Karnataka Election 2023 Highlights updates: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು 7 ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಪ್ರಬಲ ಮೂರು ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಹಾಗೇ ತಮ್ಮ ಪ್ರಣಾಳಿಕೆಯನ್ನೂ ಬಿಡುಗಡೆ ಮಾಡಿವೆ. ಬಿಜೆಪಿಯ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಪ್ರಧಾನಿ ಮೋದಿಯವರು ಘೋಷವಾಕ್ಯದಂತೆ ಮೊಳಗಿಸುತ್ತಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ಯುವ ಮತದಾರರು ಮತ್ತು ರೈತರನ್ನು ಟಾರ್ಗೆಟ್ ಮಾಡಿದ್ದು, ಪ್ರತಿ ಸಮಾವೇಶದಲ್ಲಿ ಯುವಕರು ಮತ್ತು ರೈತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಹಾಗೇ ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್ ಪಾಳಯದಲ್ಲಿ ನಾಯಕ ರಾಹುಲ್ ಗಾಂಧಿ ಮತಯಾಚಿಸುತ್ತಿದ್ದು, ನಿನ್ನೆ (ಮೇ.02) ಶಿವಮೊಗ್ಗದಲ್ಲಿ ನಡೆದ ಸಮಾವೇಶದಲ್ಲಿ ನಟ ಶಿವರಾಜ್ಕುಮಾರ್ ಅವರು ಕೂಡ ಸಾಥ್ ನೀಡಿದ್ದರು. ಅಲ್ಲದೇ ನಾನು ರಾಹುಲ್ ಗಾಂಧಿ ಅಭಿಮಾನಿ ಎಂದರು. ಈ ರೀತಿಯಾಗಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ವಿದ್ಯಮಾನಗಳು ನಡೆಯುತ್ತಿದ್ದು, ಇಂದಿನ ಲೇಟೆಸ್ಟ್ ಅಪ್ಡೇಟ್ಸ್
ಬೆಳಗಾವಿ: ಅನುಮತಿ ಪಡೆಯದೇ ಲಿಂಗಾಯತ ಮುಖಂಡರ ಸಭೆ ಕರೆದು ಊಟದ ವ್ಯವಸ್ಥೆ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ನಂದಗಡ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅನುಮತಿ ಪಡೆಯದೇ ಲಿಂಗಾಯತ ಮುಖಂಡರ ಸಭೆ ಕರೆದು ಊಟದ ವ್ಯವಸ್ಥೆ ಆರೋಪ: ಈರಣ್ಣ ಕಡಾಡಿ ಸೇರಿ ನಾಲ್ವರ ವಿರುದ್ಧ FIR
ಹಾವೇರಿ: ನಾಳೆ ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10.45ಕ್ಕೆ ಕಲಬುರಗಿಯಿಂದ ಪ್ರಿಯಾಂಕಾ ಪ್ರಯಾಣ ಆರಂಭಿಸಲಿದ್ದು, ಬಳ್ಳಾರಿಯ ಜಿಂದಾಲ್ ಏರ್‌ಪೋರ್ಟ್‌ಗೆ ತೆರಳಲಿದ್ದಾರೆ. ನಂತರ ಜಿಂದಾಲ್ ವಿಮಾನ ನಿಲ್ದಾಣದಿಂದ ಕನಕಗಿರಿಗೆ ಪ್ರಯಾಣ. ಕನಕಗಿರಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 1ಕ್ಕೆ ಕನಕಗಿರಿಯಿಂದ ಹಿರೇಕೆರೂರಿಗೆ ಪ್ರಯಾಣ, ಹಿರೇಕೆರೂರಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿ. ನಂತರ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಶಿವಮೊಗ್ಗ: ನಾನು ಮತ್ತು ದೇವೇಗೌಡರ ಕುಟುಂಬ ಬ್ರಾಹ್ಮಣ ವಿರೋಧಿಗಳಲ್ಲ ಎಂದು ಬ್ರಾಹ್ಮಣ ಸಮಾಜಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವರಿಕೆ ಮಾಡಿದರು. ರಾಮಕೃಷ್ಣ ಹೆಗಡೆ ಸಿಎಂ ಆಗಲು ಪ್ರಮುಖ ಪಾತ್ರ ವಹಿಸಿದ್ದು ದೇವೇಗೌಡರು. ಬ್ರಾಹ್ಮಣ ಸಮಾಜದ ಸಿಎಂ ಮಾಡಿದ್ದು ದೇವೇಗೌಡರು. ಜೆಡಿಎಸ್ ಅಧಿಕಾರಕ್ಕೆ ಬಂದ್ರೆ 100 ಕೋಟಿ ರೂ. ಬ್ರಾಹ್ಮಣ ಸಮಾಜ ಪ್ರಾಧಿಕಾರಕ್ಕೆ ನೀಡುತ್ತೇನೆ ಎಂದು ಹೇಳಿದರು.
ಕಲಬುರಗಿ: ಜನರು ಜಾಗೃತರಾಗಬೇಕು, ಕೇಳಬೇಕು. ಸಣ್ಣ ಸಣ್ಣ ಉದ್ಯೋಗ ಮಾಡೋರ ಉದ್ಯೋಗ ನಷ್ಟವಾಗಿದೆ. ಅನೇಕ ಸಾರ್ವಜನಿಕ ಉದ್ಯಮಗಳನ್ನು ಖಾಸಗಿ ಮಾಡಿದ್ದಾರೆ. ದೇಶದ ಬಹುತೇಕ ಸಂಪತ್ತು ಅದಾನಿ ಅಂತಹ ಕೆಲವೇ ಉದ್ಯಮಿಗಳ ಬಳಿ ಇದೆ. ಬಿಜೆಪಿ ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದೆ ಎಂದು ನಗರದಲ್ಲಿ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.
ಮಂಡ್ಯ: ಪ್ರಚಾರಕ್ಕೆ ತೆರಳುತ್ತಿದ್ದಾಗ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ನಾರಾಯಣಗೌಡ ಕಾರು ಅಡ್ಡಗಟ್ಟಿ ದಾಳಿ ಮಾಡಿದ್ದು, ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿರುವಂತಹ ಘಟನೆ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಶೀಳನೆರೆ ಹೋಬಳಿ ರಾಜಘಟ್ಟದಲ್ಲಿ ನಡೆದಿದೆ.
