಗೆ ಮಾತಿಗೆ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ನಾನೇನೂ ದಡ್ಡ ಅಲ್ಲ. 45 ವರ್ಷ ರಾಜಕಾರಣ ಮಾಡಿದ್ದೇನೆ. ಚುನಾವಣಾ ಮುಗಿದ ಮೇಲೆ ಆಡಿಯೋ ಬಗ್ಗೆ ಮಾತನಾಡುತ್ತೇನೆ. ನನಗೂ ಅದಕ್ಕೂ ಸಂಬಂಧ ಇಲ್ಲ. ಯಾರೋ ಹೊಟ್ಟೆ ಪಾಡಿಗಾಗಿ ಮಾಡಿರಬಹುದು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಆಡಿಯೋ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದ್ದರು.

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಆಡಿಯೋನಲ್ಲೇನಿದೆ?

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಡಾ ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ: ಆಸ್ಪತ್ರೆಗೆ ದಾಖಲು

ಕಾರ್ಯಕರ್ತರಿಂದ ಕಲ್ಲೆಸೆತ: ಸ್ವಲ್ಪದರಲ್ಲೇ ಪಾರಾದ ವಿ ಸೋಮಣ್ಣ

ಮೈಸೂರು: ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಕಲ್ಲೆಸೆದ ಆರೋಪ ಮಾಡಲಾಗಿದೆ. ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಘಟನೆ ನಡೆದಿದೆ. ಅಭ್ಯರ್ಥಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಪ್ರಚಾರ ರಥದಲ್ಲಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ನಾಗೇಶ್ ಕಾಲಿಗೆ ಪೆಟ್ಟಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Fri, 28 April 23