ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣವೆಂದು ಪ್ರಮಾಣ ಮಾಡಿ ಹೇಳುವಿರೇ; ಸುಧಾಕರ್​ಗೆ ಎಂಟಿಬಿ ನಾಗರಾಜ್ ಪ್ರಶ್ನೆ

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಎಂಬ ಬಿಜೆಪಿ ನಾಯಕ ಡಾ. ಕೆ ಸುಧಾಕರ್ ಹೇಳಿಕೆಗೆ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ಸುಧಾಕರ್ ಟ್ವೀಟ್ ಮಾಡಿರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಮಾಡಿರುವ ಆರೋಪದ ಬಗ್ಗೆ ಸುಧಾಕರ್ ಅವರು ಪ್ರಮಾಣ ಮಾಡಿ ಹೇಳಬಲ್ಲರೇ ಎಂದು ನಾಗರಾಜ್ ಪ್ರಶ್ನಿಸಿದ್ದಾರೆ.

ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣವೆಂದು ಪ್ರಮಾಣ ಮಾಡಿ ಹೇಳುವಿರೇ; ಸುಧಾಕರ್​ಗೆ ಎಂಟಿಬಿ ನಾಗರಾಜ್ ಪ್ರಶ್ನೆ
ಸುಧಾಕರ್ ಮತ್ತು ಎಂಟಿಬಿ ನಾಗರಾಜ್

Updated on: May 17, 2023 | 7:17 PM

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಎಂಬ ಬಿಜೆಪಿ ನಾಯಕ ಡಾ. ಕೆ ಸುಧಾಕರ್ ಹೇಳಿಕೆಗೆ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ಸುಧಾಕರ್ ಟ್ವೀಟ್ ಮಾಡಿರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಮಾಡಿರುವ ಆರೋಪದ ಬಗ್ಗೆ ಸುಧಾಕರ್ ಅವರು ಪ್ರಮಾಣ ಮಾಡಿ ಹೇಳಬಲ್ಲರೇ ಎಂದು ನಾಗರಾಜ್ ಪ್ರಶ್ನಿಸಿದ್ದಾರೆ. ಬಿಜೆಪಿ ಸೇರುವಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇತ್ತು. ಅವರ ಪ್ರೇರಣೆ, ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪಾತ್ರ ಇತ್ತೆಂದು ಸುಧಾಕರ್ ಟ್ವೀಟ್ ಮಾಡಿದ್ದರು. ಇದಕ್ಕೆ ನಾಗರಾಜ್ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ಅವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೇ? ಇಷ್ಟು ದಿನ ಮೌನವಾಗಿದ್ದು ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು ಎಂದು ನಾಗರಾಜ್ ಟ್ವೀಟ್​​ನಲ್ಲಿ ಪ್ರಶ್ನಿಸಿದ್ದಾರೆ.

ಮಾಜಿ ಸಚಿವರಾದ ಸುಧಾಕರ್ ಅವರು ಇಂದು ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ಅವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು? ಮಾನ್ಯ ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ ಎಂದು ನಾಗರಾಜ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: Karnataka CM Live Updates: ತರಾತುರಿಯಲ್ಲಿ ಸಿಎಂ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್​: ಮುಂದಿನ 48 ಗಂಟೆ ಕಾಲ ಸಿಎಂ ಘೋಷಣೆ ವಿಳಂಬ

ಏನು ಹೇಳಿದ್ದರು ಸುಧಾಕರ್?

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಸುಧಾಕರ್ ಟ್ವೀಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Wed, 17 May 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us