ಮೈಸೂರು: ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದಲ್ಲಿ ತೆರೆದ ವಾಹನದಲ್ಲಿ ನಟಿ ರಮ್ಯಾ ಪ್ರಚಾರ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ಪರ ಮತಯಾಚನೆ ಮಾಡಿದರು. ಕಾವೇರಿ ವೃತ್ತದಿಂದ ಟಿ.ನರಸೀಪುರ ವೃತ್ತದವರೆಗೆ ರೋಡ್ಶೋ ಮಾಡಿದ್ದು, ಮಾಜಿ ಸಂಸದೆ, ನಟಿ ರಮ್ಯಾಗೆ ಕಾರ್ಯಕರ್ತರು ಹೂವಿನ ಮಳೆಗರೆದರು. ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ಸುನೀಲ್ ಬೋಸ್ ಭಾಗಿ.
ಹಾಸನ: ದೇವೇಗೌಡರು, ಕುಮಾರಸ್ವಾಮಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ. ಜಿಲ್ಲೆಯ 7 ಕ್ಷೇತ್ರಗಳಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ದೇವೇಗೌಡರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲಾಗುವುದು. ಗ್ರಾಮಾಂತರ & ನಗರ ಪ್ರದೇಶದ ಜನರಿಗೆ ಒಳ್ಳೆಯ ಶಿಕ್ಷಣ ಸಿಗಬೇಕು. 2 ರಾಷ್ಟ್ರೀಯ ಪಕ್ಷಗಳು ಶಿಕ್ಷಣವನ್ನು ವ್ಯಾಪಾರಿ ಸಂಸ್ಥೆ ಮಾಡಿಕೊಂಡಿವೆ ಎಂದು ಕಿಡಿಕಾರಿದರು.
ವಿಜಯಪುರ: ಸವದಿ ಹೆಣ ಕೆಡವೋದು ಯಾವುದೋ ಒಬ್ಬ ವ್ಯಕ್ತಿಯ ಕೈಯಲ್ಲಿ ಇಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಣ ಸವದಿ ತಿರುಗೇಟು ನೀಡಿದರು. ಭಗವಂತನ ಇಚ್ಛೆ ಇದ್ದರೆ ಏನು ಬೇಕಾದರೂ ಆಗುತ್ತದೆ ಎಂದು ಹೇಳಿದರು.
ಬೆಂಗಳೂರು: ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ಜಾರಿ ಮಾಡಿದೆ. ಪ್ರಧಾನಿ ಮೋದಿರನ್ನು ನಾಲಾಯಕ್ ಎಂದಿದ್ದ ಶಾಸಕ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿರನ್ನು ವಿಷ ಕನ್ಯೆ ಎಂದು ಶಾಸಕ ಯತ್ನಾಳ್ ಟೀಕಿಸಿದ್ದರು. ಹಾಗಾಗಿ ಇಬ್ಬರಿಗೂ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಗದಗ: ಕಾಂಗ್ರೆಸ್ ಹಿಂದಿ ವಿರೋಧಿ ನೀತಿ ಹೊಂದಿರುವುದು ಸ್ಪಷ್ಟವಾಗಿದೆ ಎಂದು ನಗರದಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. 370 ತೆಗೆದಾಗ ಪಾಕಿಸ್ತಾನ, ಕಾಂಗ್ರೆಸ್ನ ಭಾಷೆ ಒಂದೇ ಆಗಿತ್ತು. ಭಯೋತ್ಪಾದಕ ಸತ್ತಾಗ ಸೋನಿಯಾ ರಾತ್ರಿ ನಿದ್ದೆ ಮಾಡಿರಲಿಲ್ಲ. ಮುಸ್ಲಿಮರಿಗೆ ಮಾತ್ರ ಮೀಸಲಾತಿ ಕೊಡ್ತೀವಿ ಅನ್ನೋದು ಅಪರಾಧ ಎಂದು ಹೇಳಿದರು.
ನಾನು ಪ್ರಣಾಳಿಕೆ ಸಮಿತಿ ಸದಸ್ಯ ಅಲ್ಲ ಎಂದು ಸುರ್ಜೇವಾಲ ಹೇಳಿದ್ದಾರೆ. ಯಾರೇ ಕಾನೂನು ಉಲ್ಲಂಘನೆ ಮಾಡಿದ್ರು ಕ್ರಮ ತಗೋತೀವಿ. ಯಾವುದೇ ಸಂಘಟನೆ ಆದರು ಕ್ರಮ ತಗೋತೀವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ 4 ವರ್ಷಗಳಲ್ಲಿ 1500 ದೇವಸ್ಥಾನಹಳನ್ನ ಒಡೆದು ಹಾಕಿದೆ ಎಂದು ಗಂಭೀರವಾದ ಆರೋಪ ಮಾಡಿದರು.
ಬೆಳಗಾವಿ: ಕುಂಬಾರ, ಕಮ್ಮಾರ್, ಅಕ್ಕಸಾಲಿಗ, ವಿಶ್ವಕರ್ಮ ಸಮಾಜಕ್ಕೂ ಯೋಜನೆ. ಪಿಎಂ ವಿಶ್ವಕರ್ಮ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಮುದ್ರಾ ಯೋಜನೆಯಡಿ ಬಡ್ಡಿರಹಿತ ಸಾಲ ನೀಡಲಾಗಿದೆ. ನನ್ನದೊಂದು ವೈಯಕ್ತಿಕ ಕೆಲಸ ಮಾಡುವಂತೆ ಮನವಿ ಮಾಡಿದ ಪ್ರಧಾನಿ ಮೋದಿ, ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೂ ಭೇಟಿ ನೀಡಿ, ಪ್ರತಿಯೊಬ್ಬರಿಗೂ ನನ್ನ ನಮಸ್ಕಾರಗಳನ್ನು ತಿಳಿಸಿ. ಮೋದಿ ಬೆಳಗಾವಿಗೆ ಬಂದಿದ್ರು, ನಿಮಗೆ ನಮಸ್ಕಾರ ತಿಳಿಸುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿ: ಕಳೆದ 9 ವರ್ಷಗಳಲ್ಲಿ ಕಬ್ಬು ಬೆಳಗಾರರಿಗೆ ಅನೇಕ ಯೋಜನೆ ತಂದಿದ್ದೇವೆ. ಕಬ್ಬು ಬೆಳಗಾರರಿಗೆ ಬಿಜೆಪಿ 10,000 ಕೋಟಿ ಹಣ ಮೀಸಲಿಟಿದೆ. ಡಬಲ್ ಇಂಜಿನ್ ಸರ್ಕಾರದಿಂದ ದುಪ್ಪಟ್ಟು ಲಾಭವಿದೆ. ಕುರಿಗಾಹಿಗಳಿಗೆ ನಮ್ಮ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದರು.
ಬೆಳಗಾವಿ: 2009ರಲ್ಲಿ ಕಾಂಗ್ರೆಸ್ ದೇಶದ ಜನರಿಗೆ ಸುಳ್ಳು ಗ್ಯಾರಂಟಿ ನೀಡಿದ್ದರು. ಭಾರತೀಯ ಜನತಾ ಪಾರ್ಟಿ ನುಡಿದಂತೆ ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. 2004ರಲ್ಲಿ ಪ್ರತಿ ಮನೆಗೆ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು. ನಾವು ಅಧಿಕಾರಕ್ಕೆ ಬರುವವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿರಲಿಲ್ಲ. ಬೆಳಗಾವಿ ಜಿಲ್ಲೆಯ 40,000 ಕುಟುಂಬಗಳಿಗೆ ವಿದ್ಯುತ್ ಒದಗಿಸಿದ್ದೇವೆ. ರೈಲ್ವೆ ಕ್ಷೇತ್ರದಲ್ಲೂ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ಎಂದರು.
ಬೆಳಗಾವಿ: ಕರ್ನಾಟಕದ ಜನರಿಗೆ ಕಾಂಗ್ರೆಸ್, ಜೆಡಿಎಸ್ ದ್ರೋಹ ಬಗೆದಿವೆ ಎಂದು ಕಾಂಗ್ರೆಸ್ನ ಶಾರ್ಟ್ ಕಟ್ ರಾಜಕೀಯ ವಿರುದ್ಧ ಮೋದಿ ಗುಡಿಗಿದರು. ಕಾಂಗ್ರೆಸ್ ಪಕ್ಷ ಸಮಾಜವನ್ನು ಎತ್ತಿಕಟ್ಟುವುದರಲ್ಲಿ ನಿರತರಾಗಿದ್ದಾರೆ. ಸ್ವಾತಂತ್ರ್ಯ ಸಿಕ್ಕು ಇಷ್ಟು ಕಳೆದರೂ ಗ್ರಾಮಗಳಿಗೆ ವಿದ್ಯುತ್ ನೀಡಿರಲಿಲ್ಲ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಮಂತ್ರದಡಿ ಅಭಿವೃದ್ಧಿ ಮಾಡ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಬೆಳಗಾವಿ: ಕಾಂಗ್ರೆಸ್‌ನವರು ವೀರ ಸಾವರ್ಕರ್ ವಿರುದ್ಧ ಪದೇಪದೆ ಬೈಯ್ಯುತ್ತಾರೆ. ಮಹಾಪುರುಷ ಡಾ. ಅಂಬೇಡ್ಕರ್ರನ್ನು ಕಾಂಗ್ರೆಸ್ ಅಪಮಾನ ಮಾಡಿದೆ. ವೀರೇಂದ್ರ ಪಾಟೀಲ್, ನಿಜಲಿಂಗಪ್ಪರನ್ನೂ ಕಾಂಗ್ರೆಸ್ ಪಕ್ಷದಿಂದ ಅಪಮಾನ ಮಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ಕೊಟ್ಟಿರಲಿಲ್ಲ. ನಾವು ಸೇನೆಯ ಮೂರು ಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದೇವೆ. ಮೊದಲ ಬಾರಿಗೆ ವೋಟ್ ಮಾಡುವವರು ಯೋಚಿಸಿ ವೋಟ್ ಮಾಡಿ ಎಂದು ಪ್ರಧಾನಿ ಮೋದಿ ಹೇಳಿದರು.
ಬೆಳಗಾವಿ: ಕಾಂಗ್ರೆಸ್, ಜೆಡಿಎಸ್ನಿಂದ ಕರ್ನಾಟಕದ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ. ಸರ್ಕಾರಿ ಹುದ್ದೆಗಳ ನೇಮಕಾತಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಇತ್ತು. 2014ರಲ್ಲಿ ಬಿಜೆಪಿ ಬಂದ ಮೇಲೆ ಸ್ಥಳೀಯ ಭಾಷೆಗಳಲ್ಲೂ ಪರೀಕ್ಷೆಗೆ ಅವಕಾಶ ನೀಡಲಾಗುತ್ತಿದ್ದು, ಕನ್ನಡ, ತಮಿಳು, ಮರಾಠಿ ಸೇರಿದಂತೆ ಎಲ್ಲ ಭಾಷೆಗಳಿಗೂ ಆದ್ಯತೆ ನೀಡಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಬೆಳಗಾವಿ: ಮಹಿಳೆಯರು, ವೃದ್ಧರು, ಯುವಕರು ಎಲ್ಲರೂ ಉತ್ಸಾಹದಲ್ಲಿ ಇದ್ದಾರೆ. ಅವರೆಲ್ಲರ ಮಂತ್ರ ಈ ಬಾರಿ ಒಂದೇ ಆಗಿದೆ. ಈ ಬಾರಿಯ ನಿರ್ಧಾರ ಬಹುಮತ ಬಿಜೆಪಿ ಸರ್ಕಾರ. ಬಿಜೆಪಿಗೆ ಬಹುಮತ ನೀಡಲು ಕರ್ನಾಟಕದ ಜನ ತೀರ್ಮಾನಿಸಿದ್ದಾರೆ. ಬಡವರು, ಹಿಂದುಳಿದ, ಶೋಷಿತರ ಅಭಿವೃದ್ಧಿಗೆ ನಮ್ಮ ಗುರಿ. ಮೂಲಸೌಕರ್ಯ ಕ್ಷೇತ್ರದಲ್ಲಿ ವೇಗದ ಗತಿಯಲ್ಲಿ ಅಭಿವೃದ್ಧಿಯಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಬೆಳಗಾವಿ: ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಕುಟುಂಬ ಪಕ್ಷಗಳು ಎಂದು ಬೈಲವಾಡ ಕ್ರಾಸ್‌ನಲ್ಲಿ ಬಿಜೆಪಿ ಸಮಾವೇಶದಲ್ಲಿ ಮೋದಿ ವಾಗ್ದಾಳಿ ಮಾಡಿದರು. ಬಿಜೆಪಿಗೆ ದೇಶದ ಜನರೇ ಒಂದು ಕುಟುಂಬವಿದ್ದಂತೆ. 2018ರ ಚುನಾವಣೆಯಲ್ಲಿ 3 ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಗೆದ್ದಿದೆ ಎಂದು ಹೇಳಿದರು.
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಕ್ರಾಸ್‌ನಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದರು. ಸಂಗೊಳ್ಳಿ ರಾಯಣ್ಣನ ನಾಡಿನ ಜನತೆಗೆ ನನ್ನ ನಮಸ್ಕಾರಗಳು. ಕರ್ನಾಟಕ ಅಭಿವೃದ್ಧಿಯಲ್ಲಿ ನಂಬರ್ 1 ರಾಜ್ಯವನ್ನಾಗಿ ಮಾಡ್ತೇವೆ. ಕಳೆದ 3-4 ದಿನಗಳಿಂದ ಕರ್ನಾಟಕದ ಹಲವೆಡೆ ಪ್ರವಾಸ ಮಾಡಿದ್ದೇನೆ ಎಂದು ಹೇಳಿದರು.
