ನನ್ನ ನಿರೀಕ್ಷೆ ಹುಸಿಯಾಗಿದೆ, ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ: HD ಕುಮಾರಸ್ವಾಮಿ

ನಾನು‌ ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ಮುಂದಿನ ದಿನಗಳಲ್ಲಿ ನಾವು ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದರು.

ನನ್ನ ನಿರೀಕ್ಷೆ ಹುಸಿಯಾಗಿದೆ, ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ: HD ಕುಮಾರಸ್ವಾಮಿ
ಹೆಚ್​.ಡಿ.ಕುಮಾರಸ್ವಾಮಿ
Follow us
ಗಂಗಾಧರ​ ಬ. ಸಾಬೋಜಿ
|

Updated on: May 18, 2023 | 2:46 PM

ರಾಮನಗರ: ಪಂಚರತ್ನ ಯೋಜನೆಗಳು ರಾಜ್ಯದ ಜನರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಕಾಂಗ್ರೆಸ್​ನ (Congress) ಗ್ಯಾರಂಟಿಗಳನ್ನು ನಂಬಿ ರಾಜ್ಯದ ಜನ ಮತ ಹಾಕಿದ್ದಾರೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ (HD Kumaraswamy) ಹೇಳಿದರು. ಮೈಸೂರು ಭಾಗದಲ್ಲಿ ಜೆಡಿಎಸ್​​ಗೆ ಹೀನಾಯ ಸೋಲು ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಹೆಚ್​​ಡಿ ದೇವೇಗೌಡ 2 ಬಾರಿ ಸೋತ ಬಳಿಕವೂ JDS​​ ಅಧಿಕಾರಕ್ಕೆ ಬಂದಿತ್ತು. ಮುಂದಿನ ದಿನಗಳಲ್ಲಿ ಜನ ಮತ್ತೆ JDS ಬೇಕು ಅಂತಾ ಬಯಸುತ್ತಾರೆ ಎಂದು ಹೇಳಿದರು.

ನಾನು‌ ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ಮುಂದಿನ ದಿನಗಳಲ್ಲಿ ನಾವು ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ ಎಂದರು.

ಇದನ್ನೂ ಓದಿ: DK Shivakumar; ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವುದು ನಮ್ಮ ಬದ್ಧತೆ ಮತ್ತು ಆದ್ಯತೆಯಾಗಿದೆ: ಡಿಕೆ ಶಿವಕುಮಾರ್

ಅದರ ಬಗ್ಗೆ ಚರ್ಚೆ ಬೇಡ ಎಂದ ಕುಮಾರಸ್ವಾಮಿ

ರಾಮನಗರ ಕ್ಷೇತ್ರದಲ್ಲಿ ನಿಖಿಲ್​ ಕುಮಾರಸ್ವಾಮಿಗೆ ಸೋಲು ವಿಚಾರವಾಗಿ ಮಾತನಾಡಿ, ಅದು ಮುಗಿದ ಅಧ್ಯಾಯ, ಅದರ ಬಗ್ಗೆ ಚರ್ಚೆ ಬೇಡ. ಚುನಾವಣೆಯಲ್ಲಿ ಘಟಾನುಘಟಿ ನಾಯಕರೇ ಸೋತಿದ್ದಾರೆ. ವಾಜಪೇಯಿ, ಕೆಸಿಆರ್ ಮೊದಲನೇ ಚುನಾವಣೆಯಲ್ಲಿ ಸೋತಿದ್ದಾರೆ. ಇಂದು ಸೋತಿರಬಹುದು, ಮುಂದಿನ ದಿನಗಳಲ್ಲಿ ಅವರನ್ನು ಬೆಳೆಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಅವರು ನಮಗಿಂತ ದೊಡ್ಡವರು 

ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳು ಕೊಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕುತ್ತಿದ್ದಾರೆ. ನೋಡೊಣ ಮುಂದೆ ಏನ್ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ಆಯ್ಕೆ ಬಳಿಕ ಖಾತೆ ಕ್ಯಾತೆ ಶುರು: ಮತ್ತೆ ದಿಲ್ಲಿಗೆ ಡಿಕೆ ಶಿವಕುಮಾರ್-ಸಿದ್ದರಾಮಯ್ಯ

ಸಿದ್ದರಾಮಯ್ಯಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಡಿಸಿಎಂ ಸ್ಥಾನ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್​​ ಪಕ್ಷದವರು ಸೇರಿ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ. ಇಂದು ಚನ್ನಪಟ್ಟಣ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. ಅದರ ಬಗ್ಗೆ ನಾನೇನೂ ಮಾತನಾಡಲ್ಲ. 5 ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನಕ್ಕೆ ತರುತ್ತಾರೋ ನೋಡಬೇಕು ಎಂದರು.

ಸಿಎಂ ಸ್ಥಾನ ಕೇಳಿದ್ದರಲ್ಲಿ ತಪ್ಪೇನು ಇಲ್ಲ ಎಂದ ಕುಮಾರಸ್ವಾಮಿ

ಡಿಕೆ ಶಿವಕುಮಾರ್​ ಸಿಎಂ ಆಗಬೇಕೆಂದು ಒಕ್ಕಲಿಗ ಶ್ರೀಗಳ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬೇಕು ಅಂತಾ ಹೇಳಿದ್ದಾರೆ. ಸಿಎಂ ಸ್ಥಾನ ಕೇಳಿದ್ದರಲ್ಲಿ ತಪ್ಪೇನು ಇಲ್ಲ. ಯಾರೇ ಸಿಎಂ ಆದರೂ ಒಂದು ಸಮುದಾಯದ ಸಿಎಂ ಆಗಬಾರದು. ಇಡೀ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸುವ ಸಿಎಂ ಆಗಬೇಕು ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