ಮಾ.12ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೋದಿ ರೋಡ್ ಶೋ ತಂತ್ರಕ್ಕೆ ಪ್ರತಿತಂತ್ರ ರೂಪಿಸಿದ ದೇವೇಗೌಡ
ಇದೇ ಮಾ.12ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಪ್ಲಾನ್ ನಡೆಸಿದ್ದು, ಇದೀಗ ಇದಕ್ಕೆ ದೇವೇಗೌಡ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ ರೂಪಿಸಿದೆ.
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಬಿಜೆಪಿ ಹಳೇ ಮೈಸೂರು(Old Mysuru) ಭಾಗವನ್ನೇ ಟಾರ್ಗೆಟ್ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಹೊತ್ತು ನೀಡಿದೆ. ಇದರ ಭಾಗವಾಗಿ ಇದೇ ಮಾರ್ಚ್ 12ರಂದು ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(bengaluru mysuru expressway) ಉದ್ಘಾಟನೆಗೆ ನರೇಂದ್ರ ಮೋದಿ (Narendra Modi) ಅವರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ಈ ರಸ್ತೆಯಲ್ಲಿ ರೋಡ್ ಶೋ ಮಾಡುವ ಪ್ಲಾನ್ ಮಾಡಲಾಗಿದೆ. ಇದರೊಂದಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಜೆಡಿಎಸ್(JDS) ಸಹ ಪ್ರತಿತಂತ್ರ ಹೆಣೆದಿದೆ.
ಇದನ್ನೂ ಓದಿ: ಎಸ್ಪಿಜಿ ಅನುಮತಿ ಕೊಟ್ಟರೆ ಬೆಂಗಳೂರು-ಮೈಸೂರು ಹೈವೇಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಪ್ರತಾಪ್ ಸಿಂಹ
ಹೌದು… ಮೈಸೂರು-ಬೆಂಗಳೂರು ಹೆದ್ದಾರಿಯ ಉದ್ಘಾಟನೆ ಮಾಡಿ ರೋಡ್ ಶೋ ನಡೆಸುವ ಮೂಲಕ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸಲು ಬಿಜೆಪಿ ಮುಂದಾಗಿದೆ. ಬಿಜೆಪಿಯ ಈ ಪ್ಲಾನ್ಗೆ ಕೌಂಟರ್ ಕೊಡಲು ಖುದ್ದು ಮಾಜಿ ಪ್ರಧಾನಿ ದೇವೇಗೌಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಇದರೊಂದಿಗೆ ಮತಗಳನ್ನು ಹಿಡಿದಿಟ್ಟುಕೊಳ್ಳಲು ಜೆಡಿಎಸ್ ಮೆಗಾ ಪ್ಲಾನ್ ಮಾಡಿದೆ.
ಬೆಂಗಳೂರಿನಿಂದ ಮೈಸೂರಿನವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲು ದೇವೇಗೌಡರು ತೀರ್ಮಾನಿಸಿದ್ದಾರೆ. ಇದೆ ಮಾರ್ಚ್ 26ರಂದು ರೋಡ್ ಶೋಗೆ ದೊಡ್ಡಗೌಡ್ರು ನಿರ್ಧಾರ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ರೋಡ್ ಶೋ ಮೂಲಕ ದೇವೇಗೌಡ ಮೈಸೂರು ತಲುಪಲಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಸುಪ್ರೀಂ ಎನ್ನುವ ಸಂದೇಶ ನೀಡಲಿದ್ದಾರೆ.
ಮಾರ್ಚ್ 12ರಂದು ಉದ್ಘಾಟನೆ
ಮಾರ್ಚ್ 12ರಂದು ಬೆಳಗ್ಗೆ 11ಕ್ಕೆ ದಶಪಥ ರಸ್ತೆ ಉದ್ಘಾಟನೆ ಆಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಸಕಲ ಸಿದ್ಧತೆ ನಡೆದಿದೆ. ಪ್ರಧಾನಿ ಅವರ ವಿಶೇಷ ಭದ್ರತಾ ಪಡೆಯಿಂದ (SPG) ಅನುಮತಿ ದೊರೆತರೆ ಹೆದ್ದಾರಿಯಲ್ಲಿ ರೋಡ್ ಶೋ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap simha) ಹೇಳಿದ್ದಾರೆ.
ಮಾರ್ಚ್ ಅಂತ್ಯಕ್ಕೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೇ ಹೈವೇ ಉದ್ಘಾಟನೆಯಾದರೆ ಚುನಾವಣೆಯ ವೇಳೆ ಬಿಜೆಪಿಗೆ ಪ್ಲಸ್ ಆಗಲಿದೆ . ಹೆದ್ದಾರಿ ಉದ್ಘಾಟನೆ ಬಳಿಕ ನರೇಂದ್ರ ಮೋದಿ ಬೃಹತ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಹಳೇ ಮೈಸೂರು ಭಾಗದಲ್ಲಿ ಹೊಸ ಅಲೆ ಸೃಷ್ಟಿಗೆ ಮೆಗಾ ಪ್ಲಾನ್ ಸಿದ್ಧವಾಗಿದೆ.