ನಾಗಮಂಗಲ: ಬಜರಂಗದಳ ಸಂಘಟನೆ ನಿಷೇಧ ಮಾಡುತ್ತೇವೆ ಎಂದು ಹೇಳಿಲ್ಲವೆಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಹದಗೆಡಿಸುವ ಸಂಘಟನೆ ಬ್ಯಾನ್ ಮಾಡುತ್ತೇವೆ ಎಂದಿದ್ದೇವೆ. ಬೇರೆ ಕೆಲಸ ಇಲ್ಲದೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಮಾಡಲಾಗಿದೆ ಈ ಕುರಿತಾಗಿ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ನಮ್ಮ ಪ್ರಣಾಳಿಕೆಯಲ್ಲಿ ಬದಲಾವಣೆ ಇಲ್ಲ. ಬೆಂಗಳೂರಿನಲ್ಲಿ ಬಿಜೆಪಿಯವರು ಮಾತ್ರ ಆಂಜನೇಯನ ಭಕ್ತರಾ? ನಾವು ಕೂಡ ಆಂಜನೇಯ ಭಕ್ತರು ಎಂದು ಕಿಡಿಕಾರಿದ್ದಾರೆ.
ಉತ್ತರ ಕನ್ನಡ: ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಭೇಟಿಯಾಗಿದ್ದಾರೆ.
ಕಾರವಾರ: ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದಕ್ಕೆ ಕಾಂಗ್ರೆಸ್ ವಿರೋಧ ಮಾಡಿತು. ಆದಿವಾಸಿ ಮಹಿಳೆ ರಾಷ್ಟ್ರಪತಿ ಸ್ಥಾನಕ್ಕೆ ಹೋದರೇ ಕಾಂಗ್ರೆಸ್ಗೆ ಹೊಟ್ಟೆಕಿಚ್ಚು ಪಟ್ಟಿತು. ಈಗ ಆದಿವಾಸಿ ಜನರು ನಿರ್ಧರಿಸಿದ್ದಾರೆ ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರವಿಡಬೇಕೆಂದು. ಸಮಾಜದ ಎಲ್ಲ ವರ್ಗಗಳ ಅಬಿವೃದ್ಧಿಯೇ ಬಿಜೆಪಿಯ ಸಂಕಲ್ಪವಾಗಿದೆ.
ಕಾರವಾರ: ಕಾಂಗ್ರೆಸ್ ಸರ್ಕಾರ 4 ಕೋಟಿ 20 ಲಕ್ಷ ನಕಲಿ ಹೆಸರಿನ ವ್ಯಕ್ತಿಗಳಿಗೆ ರೇಷನ್ ನೀಡಿದೆ. ನಕಲಿ ಹೆಸರಿನಲ್ಲಿ ಸ್ಕಾಲರ್ಷಿಪ್ ಕೊಡುತ್ತಿದ್ದರು. ಈ ಎಲ್ಲ ಹಣ ಕಾಂಗ್ರೆಸ್ ಎಲ್ಲ ನಾಯಕರಿಗೆ ಜೇಬಿಗೆ ಹೋಗುತ್ತಿತ್ತು. ಕಾಂಗ್ರೆಸ್ ಮೇಲೆ ಮೋದಿ ಯಾಕೆ ಇಷ್ಟು ಸಿಟ್ಟಾಗಿದ್ದಾರೆ ಎಂದರೇ ಭ್ರಷ್ಟಾಚಾರ ಹೊರ ಎಳೆದಿದ್ದಕ್ಕೆ ಕೆಂಡಕಾರುತ್ತಿದ್ದಾರೆ.
ಕಾರವಾರ: ಡಬಲ್ ಇಂಜಿನ್ ಸರ್ಕಾರ ರಚನೆಯಾದಾಗ ಈ ಹಿಂದಿನ ಸರ್ಕಾರದ ಕೆಟ್ಟ ಕಾರ್ಯಗಳನ್ನು ತೆಗೆಯುದರಲ್ಲೇ ಹೆಚ್ಚಿನ ಸಮಯ ಹೋಯ್ತು. ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ರಾಜ್ಯದಲ್ಲಿ ವಿದೇಶದಿಂದ 30 ಸಾವಿರ ಕೋಟಿ ಹೂಡಿಕೆ ಆಯ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಇದು ಮೂರು ಪಟ್ಟು ಅಂದರೇ 90 ಸಾವೀರ ಕೊಟಿ ಹೆಚ್ಚಿಗೆ ಆಯ್ತು. ರಾಜ್ಯದ ಅಭಿವೃದ್ಧಿಯೇ ಬಿಜೆಪಿ ಸರ್ಕಾರದ ಧ್ಯೇಯ.
ಕಾರವಾರ: ನಾನು ನಿಮ್ಮ ಸೇವಕ, ನೀವು ಹೇಳುತ್ತಿರಿ ಅದನ್ನು ಮಾಡುತ್ತೇನೆ. ನಮಗೆ ರಿಮೋಟ್ ಕಂಟ್ರೋಲ್ ಇಲ್ಲ. ನನಗೆ ನೀವೆ ರಿಮೋರ್ಟ್ ಕಂಟ್ರೋಲ್. ಉತ್ತರ ಕನ್ನಡ ಪ್ರಾಕೃತಿಕವಾಗಿ ಬಹಳಷ್ಟು ಸುಂದರವಾಗಿದೆ.
ಕಾರವಾರ: ಬಜರಂಗ ಬಲಿ ಜೈಕಾರ ಮತ್ತು ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ. ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಅಭ್ಯರ್ಥಿಗಳಾದ ವಿಶ್ವೇಶ್ವರ್ ಹೆಗಡೆ ಕಾಗೇರಿ, ರೂಪಾಲಿ ನಾಯ್ಕ, ಶಿವರಾಮ್ ಹೆಬ್ಬಾರ್, ಸುನೀಲ್ ನಾಯ್ಕ, ಸುನೀಲ್ ಹೆಗಡೆ ಉಪಸ್ಥಿತರಿದ್ದಾರೆ.
