AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karkala Election Result 2023: ಕಾರ್ಕಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾರ್ಕಳದಲ್ಲಿ ಗುರು, ಶಿಷ್ಯರ ನಡುವೆ ಬಾರಿ ಪೈಪೋಟಿ, ಯಾರಿಗೆ ವಿಜಯಮಾಲೆ

Karkala Assembly Election Result 2023 Live Counting Updates: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್​​ ಕುಮಾರ್​​​ ಹಾಗೂ ಪ್ರತಿಸ್ಪರ್ಧಿ ಪ್ರಮೋದ್ ಮುತಾಲಿಕ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Karkala Election Result 2023: ಕಾರ್ಕಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾರ್ಕಳದಲ್ಲಿ ಗುರು, ಶಿಷ್ಯರ ನಡುವೆ ಬಾರಿ ಪೈಪೋಟಿ, ಯಾರಿಗೆ ವಿಜಯಮಾಲೆ
Karkala Assembly Election Result 2023 Live
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk|

Updated on: May 13, 2023 | 2:46 AM

Share

Karkala Assembly Election Result 2023 Live : ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ (Karkala Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಬಹಳ ಪೈಪೋಟಿ ನಡೆಯುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಈ ಬಾರಿ ಸುನಿಲ್ ಕುಮಾರ್​​ಗೆ ಕಾಂಗ್ರೆಸ್​​ ಪೈಪೋಟಿ ನೀಡುತ್ತಿದೆ, ಕಾರ್ಕಳ ಬಿಜೆಪಿಯ ಭದ್ರಕೋಟೆಯು ಹೌದು ಆದರೆ, ಈ ಬಾರಿ ಹಲವು ವಿವಾದಗಳಿಂದ ಹಾಗೂ ಸುನಿಲ್​​ ಕುಮಾರ್​​ ಬಗ್ಗೆ ಕಾರ್ಕಳ ಜನತೆಯಲ್ಲಿ ಅಷ್ಟೊಂದು ಒಳ್ಳೆಯ ಅಭಿಪ್ರಾಯವಿಲ್ಲ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಕಾರ್ಕಳದಲ್ಲಿ ಸುನಿಲ್​​ ಕುಮಾರ್​ ಅವರ ರಾಜಕೀಯ ಗುರು ಎಂದು ಹೇಳಲಾಗುತ್ತಿದ್ದ ಪ್ರಮೋದ್ ಮುತಾಲಿಕ್ ಕೂಡ ಈ ಬಾರಿ ಚುನಾವಣೆಯಲ್ಲಿ ಶಿಷ್ಯನ ಮುಂದೆ ನಿಂತುಕೊಂಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಕೂಡ ಪ್ರಬಲವಾಗಿದ್ದು, ಸುನಿಲ್​​​ ಕುಮಾರ್​​ಗೆ ಗೆಲ್ಲುವುದು ಕಷ್ಟ ಎಂದು ಹೇಳಲಾಗುತ್ತಿದೆ. ಇನ್ನೂ ಸುನಿಲ್​​​ ಕುಮಾರ್​​ ಸಚಿವರಾಗಿದ್ದಾಗ ಕಾರ್ಕಳಕ್ಕೆ ಅಥವಾ ಉಡುಪಿಗೆ ಹೇಳಿಕೊಳ್ಳವಷ್ಟು ಅಭಿವೃದ್ಧಿ ಕಾರ್ಯ ಅಥವಾ ಶಾಸಕರಾಗಿದ್ದಾಗ ಇದ್ದ ಖಡಕ್​​​ ನಡೆ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಹಿಜಾಬ್​​ ವಿಚಾರವು ಕೂಡ ಇಲ್ಲಿನ ಮುಸ್ಲಿಂ ಮತಗಳು ಸಿಗದೇ ಇರಬಹುದು ಎಂದು ಹೇಳಲಾಗುತ್ತಿದೆ. ಒಟ್ಟಾರೆ ಇಂದು ಸುನಿಲ್​​​ ಕುಮಾರ್ ಭವಿಷ್ಯವನ್ನು ಕಾರ್ಕಳ ಜನತೆ ನಿರ್ಧಾರಿಸಲಿದ್ದಾರೆ. ಗುರು-ಶಿಷ್ಯ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ಲುತ್ತಾರೆ ಎಂದು ಕಾದುನೋಡಬೇಕಿದೆ.

ಇನ್ನೂ ಸುನಿಲ್​​ ಕುಮಾರ್ ಅವರಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ನಿಂತಿರುವುದು ಪ್ರಮೋದ್ ಮುತಾಲಿಕ್​​, ಶಿಷ್ಯನ ವಿರುದ್ಧವೇ ಹಿಂದೂ ಫೈರ್​ ಬ್ರಾಂಡ್​​ ಎನ್ನಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ, ಹಿಂದುತ್ವ ಎಂದು ಓಡಾಡಿದ ಪ್ರಮೋದ್ ಮುತಾಲಿಕ್ ಅವರು ಬಿಜೆಪಿಯಲ್ಲಿ ರಕ್ಷಣೆ ಇಲ್ಲ, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಯಾವುದೇ ಕಾನೂನು ಕ್ರಮವಿಲ್ಲ ಎಂದು ಪ್ರಮೋದ್ ಮುತಾಲಿಕ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಹೀಗಾಗಿ ಸುನಿಲ್​​ ಕುಮಾರ್​ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವುದು ತುಂಬಾ ಕಷ್ಟ ಎಂದು ಹೇಳಲಾಗುತ್ತಿದೆ, ಇನ್ನೂ ಕಾಂಗ್ರೆಸ್​ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಆಪ್ತ ಎಂದು ಹೇಳಲಾಗುತ್ತಿದ್ದ ಉದಯ್​​ ಶೆಟ್ಟಿ ಅವರು ಪೈಪೋಟಿ ನೀಡಲಿದ್ದಾರೆ, ಸುನಿಲ್​​ ಕುಮಾರ್ ಮುಂದೆ ಉದಯ್​​ ಶೆಟ್ಟಿ ಅವರು ಕೂಡ ಪ್ರಬಲ ಅಭ್ಯರ್ಥಿಯಾಗಿದ್ದಾರೆ, ಕಾರ್ಕಳದಲ್ಲಿ ಅವರು ಕೂಡ ಜನಾಪ್ರಿಯತೆಯನ್ನು ಪಡೆದುಕೊಂಡಿದ್ದಾರೆ.

ಇನ್ನೂ ಕಾರ್ಕಳದಲ್ಲಿ ಜೆಡಿಎಸ್​​ನಿಂದ ಶ್ರೀಕಾಂತ್ ಕೊಚ್ಚೂರು ಸ್ಪರ್ಧಿಸುತ್ತಿದ್ದಾರೆ. ಎಎಪಿಯಿಂದ ಡೇನಿಯಲ್​​ ಸ್ಪರ್ಧಿಸುತ್ತಿದ್ದಾರೆ. ಒಟ್ಟಾರೆಯಾಗಿ ಇಲ್ಲಿ ಮತದಾರ ಯಾರ ಕೈಗೆ ವಿಜಯ ಖಡ್ಗವನ್ನು ನೀಡುತ್ತಾನೆ ಎಂದು ಕಾದು ನೋಡಬೇಕಿದೆ.

ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್​, ಬಿಜೆಪಿ ಹಾಗೂ ಹಿಂದೂತ್ವದ ​​ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು