ಕನಕಪುರ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ ತಮ್ಮ ಮತ್ತು ಕುಟುಂಬಸ್ಥರ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬಸ್ಥರ ಆಸ್ತಿ ವಿವರ
Rakesh Nayak Manchi
Updated on:
Apr 17, 2023 | 9:22 PM
ರಾಮನಗರ: ಕನಕಪುರ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ ತಮ್ಮ ಮತ್ತು ಕುಟುಂಬಸ್ಥರ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಾವಿರ ಕೋಟಿ ಒಡೆಯರಾಗಿರುವ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ಚರಾಸ್ತಿ ಎಷ್ಟಿದೆ? ಚಿರಾಸ್ತಿ ಎಷ್ಟಿದೆ? ಇವರ ಕುಟುಂಬದ ಸದಸ್ಯರ ಹೆಸರಿನಲ್ಲಿ ಏನೇನಿದೆ? ಎಷ್ಟೆಷ್ಟಿದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಡಿಕೆ ಶಿವಕುಮಾರ್ ಕುಟುಂಬದ ಚರಾಸ್ತಿ ವಿವರ
ಡಿಕೆ ಶಿವಕುಮಾರ್ ಹೆಸರಿನಲ್ಲಿ ಚರಾಸ್ತಿ ಮೌಲ್ಯ: 244.93 ಕೋಟಿ ರೂ.
ಪತ್ನಿ ಉಷಾ ಹೆಸರಿನಲ್ಲಿರುವ ಚರಾಸ್ತಿ ಮೌಲ್ಯ: 20.30 ಕೋಟಿ ರೂ.
ಡಿಕೆ ಶಿವಕುಮಾರ್ ಪುತ್ರ ಆಕಾಶ್ ಹೆಸರಿನಲ್ಲಿರುವ ಚರಾಸ್ತಿ ಮೌಲ್ಯ: 12.99 ಕೋಟಿ ರೂ.
ಡಿಕೆ ಶಿವಕುಮಾರ್ ಕುಟುಂಬದ ಸ್ಥಿರಾಸ್ತಿ ವಿವರ
ಡಿಕೆ ಶಿವಕುಮಾರ್ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 970 ಕೋಟಿ ರೂ.
ಪತ್ನಿ ಉಷಾ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 113.38 ಕೋಟಿ ರೂ.
ಪುತ್ರ ಆಕಾಶ್ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ: 54.33 ಕೋಟಿ ರೂ.