JDS Manifesto for Karnataka election 2023: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬೆಂಗಳೂರಿನ ಜೆಡಿಎಸ್‌‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಪ್ರಣಾಳಿಕೆ ರಿಲೀಸ್​ ಮಾಡಿದೆ. ಪ್ರಣಾಳಿಕೆಯಲ್ಲಿ ಜಾತ್ಯತೀತ ಜನತಾದಳ ಹಲವು ಭರವಸೆ ನೀಡಿದೆ.

JDS Manifesto for Karnataka election 2023: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 27, 2023 | 6:17 PM

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ (manifesto) ಯನ್ನು ಬೆಂಗಳೂರಿನ ಜೆಡಿಎಸ್‌‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಪ್ರಣಾಳಿಕೆ ರಿಲೀಸ್​ ಮಾಡಿದೆ. ಮಾಜಿ‌ ಸಿಎಂ H.D.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪರಿಷತ್ ಸದಸ್ಯ ಬಿ.ಎಂ.ಫಾರೂಕ್‌ರಿಂದ JDS ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ಜಾತ್ಯತೀತ ಜನತಾದಳ ಹಲವು ಭರವಸೆ ನೀಡಿದೆ. ಸಾಮಾಜಿಕ ಭದ್ರತೆಗಳಾದ ಮಾತೃಶ್ರೀ ಯೋಜನೆ, ರೈತಬಂಧು ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹಾರ, ಹಿರಿಸಿರಿ ಯೋಜನೆ, ಸಾರಥಿಗೆ ಸೈ ಯೋಜನೆ, ರಕ್ಷಕ ಬಂಧು ಯೋಜನೆ, ಚೈತನ್ಯ ಯೋಜನೆಗಳಾದ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಭರವಸೆ ನೀಡಲಾಗಿದೆ.

ಮಹಿಳೆಯರಿಗೆ ವಿಶೇಷ ಯೋಜನೆ

ಕುಮಾರಸ್ವಾಮಿ ಅವರು ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಘೋಷಿಸಿದ್ದಾರೆ. ಗರ್ಭಿಣಿಯರಿಗೆ ಆರು ತಿಂಗಳವರೆಗೆ ತಿಂಗಳಿಗೆ 6,000 ರೂ. ಮತ್ತು ಪ್ರಾದೇಶಿಕ ಪಕ್ಷವು ಮಹಿಳಾ ಸ್ವಸಹಾಯ ಗುಂಪುಗಳ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ವಿಧವೆಯರ ಪಿಂಚಣಿಯನ್ನು 900 ರೂ.ಗಳಿಂದ 2,500 ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಕಾಂಗ್ರೆಸ್​​

ಉದ್ಯೋಗ ಖಾಯಂ

ಮಾಜಿ ಪ್ರಧಾನಿ ಹೆಚ್​​ಡಿ. ದೇವೇಗೌಡ ಅವರ ನೇತೃತ್ವದ ಪಕ್ಷವು ಅಂಗನವಾಡಿ ಕಾರ್ಯಕರ್ತರ ಉದ್ಯೋಗವನ್ನು ಖಾಯಂಗೊಳಿಸುವುದಾಗಿ ಮತ್ತು ಅವರ ವೇತನವನ್ನು 5,000 ರೂ.ಗಳಷ್ಟು ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: Geetha Shivarajkumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್​ಕುಮಾರ್

ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯ್ದೆ, ಮೀಸಲಾತಿ ಗೊಂದಲ ನಿವಾರಣೆ, ಧಾರ್ಮಿಕ ಅಲ್ಪಸಂಖ್ಯಾತ ಏಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆ ಮತ್ತು ಅಭಿವೃದ್ಧಿ, ಬಗರ್ ಹುಕುಂ ಸಾಗುವಳಿ, ಋತು ಯೋಜನೆಗೆ ಕಾಯಕಲ್ಪ, ರಾಷ್ಟ್ರೀಯ ಪಿಂಚಣಿ ಯೋಜನೆ, ಹಳೇ ಪಿಂಚಣೆ ಯೋಜನೆ ಜಾರಿಗೆ ಭರವಸೆ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ 

  • ಕನ್ನಡನಾಡಿನಲ್ಲಿರುವ ಭಾಷೆಗಳ ಮತ್ತು ಸಂಸ್ಕೃತಿ ಸಂರಕ್ಷಣೆ ಅಭಿವೃದ್ಧಿ
  • ಆರಕ್ಷಕರಿಗೆ ಅಭಯ
  • ಕಲಾ ಪ್ರೋತ್ಸಾಹ
  • ಆಯುಷ್ ವೈದ್ಯರಿಗೆ ಅಭಯ
  • ಸ್ವರ್ಣ ಕುಟೀರ ಯೋಜನೆ
  • ಪಂಚರತ್ನ ಯೋಜನೆ ಜಾರಿ ಭರವಸೆ

ಶಿಕ್ಷಣವೇ ಆಧುನಿಕ ಶಕ್ತಿ 

  • ವಿದ್ಯಾ ಸ್ನೇಹಿ ಯೋಜನೆ
  • ಅಡಿಪಾಯ- ಅಂಗನವಾಡಿಗಳ ಬಲವರ್ಧನೆ
  • ಶಿಕ್ಷಣ ಮತ್ತು ಆಧುನಿಕ ಶಕ್ತಿ
  • ವಿದ್ಯಾ ಜಾಲ
  • ವಿಕಲಚೇತನ ಮಕ್ಕಳಿಗೆ ವಿಶೇಷ ಶಿಕ್ಷಣ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Thu, 27 April 23

ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು