ಬೆಂಗಳೂರು: ನಟಿ, ಬಿಜೆಪಿ (BJP) ನಾಯಕಿ ಶ್ರುತಿ (Actor Shruti) ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ (JDS) ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ.
“ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿ (BJP) ಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.
ಇದಕ್ಕೆ ಜೆಡಿಎಸ್, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇದನ್ನೂ ಓದಿ: ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ಅವರ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ.
ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಮುನಿರತ್ನಗೆ ಜಾಲಹಳ್ಳಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುನಿರತ್ನ ವಿರುದ್ಧ ಬುಧವಾರ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು. ಇದರ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