AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​​​​​​

ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​​​​​​
ನಟಿ, ಬಿಜೆಪಿ ನಾಯಕಿ ಶ್ರುತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 08, 2023 | 2:24 PM

Share

ಬೆಂಗಳೂರು: ನಟಿ, ಬಿಜೆಪಿ (BJP) ನಾಯಕಿ ಶ್ರುತಿ (Actor Shruti) ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ (JDS) ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​ ಆರೋಪ ಮಾಡಿದೆ.

ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ

“ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿ (BJP) ಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.

ಇದಕ್ಕೆ ಜೆಡಿಎಸ್​, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇದನ್ನೂ ಓದಿ: ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ

ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ.

ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಮುನಿರತ್ನಗೆ ಜಾಲಹಳ್ಳಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುನಿರತ್ನ ವಿರುದ್ಧ ಬುಧವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು. ಇದರ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