ಹುಬ್ಬಳ್ಳಿ: ಇದು ನನ್ನ ಕೊನೆಯ ಚುನಾವಣೆ. ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ವಿಚಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ ಈ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ. ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
ಮಂಗಳೂರು: ದೇಶದ ಆರ್ಥಿಕತೆ ಜಗತ್ತಿನಲ್ಲೇ 5ನೇ ಸ್ಥಾನದಲ್ಲಿದೆ. ಇದರ ಅರ್ಥ ದೇಶ ಅಭಿವೃದ್ಧಿಯಾಗುತ್ತಿದೆ. ನಮಗಿಂತ ಮುಂದಿದ್ದ ಇಂಗ್ಲೆಂಡ್ ಅನ್ನು ಹಿಂದಕ್ಕೆ ಹಾಕಿ ಮುಂದೆ ಹೋಗಿದ್ದೇವೆ ಇದಕ್ಕೆ ಕಾರಣ ಮೋದಿ ಸರ್ಕಾರ. ಈಗ 3 ನೇ ಸ್ಥಾನಕ್ಕೆ ಹೋಗಲು ನಿಮ್ಮ ಆಶಿರ್ವಾದ ಬೇಕು. ಇದು ಕರ್ನಾಟಕದ ಸಹಕಾರವಿಲ್ಲದೆ ಆಗಲ್ಲ. ಹೀಗಾಗಿ ಮೇ 10ರಂದು ಬಿಜೆಪಿಗೆ ಮತ ನೀಡಿ. ಹಾಗಿದ್ದರೇ ದೃಢ ನಿರ್ಧಾರ ಮಾಡಿ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ. ಬಜರಂಗಬಲಿ ಜೈ ಎನ್ನುವ ಮೂಲಕ ಮಾತು ಮುಗಿಸಿದ ಪ್ರಧಾನಿ ಮೋದಿ.
ಮಂಗಳೂರು: ಬಿಜೆಪಿ ಯುವಕರಿಗೆ ಮತ್ತು ಯುವಕರ ಭವಿಷ್ಯವನ್ನು ರೂಪಿಸುವಲ್ಲಿ ಸಾಕಷ್ಟು ಕೆಲಸ ಮಾಡುತ್ತಿದೆ. ಯುವ ಸ್ಟಾರ್ಟ್ಅಪ್ಗಳಿಗೆ ಸಾಕಷ್ಟು ಅವಕಾಶ ಮಾಡಿಕೊಟ್ಟಿದೆ. ಸ್ಟಾರ್ಟ್ಅಪ್ಗಳಿಗಾಗಿ ಪಾಲಿಸಿ ಜಾರಿಗೆ ತಂದಿದ್ದೇವೆ. ದೇಶದಲ್ಲಿ 10 ಸಾವಿ ಅಟಲ್ ಟಿಂಕರಿಂಗ್ ಸಂಶೋಧನಾ ಸಂಸ್ಥೆಗಳಿವೆ. ಇದು ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಇದು ಸ್ಟಾರ್ಟ್ಅಪ್ಗಳಿಗೆ ನರ್ಸರಿ ಕ್ಲಾಸ್ ಇದ್ದ ಹಾಗೆ
ಮಂಗಳೂರು: ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿಯನ್ನು ನೀವು ನೋಡುತ್ತಿದ್ದೀರಿ. ವೇಗವಾಗಿ ಅಭಿವೃದ್ಧಿ ಮಾಡುವ ಬಿಜೆಪಿಗೆ ಮತ ನೀಡಿ. ಡಬಲ್ ಇಂಜಿನ್ ಸರ್ಕರದಿಂದ ಮೀನುಗಾರರಿಗೆ ಸಾಷ್ಟು ಅನುಕೂಲವಾಗಿದೆ. ಹೀಗಾಗಿ ಸಮುದ್ರದ ತೀರದಲ್ಲಿರುವ ಪ್ರತಿಯೊಬ್ಬ ಮೀನುಗಾರ ಹೇಳುತ್ತಿದ್ದಾನೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ. ಉಡುಪಿ ಮತ್ತು ದಕ್ಷಿಣ ಕನ್ನಡ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದೆ. ಸದ್ಯ ರಾಜ್ಯದ ಯುವಕರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಅಂತರಿಕ್ಷದಲ್ಲೂ ಕರ್ನಾಟಕದ ಯುವಕರು ಭಾರತದ ಧ್ವಜವನ್ನು ಹಾರಿಸಿದ್ದಾರೆ. ಇಲ್ಲಿನ ಯುವಕರು ರಾಕೇಟ್ ಮತ್ತು ಉಪಗ್ರಹ ತಯಾರಿಸಿದ್ದಾರೆ.
ಮಂಗಳೂರು: ಪಿಎಂ ಕಿಸಾನ್ ಯೋಜೆಯ ಅಡಿ ನೀಡಲಾದ ಹಣ ಹೆಚ್ಚಿನದಾಗಿ ಮಹಿಳಾ ರೈತರಿಗೆ ದೊರೆತಿದೆ. ಅದೇ ರೀತಿ ಮುದ್ರಾ ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಗೂಡಿಸಲಿನಲ್ಲಿ ವಾಸಿಸುವ ಮಹಿಳೆಯರು ಇಂದು ಲಕ್ಷಾಧಿಪತಿಗಳಾಗಿದ್ದಾರೆ. ದೇಶದ ಮಕ್ಕಳು ಜಿ 20 ಬಗ್ಗೆ ಮಾತನಾಡುತ್ತಿದ್ದಾರೆ. ಜಿ 20ಯಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೆಹಲಿಯಲ್ಲಿ ಈ ಹಿಂದೆ ದೆಹಲಿಯಲ್ಲಿ ಕೂತಿದ್ದ ಸರ್ಕಾರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಿರಲಿಲ್ಲ.
ಮಂಗಳೂರು: ರಾಣಿ ಅಬ್ಬಕ್ಕ ರೀತಿಯ ನಮ್ಮ ಮಹಿಳೆಯರಲ್ಲೂ ಸಾಮರ್ಥ್ಯ ಇದೆ. ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇರಲಿಲ್ಲ. ಮಹಿಳೆಯರಿಗಾಗಿ ಶೌಚಾಲಯ ಇರಲಿಲ್ಲ, ಓದಲು ಶಾಲೆಗಳಿರಲಿಲ್ಲ. ಗ್ಯಾಸ್ ಕೊರತೆ ಇತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ.
ಮಂಗಳೂರು: ವಿಶ್ವದಲ್ಲೇ ಭಾರತದ ಕೀರ್ತಿ ಹೆಚ್ಚುತ್ತಿದೆ. ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ. ಭಾರತದ ಗೌರವ ಜಗತ್ತಿನಾದ್ಯಂತ ಹೆಚ್ಚಿದ್ದು ನಿಮ್ಮ ಮತದಾನದಿಂದ. ನಿಮ್ಮ ಮತದಿಂದ ದೆಹಲಿಯಲ್ಲಿ ಸ್ಥಿರವಾದ ಸರ್ಕಾರ ನಿರ್ಮಾಣವಾಗಿದೆ. ಹೀಗೆ ಕರ್ನಾಟಕದ ಕೀರ್ತಿ ಹೆಚ್ಚಬೇಕಾದರೇ, ದೇಶದ ವಿವಿಧ ರಾಜ್ಯಗಳಲ್ಲಿ ಕರ್ನಾಟಕದ ಜೈಕಾರ ಆಗಬೇಕೆಂದರೇ ಬಿಜೆಪಿಗೆ ಮತ ಹಾಕಿ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ.
ಮಂಗಳೂರು: ಯಾರು ಯಾರು ಅಭಿವೃದ್ದಿ ಬಯಸುತ್ತಾರೋ ಅವರು ಕಾಂಗ್ರೆಸ್ ಅನ್ನು ರಾಜ್ಯದಿಂದ ಹೊರ ಹಾಕಿ. ರಾಜ್ಯ ಕಾಂಗ್ರೆಸ್ನ ಕರಾಳ ಮುಖ ನೋಡಿದೆ. ಕಾಂಗ್ರೆಸ್ ಆಂತಂಕವಾದಿಗಳ ರಕ್ಷಣೆಗೆ ಬೀದಿಗೆ ಇಳಿಯುತ್ತದೆ. ಇದರಿಂದ ರಾಜ್ಯದಲ್ಲಿ ಶಾಂತಿ ನೆಲಸುವುದಿಲ್ಲ. ಕಾಂಗ್ರೆಸ್ ರಿವರ್ಸ್ ಗೇರ್ ಆಗಿದೆ. ರಾಷ್ಟ್ರ ವಿರೋಧಿಗಳ ಮೇಲೆ ಹಾಕಲಾದ ಪ್ರಕರಣಗಳನ್ನು ಕಾಂಗ್ರೆಸ್ ವಾಪಸ್ ಪಡೆದಿದೆ. ಇಡೀ ದೇಶವೆ ನಮ್ಮ ಸೈನಿಕರನ್ನು ಗೌರವಿಸುತ್ತಾದೆ. ಆದರೆ ಕಾಂಗ್ರೆಸ್ ಸೈನಿಕರನ್ನು ಗೌರವಿಸುವುದಿಲ್ಲ. ನಮ್ಮ ಸೈನಿಕರ, ಸೈನ್ಯಕ್ಕೆ ಅಪಮಾನ ಮಾಡುತ್ತದೆ.
ಮಂಗಳೂರು: ಯುವ ಹೊಸ ಮತದಾರರು ಕರ್ನಾಟಕದ ಭವಿಷ್ಯವನ್ನು ನಿರ್ಧಾರ ಮಾಡುತ್ತಾರೆ. ಯುವ ಮತದಾರರು ನಿಮ್ಮ ಭವಿಷ್ಯ ಉಜ್ವಲವಾಗಿರಬೇಕಾದರೇ ಬಿಜೆಪಿಗೆ ಮತ ನೀಡಿ. ಕಾಂಗ್ರೆಸ್ನಿಂದ ಇದು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಅಶಾಂತಿಯನ್ನು ಹುಟ್ಟು ಹಾಕುತ್ತದೆ. ಹಾಗೇ ಅಭಿವೃದ್ಧಿ ವಿರುದ್ಧವಾಗಿದೆ. ಕಾಂಗ್ರೆಸ್ ಆತಂಕವಾದಿಗಳನ್ನು ರಕ್ಷಿಸುತ್ತದೆ. ತುಷ್ಟೀಕರಣ ನೀತಿ ಅನುಸರಿಸುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆ? ರಾಜ್ಯವನ್ನು ಬರಬಾದ್ ಮಾಡಬೇಕೆ? ಹಾಗಿದ್ದರೇ ಕಾಂಗ್ರೆಸ್ಗೆ ಮತ ನೀಡಬೇಡಿ.
ಮಂಗಳೂರು: ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಹಾಗೇ ಕರ್ನಾಟಕವನ್ನು ಎಲ್ಲ ಕ್ಷೇತ್ರಗಳಲ್ಲಿ ನಂಬರ್ ಒನ್ ಮಾಡೋಣ. ರಾಜ್ಯವನ್ನು ವಿಕಾಸ ಕ್ಷೇತ್ರದಲ್ಲಿ ನಂಬರ್ ಒನ್ ಮಾಡೋಣ. ಆದರೆ ಕಾಂಗ್ರೆಸ್ಗೆ ಏನು ಬೇಕಾಗಿದೆ. ಕಾಂಗ್ರೆಸ್ಗೆ ರಾಜ್ಯವನ್ನು ಎಟಿಎಂ ಮಾಡಬೇಕೆಂದಿದೆ. ದೆಹಲಿಯಲ್ಲಿ ಕೂತಿರುವ ಎಟಿಎಂ ಮಾಡಬೇಕೆಂದು ಪ್ಲಾನ್ ಮಾಡಿದೆ. ಕಾಂಗ್ರೆಸ್ ಎಲ್ಲ ಯೋಜನೆಗಳಲ್ಲಿ ಶೇ 85 ರಷ್ಟು ಭ್ರಷ್ಟತೆ ಮಾಡುತ್ತದೆ. ಜೆಡಿಎಸ್ ಕೂಡ ಕಚ್ಚೆ-ಪಂಚೆ ಪಕ್ಷವಾಗಿದೆ.
ಮಗಳೂರು: ಕಾಂಗ್ರೆಸ್ ಮತ ಏಕೆ ಕೇಳುತ್ತಿದ್ದಾರೆ ಅಂದರೇ ಅವರ ಒಬ್ಬ ನಾಯಕ ನಿವೃತ್ತಿ ಹೊಂದುತ್ತಿದ್ದಾರೆ. ಅವರನ್ನು ಗೆಲ್ಲಿಸಲು ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಎಲ್ಲ ಯೋಜನೆಗಳನ್ನು ನಾಶ ಮಾಡಲು ಮತ ಕೇಳುತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.
ಮಂಗಳೂರು: ಕಳೆದ ವರ್ಷ ನನಗೆ ನಾರಾಯಣಗರು ಮಠದ ಶ್ರೀಗಳ ಆರ್ಶಿವಾದ ಪಡೆಯಲು ಅವಕಾಶ ಸಿಕ್ಕಿತು. ಪೂಜ್ಯರ ಆಶಿರ್ವಾದಿಂದ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಸಾಧ್ಯವಾಗಿದೆ. ಕನ್ನಡ ಅನುವಾದಕ್ಕೆ ಜನರು ಬೇಡ ಎಂದಿದ್ದಕ್ಕೆ ನಿಮ್ಮ ಆದೇಶವನ್ನು ತೆಲೆ ಮೇಲೆ ಹೊತ್ತುಕೊಂಡು ಪಾಲಿಸುತ್ತೇವೆ ಎಂದರು. ಕರ್ನಾಟಕವನ್ನು ಉತ್ಪಾದನೆಯ ಅತಿ ದೊಡ್ಡ ಶಕ್ತಿ ರಾಜ್ಯ ಮಾಡುವ ಸಂಕಲ್ಪ ಮಾಡಿದ್ದೇವೆ.
