DK Shivakumar Nomination: ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ‌ಭವಿಷ್ಯ ನಿರ್ಧಾರ

ಕರ್ನಾಟಕ ವಿಧಾನಸಭೆ ಚುನಾವಣೆಗೆ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಲಿದ್ದಾರೆ. ಹೀಗಾಗಿ ಇಂದು ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

DK Shivakumar Nomination: ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ‌ಭವಿಷ್ಯ ನಿರ್ಧಾರ
ಡಿಕೆ ಶಿವಕುಮಾರ್​
Follow us
ರಮೇಶ್ ಬಿ. ಜವಳಗೇರಾ
|

Updated on: Apr 21, 2023 | 7:21 AM

ಬೆಂಗಳೂರು/ರಾಮನಗರ: ಈ ಬಾರಿ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ(Nomination) ಸಲ್ಲಿಸಿದ್ದಾರೆ. ಆದ್ರೆ, ಇದೀಗ ಆ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು(ಏಪ್ರಿಲ್ 21) ನಿರ್ಧಾರವಾಗಲಿದೆ. ತಮ್ಮ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ನಿನ್ನೆ (ಏಪ್ರಿಲ್ 20)  ಸಹೋದರ ಸಂಸದ ಡಿಕೆ ಸುರೇಶ್​ ಅವರಿಂದಲೂ ನಾಮಪತ್ರ ಹಾಕಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ನಂತರ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ(nomination verification) ನಡೆಸಲಿದ್ದು, ನಾಮಪತ್ರದಲ್ಲಿ ಲೋಪದೋಷಗಳು ಕಂಡುಬಂದಿದರೆ ತಿರಸ್ಕೃತ ಮಾಡುತ್ತಾರೆ.

ಇದನ್ನೂ ಓದಿ: ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಐಟಿ ಅಧಿಕಾರಿಗಳು ಸಹ ನಾಲ್ಕು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲದೆ ಏಪ್ರಿಲ್ 17 ರಂದು ಡಿಕೆ ಶಿವಕುಮಾರ್​ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಐಟಿ ಅಧಿಕಾರಿಗಳು ಆಸ್ತಿ ವಿವರದ ಮಾಹಿತಿ‌ ಪಡೆದಿದ್ದಾರೆ. ಜೊತೆಗೆ ಕನಕಪುರಕ್ಕೆ ಬಂದು ಮಾಹಿತಿ ಪಡೆದು ಹೋಗಿದ್ದಾರೆ‌. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲೇ ಡಿಕೆ ಶಿವಕುಮಾರ್​ ತಮ್ಮ ನಾಮಪತ್ರ ತಿರಸ್ಕಾರ ಆದ್ರೆ, ಸಹೋದರ ಕಣದಲ್ಲಿ ಇರಲಿ ಎಂಬ ಲೆಕ್ಕಾಚಾರಿಂದ ನಾಮಿನೇಷನ್ ಫೈಲ್ ಮಾಡಿಸಿದ್ದಾರೆ.

ತೆರಿಗೆ ಪಾವತಿ ವಿವರದಲ್ಲಿ ವ್ಯತ್ಯಾಸ ಪತ್ತೆ

ನಾಮಪತ್ರ ಸಲ್ಲಿಕೆ ವೇಳೆ ಡಿಕೆಶಿ ಆಸ್ತಿ ವಿವರ ಸಲ್ಲಿಸಿದ್ದು, ಡಿಕೆಶಿ ಆಸ್ತಿ ವಿವರದ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಿದ್ದಾರೆ. ಕಳೆದ ಐದು ವರ್ಷಗಳ ತೆರಿಗೆ ಪಾವತಿ ವಿವರವನ್ನು ಕಲೆಹಾಕಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಬೇರೆಯೇ ಇದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರೋ ಮಾಹಿತಿಯಲ್ಲಿ ವ್ಯತ್ಯಾಸವಿದೆ. ಹೀಗಾಗಿಯೇ ಡಿಕೆಶಿ ನಾಮಪತ್ರ ತಿರಸ್ಕಾರ ಆಗುವ ಆತಂಕವಿದೆ. ಇಂದು ನಾಮಪತ್ರಗಳ ಪರಿಶೀಲನೆ ಇದ್ದು ಡಿಕೆ ಶಿವಕುಮಾರ್​ ಚುನಾವಣಾ ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ: ನಾನು ಸರೆಂಡರ್ ಆಗಲ್ಲ: ಡಿಕೆ ಶಿವಕುಮಾರ್ ಹೀಗ್ಯಾಕೆ ಹೇಳಿದರು ಗೊತ್ತಾ?

ಸುಳ್ಳು ಮಾಹಿತಿ ಎಂದು ಸಾಬೀತಾದರೆ ಕಷ್ಟ

ಒಂದು ವೇಳೆ ಡಿಕೆಶಿ ನಾಮಪತ್ರ ತಿರಸ್ಕಾರವಾದರೆ ಕಣದಲ್ಲಿ ‘ಕೈ’ ಅಭ್ಯರ್ಥಿಯೇ ಇಲ್ಲದಂತಾಗುತ್ತೆ. ಹೀಗಾಗಿ ಡಿಕೆ ಶಿವಕುಮಾರ್​ ನಾಮಪತ್ರ ತಿರಸ್ಕೃತವಾದರೂ ಸಹೋದರ ಇರಲಿ. ಕ್ಷೇತ್ರದಲ್ಲಿ ನಮ್ಮದೇ ಕುಟುಂಬದ ಹಿಡಿತವಿರಲಿ ಎನ್ನುವುದು ಡಿಕೆ ಶಿವಕುಮಾರ್ ಅವರ ಲೆಕ್ಕಾಚಾರವಾಗಿದೆ. ಇನ್ನು ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಒಂದೇ ವೇಳೆ ಯಾರಾದರೂ ತಕರಾರು ಹಾಕಿದರೆ ಸಮಸ್ಯೆಯಾಗಲಿದೆ. ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ಎಂದು ದೂರು ನೀಡಿದರೆ ಸಂಕಷ್ಟ ಎದುರಾಗಲಿದೆ.

ಚುನಾವಣಾ ಅಧಿಕಾರಿಗಳು ಡಿಕೆ ಶಿವಕುಮಾರ್ ಆಸ್ತಿ ವಿವರ ಪರಿಶೀಲನೆ ಮಾಡಲಿದ್ದು, ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿರುವುದು ಸಾಬೀತಾದ್ರೆ ನಾಮಪತ್ರ ತಿರಸ್ಕೃತ ಸಂಭವವಿದೆ. ಹೀಗಾಗಿಯೇ ಸೇಫರ್‌ ಸೈಡ್‌ಗಾಗಿ ಡಿ.ಕೆ.ಸುರೇಶ್‌ ಅವರಿಂದ ನಾಮಪತ್ರ ಸಲ್ಲಿಸಿದ್ದಾರೆ. ಪ್ಲ್ಯಾನ್ A ಫೇಲ್ ಆದರೂ ಪ್ಲ್ಯಾನ್ B ಸಕ್ಸಸ್ ಆಗಲಿ ಎನ್ನುವುದು ಡಿಕೆಶಿ ಲೆಕ್ಕಾಚಾರವಾಗಿದೆ. ಪರಿಶೀಲನೆ ವೇಳೆ ಆಸ್ತಿ ವಿವರ, ತೆರಿಗೆ ವಿಚಾರ ಕುರಿತ ಅಂಶಗಳ ಕಾರಣದಿಂದ ನಾಮಪತ್ರ ಏನಾದರೂ ರಿಜೆಕ್ಟ್ ಆಗುತ್ತಾ, ತಮ್ಮ ಸಿಎಂ ಆಗುವ ಕನಸು ಭಗ್ನವಾಗುತ್ತಾ ಎಂಬ ಆತಂಕ ಡಿಕೆ ಶಿವಕುಮಾರ್​ಗೆ ಶುರುವಾಗಿದ್ದು, ಅವರ ರಾಜಕೀಯ ಭವಿಷ್ಯ ಏನಾಗಲಿದೆ ಎನ್ನುವುದು ಕಾದುನೋಡಬೇಕಿದೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್