ನಾಮಪತ್ರ ಸಲ್ಲಿಸುವ ವೇಳೆ ಕದಲೂರು ಉದಯ್​ರಿಂದ ಎಡವಟ್ಟು: 90 ಸಾವಿರ ರೂ. ಬೆಲೆಯ ಸ್ಕೂಟರ್​ಗೆ 90 ಲಕ್ಷ ರೂ. ಉಲ್ಲೇಖ

ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಕದಲೂರು ಉದಯ್​ ನಾಮಪತ್ರ ಸಲ್ಲಿಸುವ ವೇಳೆ ಎಡವಟ್ಟು ಮಾಡಿಕೊಂಡಿದ್ದು, 90 ಸಾವಿರ ರೂ. ಬೆಲೆಯ ಹೊಂಡಾ ಆಕ್ಟೀವಾ ಸ್ಕೂಟರ್​ಗೆ 90 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಕದಲೂರು ಉದಯ್​ರಿಂದ ಎಡವಟ್ಟು: 90 ಸಾವಿರ ರೂ. ಬೆಲೆಯ ಸ್ಕೂಟರ್​ಗೆ 90 ಲಕ್ಷ ರೂ. ಉಲ್ಲೇಖ
ಕದಲೂರು ಉದಯ್
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 21, 2023 | 4:10 PM

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಕದಲೂರು ಉದಯ್ (Kadaluru Uday) ಭಾರಿ ಗೊಂದಲಕ್ಕೆ ಒಳಗಾಗಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಎಡವಟ್ಟು ಮಾಡಿಕೊಂಡಿದ್ದು, 90 ಸಾವಿರ ರೂ. ಬೆಲೆಯ ಹೊಂಡಾ ಆಕ್ಟೀವಾ ಸ್ಕೂಟರ್​ಗೆ 90 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದ್ದಾರೆ ಆ ಮೂಲಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕದಲೂರು ಉದಯ್​ ಇತ್ತೀಚೆಗೆ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದರು.  ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳನ್ನು ನಂಬಿ ಮದ್ದೂರು ಮೂಲದ ಸಮಾಜ ಸೇವಕ ಉದಯ್‌ ಕದಲೂರು ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರನ್ನು ಅಭಿನಂದಿಸಿ ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಹಾಗೆಯೇ ಕಾಂಗ್ರೆಸ್‌ ಪಕ್ಷದಲ್ಲಿ ಅವರ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಹಾರೈಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದರು.

ಕದಲೂರು ಉದಯ್​ ಹೊಂದಿರುವ ದುಬಾರಿ ವಾಹನಗಳು

  • ಫಾರ್ಚ್ಯುನರ್ ಕಾರು KA 04 MT 6555 – 30,12,500
  • ಇನ್ನೋವಾ ಕ್ರಿಸ್ಟ KA 04 M 6555 – 26,35,000
  • ಪೋರ್ಸೆ ಕೆನ್ನಿ ಕಾರು KA 05 MT 6555 – 1.39.00.000
  • ಸ್ಕಾರ್ಪಿಯೋ ಕಾರು KA 02 KA 6555 – 18,15,699
  • ಆಕ್ಟೀವಾ 125 KA 41 ED 6555 – 90,03,730
  • ಆಕ್ಟೀವಾ 125 KA 02 KA 6555 -1.01.628

ಯಾರು ಈ ಕದಲೂರು ಉದಯ್?

ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಯಕರಲ್ಲಿ ಕದಲೂರು ಉದಯ್ ಒಬ್ಬರಾಗಿದ್ದರು. ಮದ್ದೂರು ಕ್ಷೇತ್ರದ ಮುಖಂಡ ಉದಯ್, ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಅದರಂತೆ ಮಾರ್ಚ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ, ಕದಲೂರು ಉದಯ್ ಮೂಲಕ ತೆರೆಮರೆಯಲ್ಲಿ ಡಿಕೆ ಶಿವಕುಮಾರ್ ತಂತ್ರ?

ಕಳೆದ ಮೂರು ವರ್ಷಗಳಿಂದ ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದಯ್, ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದರು. ಕೋವಿಡ್ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು. ಸದ್ಯ ಮೂರನೇ ಪಟ್ಟಿಯಲ್ಲಿ ಉದಯ್​ಗೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ.

ಇದನ್ನ ಓದಿ: ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸಂಸದೆ ಸುಮಲತಾ

ಉದಯ್ ಪಕ್ಷ ಸೇರ್ಪಡೆ ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್, ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್​ನ ಡಿಸಿ ತಮ್ಮಣ್ಣ ಅವರನ್ನು ಸೋಲಿಸಲು ಉದಯ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದಿದ್ದರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಉದಯ್, ಕಾಂಗ್ರೆಸ್​​ನಿಂದ ಟಿಕೆಟ್ ಪಡೆದು ಮದ್ದೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದರು. ಅಲ್ಲದೆ, ಮೈಸೂರು ಭಾಗದಲ್ಲಿ ಜೆಡಿಎಸ್ ಶಕ್ತಿ ಕುಂದಿಸಬೇಕು ಹಾಗೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Fri, 21 April 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್