ಮಂಗಳೂರು: ತುಳು ಭಾಷೆಯಲ್ಲಿ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ. ಪರಶುರಾಮ ಕ್ಷೇತ್ರದ, ಮುಲ್ಕಿ ವೆಂಕಟರಮಣ ಸ್ವಾಮೀಜಿಗೆ ನಮಸ್ಕರಿಸಿದರು.
ಮಂಗಳೂರು: ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಸಮಾವೇಶ ಆಯೋಜಿಸಿದೆ. ಸಮಾವೇಶದಲ್ಲಿ ದಕ್ಷಿಣ ಕನ್ನಡ-ಉಡುಪಿಯ 13 ಅಭ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಲಿದ್ದಾರೆ. ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿಜೆಪಿ ಅಭ್ಯರ್ಥಿಗಳಾದ ಸುನೀಲ್ಕುಮಾರ್, ವೇದವ್ಯಾಸ ಕಾಮತ್ ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ್ ಕೋಟ್ಯಾನ್ ರಾಜೇಶ್ ನಾಯ್ಕ್, ಹರೀಶ್ ಪೂಂಜಾ ಸೇರಿ ಹಲವರು ಉಪಸ್ಥಿತರಿದ್ದಾರೆ.
ಮಂಗಳೂರು: ಪಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಮಂಗಳೂರಿಗೆ ಆಗಮಿಸಿದ್ದಾರೆ. ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿಯವರನ್ನು ಬಿಜೆಪಿಯ ವಿವಿಧ ಮಂಡಲಗಳ 25 ಪ್ರಮುಖರು ಸ್ವಾಗತಿಸಿದ್ದಾರೆ. ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದ ವ್ಯಾಪ್ತಿಯ ಮುಲ್ಕಿಯಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ವಿಪಕ್ಷನಾಯಕ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತ. ವಿ ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ. ಇದರಲ್ಲಿ ಯಾವ ಅನುಮಾನಗಳು ಬೇಡ. ವರುಣಾ ಮತ್ತು ಚಾಮರಾಜನಗರ ಎರಡು ಕ್ಷೇತ್ರಗಳಲ್ಲಿ ಸೋಮಣ್ಣ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಎದ್ದಿದೆ. 130 ರಿಂದ 135 ಸ್ಥಾನ ನಾವು ಗೆಲ್ಲುತ್ತೇವೆ. ಸ್ಪಷ್ಟ ಬಹುಮತದಿಂದ ಈ ಬಾರಿ ಸರ್ಕಾರ ರಚಿಸುವುದು ನಿಶ್ಚಿತ. ಸಮಿಶ್ರ ಸರ್ಕಾರಗಳ ಪಾಡನ್ನು ನಾವು ಅನುಭವಿಸಿದ್ದೇವೆ, ನೀವು ನೋಡಿದ್ದೀರಾ. ಈ ಬಾರಿ ಅಂತಹ ಸ್ಥಿತಿ ಬರುವುದಿಲ್ಲ ಎಂದು ಹೇಳಿದರು.
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು (ಮೇ.03) ಜೆಲ್ಲೆಯ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ. ಈ ವೇಳೆ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದಾರೆ.
ಕೊಪ್ಪಳ: ಪ್ರಧಾನಿ ಮೋದಿ ಪ್ರಚಾರದಿಂದ ಬಿಜೆಪಿಗೆ ಬಲ ಬಂದಿದೆ ಎಂಬ ಸಂಸದ ಪ್ರತಾಪಸಿಂಹ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಬಿಜೆಪಿ ಏನೇ ಶ್ರಮ ಹಾಕಿದರೂ ಮೈಸೂರು ಭಾಗದಲ್ಲಿ 10 ಸ್ಥಾನ ಗೆಲ್ಲಲ್ಲ. ಕಳೆದ ಬಾರಿ ಗೆದ್ದ ಕ್ಷೇತ್ರಗಳನ್ನು ಕೂಡ ಬಿಜೆಪಿ ಕಳೆದುಕೊಳ್ಳುತ್ತೆ. ಈ ಬಾರಿ ನಂಜನಗೂಡು, ಗುಂಡ್ಲುಪೇಟೆ, ಮಡಿಕೇರಿಯಲ್ಲಿ ಬಿಜೆಪಿ ಗೆಲ್ಲಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗಳಿಸುತ್ತೆ ನೀವೇ ನೋಡುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರು: ಭಜರಂಗಿ ಬಗ್ಗೆ ಮಾತಾಡುವ ಕಾಂಗ್ರೆಸಿಗರ ನವರಂಗಿ ಆಟ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ರಾಜ್ಯದಲ್ಲಿ ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರಕಾರ ರಚನೆ ಆಗುತ್ತದೆ. ಘಜ್ನಿ ಮಹಮ್ಮದ್, ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವ ಪಠ್ಯ ಬರುತ್ತದೆ. ಕಾಂಗ್ರೆಸ್‌ನವರು ಪಿಎಫ್ ಐ ಬ್ಯಾನ್ ತೆಗೆದು ಬಜರಂಗದಳ ಬ್ಯಾನ್ ಮಾಡುತ್ತಾರೆ. ವಿಪಕ್ಷನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನವರಂಗಿ ಆಟ ಗೊತ್ತು. ಸೀತೆ ಹುಡುಕಿಕೊಂಡು ಹೋದ ಭಜರಂಗಿ ರಾಮನಿಗಾಗಿ ಪರ್ವತವನ್ನೇ ಎತ್ತಿ ಕೊಂಡು ಬಂದ. ಕರ್ನಾಟಕದ ಭಜರಂಗಿಗಳು ಹಿಂದುತ್ವಕ್ಕಾಗಿ, ಗೋ ಮಾತೆಗಾಗಿ ಅದೇ ಪರ್ವತದಡಿ ಕಾಂಗ್ರೆಸ್ ಅನ್ನು ಹೊಸಕಿ ಹಾಕುತ್ತಾರೆ ಕಾಂಗ್ರೆಸ್‌ನವರು ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದರು.
ಮೈಸೂರು: ಇಂದಿನ (ಮೇ.03) ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವರುಣಾ ಕ್ಷೇತ್ರದ ಪ್ರವಾಸ ರದ್ದಾಗಿದೆ.
ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಿಗದಿಯಾಗಿತ್ತು. ಇನ್ನು ಉಳಿದಂತೆ ಮೈಸೂರು ಜಿಲ್ಲೆಯ ವಿವಿಧೆಡೆ ಡಿಕೆ ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಡಿಕೆ ಶಿವಕುಮಾರ್ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ. ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ (ಮೇ.02) ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದರು. ಇಂದು (ಮೇ.03) ಕಲಬುರಗಿ ಏರ್ಪೋರ್ಟ್ಗೆನಿಂದ ಮಂಗಳೂರಿಗೆ ಮೋದಿ ಪ್ರಯಾಣ ಬೆಳಸಲಿದ್ದಾರೆ. ಮಂಗಳೂರಿನ ಮುಲ್ಕಿಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಬಳಿಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ.
ಚಿಕ್ಕಮಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಬಿಜೆಪಿ ನಾಯಕ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತ ಹೇಳಿದ್ದಾರೆ. ತಾಲಿಬಾನಿಗಳಿಗೂ ರಾಷ್ಟ್ರಭಕ್ತರಿಗೂ ವ್ಯತ್ಯಾಸ ಗೊತ್ತಿಲ್ಲದ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ. ಭಯೋತ್ಪಾದಕರನ್ನು ದೇಶಭಕ್ತರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವ ಕಾಂಗ್ರೆಸ್ ಪಕ್ಷದ ಮನಸ್ಥಿತಿಗೆ ನನ್ನ ಧಿಕ್ಕಾರ. ಇದು ಹನುಮನ ನಾಡು ಇಲ್ಲಿ ಹನುಮನನ್ನು ಆರಾಧಿಸುವಂತ ಬಜರಂಗದಳವನ್ನು ಬ್ಯಾನ್ ಮಾಡಲು ಹೊರಟಿದ್ದೀರಾ? ದೇಶಭಕ್ತಿ ಸಂಘಟನೆ ಬ್ಯಾನ್ ಮಾಡಲು ಹೊರಟಿದ್ದೀರಾ? ನಿಮ್ಮ ಆಟ ನಡೆಯುವುದಿಲ್ಲ ನಿಮ್ಮನ್ನು ಜನ ಬ್ಯಾನ್ ಮಾಡುತ್ತಾರೆ ಎಂದು ಹರಿಹಾಯ್ದಿದ್ದಾರೆ.
ಮೈಸೂರು: ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ವರುಣಾದಲ್ಲಿಯೇ 2 ದಿನದ ಹಿಂದೆ ಲಿಂಗಾಯತ ಮುಖಂಡರ ಜೊತೆ ಕೈ ನಾಯಕರು ಸಭೆ ನಡೆಸಿದ್ದರು.
ರಾಮನಗರ: ಜಿಲ್ಲೆಯಲ್ಲಿ ಇಂದು (ಮೇ.03) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ರಾಮನಗರ ಕ್ಷೇತ್ರದ ಹಾರೋಹಳ್ಳಿಯಲ್ಲಿ, ಮಧ್ಯಾಹ್ನ 3ರಿಂದ ಮಾಗಡಿಯಲ್ಲಿ ರೋಡ್ಶೋ ನಡೆಸಲಿದ್ದಾರೆ. ಜೆಪಿ ನಡ್ಡಾ ಅವರಿಗೆ ಸಚಿವ ಅಶ್ವತ್ಥ್ ನಾರಾಯಣ್ ಸಾಥ್ ನೀಡಲಿದ್ದಾರೆ.
ರಾಮನಗರ/ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಳಿ ವಯಸ್ಸಿನಲ್ಲಿ ಪ್ರಚಾರಕ್ಕೆ ಇಳಿದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇಂದು (ಮೇ.03) ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಹೆಚ್ಡಿ ದೇವೇಗೌಡರು ಚನ್ನಪಟ್ಟಣದಲ್ಲಿ ಪುತ್ರ ಹೆಚ್ಡಿ ಕುಮಾರಸ್ವಾಮಿ ಪರ ಮತಯಾಚಿಸಲಿದ್ದಾರೆ.
ಬಳಿಕ ಮೈಸೂರಿನ ಟಿ ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾಸಕ ಅಶ್ವಿನ್ ಕುಮಾರ್ ಪರ ಮತಯಾಚನೆ ಮಾಡಲಿದ್ದಾರೆ.
ಯಾದಗಿರಿ: ನಟ ಕಿಚ್ಚ ಸುದೀಪ್ ಇಂದು ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಶಹಾಪುರ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ಪರ ಪ್ರಚಾರ ಮಾಡಲಿದ್ದಾರೆ. ಸುದೀಪ್ ರೋಡ್ ಶೋ ಬೆಳಗ್ಗೆ 10:30 ಕ್ಕೆ ಆರಂಭವಾಗಲಿದ್ದು, ಸಾವಿರಾರು ಜನ ಸೇರುವ ಸಾಧ್ಯತೆ ಇದೆ.
ವಿಜಯಪುರ: ಇಂದು (ಮೇ.03) ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಇಂಡಿ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಪ್ರಿಯಾಂಕಾ ಗಾಂಧಿ, ಇಂಡಿ ಕ್ಷೇತ್ರದ ಕಾಂಗ್ರೆಸ್ ಆಭ್ಯರ್ಥಿ ಯಶವಂತರಾಯಗೌಡ ಪಾಟೀಲ್ ಪರ ಮತಯಾವಚಿಸಲಿದ್ದಾರೆ. ಪಟ್ಟಣದ ಧನಶೆಟ್ಟಿ ಕಲ್ಯಾಣ ಮಂಟಪದ ಬಳಿಯ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶ ಬಳಿಕ ಹೆಲಿಕಾಪ್ಟರ್ ಮೂಲಕ ಬೀದರ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.
ಕೊಪ್ಪಳ: ಇಂದು (ಮೇ.03) ಕೊಪ್ಪಳದಲ್ಲಿ ಬೆಳಿಗ್ಗೆ 8:30ಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಿನ್ನೆ (ಮೇ.02) ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ಕೊಪ್ಪಳದಲ್ಲಿಯೇ ವಾಸ್ತವ್ಯ ಹೂಡಿದ್ದ, ಹೆಚ್ ಡಿ ಕುಮಾರಸ್ವಾಮಿ, ಇಂದು ಬೆಳಿಗ್ಗೆ ಜೆಡಿಎಸ್ ಅ್ಯಭ್ಯರ್ಥಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.
ಬೆಂಗಳೂರು: ಇಂದು (ಮೇ.03) ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಯಿಂದ ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ.
Published On - 7:01 am, Wed, 3 May 23