ಎಸ್ ಟಿ ಸೋಮಶೇಖರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ: ವಿಡಿಯೋ ದಾಖಲೆ ಬಿಡುಗಡೆ ಮಾಡಿದ ಜೆಡಿಎಸ್
ಸಚಿವ ಎಸ್ ಟಿ ಸೋಮಶೇಖರ್ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಹೊಸ್ತಿಲಿನಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಸಹಜ. ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಾಗ ಎಗ್ಗಿಲ್ಲದೆ ನಾಲಿಗೆಯನ್ನು ಹರಿಬಿಡುತ್ತಾರೆ. ಇದರಂತೆ ಸಚಿವ ಎಸ್ ಟಿ ಸೋಮಶೇಖರ್ (ST Somashekar) ಅವರು ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಜೆಡಿಎಸ್ (JDS) ಮತ್ತು ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆಂದು ಜೆಡಿಎಸ್ ವಿಡಿಯೋ ದಾಖಲೆ ಬಿಡುಗಡೆ ಮಾಡಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಅಸಂವಿಧಾನಿಕ ಪದ ಬಳಕೆ ಮಾಡಿರುವ ವಿಡಿಯೋ ದಾಖಲೆಯನ್ನು ಜೆಡಿಎಸ್ ಮುಖಂಡ ಜವರಾಯಿಗೌಡ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಎಸ್ ಟಿ ಸೋಮಶೇಖರ್ “ಜೆಡಿಎಸ್ ಮತ್ತು ಕಾಂಗ್ರೆಸ್ ಕಳ್ಳ ನನ್ನ ಮಕ್ಕಳು, ಮಾಡೋಕೆ ಕೆಲಸ ಇಲ್ಲದೆ ಮಾತನಾಡುತ್ತಾರೆ. ಬಾಯಿಗೆ ಬಂದಂಗೆ, ಹುಚ್ಚರಂತೆ ಪ್ರಚಾರ ಮಾಡಿ ಹೋಗುತ್ತಾರೆ. ಈಗ ಒಬ್ಬ ಕಾರ್ಯಕರ್ತ ಅಲ್ಲಿ ಹೋಗಿ ಸೇರಿಕೊಂಡಿದ್ದಾನೆ. ಅವನು ಸದ್ಯದಲ್ಲೆ ಜೈಲಿಗೆ ಹೋಗುತ್ತಾನೆ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದು ಈ ರಾಜ್ಯದ ದುರ್ದೈವ” ಎಂದಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 1:11 pm, Mon, 10 April 23