ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ಗೆ ಕಾಂಗ್ರೆಸ್ ಗಾಳ, ಕದಲೂರು ಉದಯ್ ಮೂಲಕ ತೆರೆಮರೆಯಲ್ಲಿ ಡಿಕೆ ಶಿವಕುಮಾರ್ ತಂತ್ರ?
ಸಿಪಿ ಯೋಗೇಶ್ವರ್ ಅವರಿಗೆ ಬಿಜೆಪಿ ಹೈಕಮಾಂಡ್ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ. ಆದರೆ ಇದುವರೆಗೆ ಬಿ ಫಾರಂ ಪಡೆಯ ಸಿಪಿವೈ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಡಿಕೆ ಶಿವಕುಮಾರ್ ತೆರೆಮರೆಯಲ್ಲಿ ತಂತ್ರ ಹೂಡುತ್ತಿದ್ದಾರೆ ಎನ್ನಲಾಗುತ್ತಿದೆ.
ರಾಮನಗರ: ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಪಕ್ಷಾಂತರ ಪರ್ವ ಜೋರಾಗಿದೆ. ಈ ನಡುವೆ ಕಾಂಗ್ರೆಸ್ ಪಕ್ಷ ಬಿಜೆಪಿ ಅಭ್ಯರ್ಥಿಗಳಿಗೆ ಗಾಳ ಹಾಕಲು ಮುಂದಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಕದಲೂರು ಉದಯ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ತೆರೆಮರೆಯಲ್ಲಿ ತಂತ್ರಗಾರಿಗೆ ಹೆಣೆದಿದ್ದಾರೆ ಎನ್ನಲಾಗುತ್ತಿದೆ. ಅದರಂತೆ ಇಂದು ಮದ್ದೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕದಲೂರು ಉದಮ್ (Kadaluru Uday) ಅವರು ತಾಲೂಕಿನ ಕನಕನಗರದಲ್ಲಿ ಪ್ರಚಾರದಲ್ಲಿದ್ದ ಯೋಗೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಉದಯ್ ಭೇಟಿಯಾಗಿದೆ ಎನ್ನಲಾಗುತ್ತಿದೆ.
ಯಾರು ಈ ಕದಲೂರು ಉದಯ್?
ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಯಕರಲ್ಲಿ ಕದಲೂರು ಉದಯ್ ಒಬ್ಬರಾಗಿದ್ದರು. ಮದ್ದೂರು ಕ್ಷೇತ್ರದ ಮುಖಂಡ ಉದಯ್, ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಅದರಂತೆ ಮಾರ್ಚ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದಯ್, ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು. ಸದ್ಯ ಮೂರನೇ ಪಟ್ಟಿಯಲ್ಲಿ ಉದಯ್ಗೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಅರಸೀಕೆರೆಯಲ್ಲಿ ಬಿಜೆಪಿಗೆ ಬಿಸಿ ತುಪ್ಪ; ಬಂಡಾಯವೆದ್ದ ಯಡಿಯೂರಪ್ಪ ಸಹೋದರಿಯ ಮೊಮ್ಮಗ ಎನ್ಆರ್ ಸಂತೋಷ್ ಜೆಡಿಎಸ್ನತ್ತ
ಉದಯ್ ಪಕ್ಷ ಸೇರ್ಪಡೆ ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್, ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ನ ಡಿಸಿ ತಮ್ಮಣ್ಣ ಅವರನ್ನು ಸೋಲಿಸಲು ಉದಯ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದಿದ್ದರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಉದಯ್, ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಮದ್ದೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದರು. ಅಲ್ಲದೆ, ಮೈಸೂರು ಭಾಗದಲ್ಲಿ ಜೆಡಿಎಸ್ ಶಕ್ತಿ ಕುಂದಿಸಬೇಕು ಹಾಗೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:38 pm, Thu, 13 April 23